ತಮಿಳುನಾಡು | ಐಟಿ ದಾಳಿ; ಮೊಟ್ಟೆ ಕೇಂದ್ರದಲ್ಲಿ ಲೆಕ್ಕಪತ್ರವಿಲ್ಲದ ₹32 ಕೋಟಿ ನಗದು ವಶ

Date:

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿಯಲ್ಲಿನ ಮೊಟ್ಟೆ ಕೇಂದ್ರವೊಂದರ ಮೇಲೆ ದಾಳಿ ನಡೆಸಿದ್ದಾರೆ. ಲೆಕ್ಕಪತ್ರವಿಲ್ಲದ ಸುಮಾರು 32 ಕೋಟಿ ನಗದನ್ನು ವಶಪಡಿಸಿಕೊಂಡಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಕೋಳಿ ಫಾರಂನಲ್ಲಿ ಪರಿಶೀಲನೆ ನಡೆಸಿದೆ. ಈ ವೇಳೆ, ಸುಮಾರು 32 ಕೋಟಿ ಲೆಕ್ಕ ಪತ್ರವಿಲ್ಲದ ಹಣ ಮೊಟ್ಟೆ ಕೇಂದ್ರದಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಇಲಾಖೆ ಅಧಿಕಾರಿಗಳು ಮೂರು ಬಾಕ್ಸ್‌ಗಳಲ್ಲಿ ಹಣವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಐಟಿ ಅಧಿಕಾರಿಗಳು ಸೋಮವಾರ ಸಂಜೆ ಪೊಲ್ಲಾಚಿಯ ವೆಂಕಟೇಶ ಕಾಲೋನಿಯಲ್ಲಿರುವ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಶೋಧ ಆರಂಭಿಸಿದ್ದಾರೆ. ಮಂಗಳವಾರ 15 ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಸುಮಾರು 32 ಕೋಟಿ ವಶಪಡಿಸಿಕೊಳ್ಳಲಾಗಿದೆ. ದಾಳಿಯ ನಂತರ, ಬ್ಯಾಂಕ್ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಯಿಸಿ ವಶಪಡಿಸಿಕೊಂಡ ಮೊತ್ತವನ್ನು ಎಣಿಸಲಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವೈಮಾನಿಕ ಕೇಂದ್ರವಾಗಿ ಬೆಂಗಳೂರು ಅಭಿವೃದ್ಧಿ; ಏರ್ ಇಂಡಿಯಾ-ಬಿಐಎಎಲ್ ಒಪ್ಪಂದ

ಅಪಾರ ಪ್ರಮಾಣದ ಹಣವನ್ನು ಮತದಾರರಿಗೆ ಹಂಚಲು ಇಡಲಾಗಿದೆಯೇ ಎಂದು ಊಹಿಸಲಾಗಿದೆ. ಐಟಿ ಜತೆಗೆ ಚುನಾವಣಾಧಿಕಾರಿಗಳೂ ತನಿಖೆ ಆರಂಭಿಸಿದ್ದಾರೆ.

“ಪೊಲ್ಲಾಚಿಯ ಸಹೋದರರಾದ ಅರುಲ್ ಮುರುಗನ್ ಮತ್ತು ಸರವಣ ಮುರುಗನ್ ಅವರು ಈ ಕೋಳಿ ಫಾರಂ ಅನ್ನು ನಡೆಸುತ್ತಿದ್ದರು. ಅಲ್ಲದೇ, ಇವರು ರಾಜ್ಯಾದ್ಯಂತ ಹಲವಾರು ಶಾಖೆಗಳನ್ನು ಹೊಂದಿದ್ದಾರೆ” ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...