ಶೀತಮಾರುತಕ್ಕೆ ಸಿಕ್ಕಿ ತತ್ತರಿಸುತ್ತಿರುವ ಉತ್ತರ ಭಾರತ: ಹಿಮಪಾತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

ಉತ್ತರ ಭಾರತದಲ್ಲಿ ಶೀತಮಾರುತ ಹೆಚ್ಚಾಗುತ್ತಿದೆ. ಈ ನಡುವೆ ಮುಂದಿನ ವಾರದಲ್ಲಿ ಉತ್ತರ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ದಟ್ಟವಾದ ಮಂಜು ಮುಂದುವರೆಯುವ ಸಾಧ್ಯತೆಯಿದೆ. ಜತೆಗೆ ಹಿಮಪಾತದ ಅಪಾಯವೂ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಮುಂದಿನ ಕೆಲವು ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ದಟ್ಟವಾದ ಮಂಜು ಆವರಿಸಲಿದೆ. ಬಿಹಾರ, ಜಾರ್ಖಂಡ್, ರಾಜಸ್ಥಾನ ಮತ್ತು ಪೂರ್ವ ಭಾರತದ ಕೆಲವು ಭಾಗಗಳಿಗೆ ಪ್ರತ್ಯೇಕ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನು ಓದಿದ್ದೀರಾ? ಕರ್ನಾಟಕದಲ್ಲಿ ಶೀತಗಾಳಿ: ಎರಡು ದಿನಗಳ ಬಳಿಕ ಮಳೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ ಮಧ್ಯದವರೆಗೆ ಇದೇ ರೀತಿಯ ಹವಾಮಾನ ಇರಲಿದೆ. ಜನವರಿ 5ರಂದು ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಮಧ್ಯಪ್ರದೇಶ ಮತ್ತು ಬಿಹಾರದ ಪ್ರತ್ಯೇಕ ಪ್ರದೇಶಗಳಲ್ಲಿ ಹಗಲಿನಲ್ಲಿ ಶೀತ ಗಾಳಿ ಇರಲಿದೆ. ಪೂರ್ವ ರಾಜಸ್ಥಾನ ಮತ್ತು ಪೂರ್ವ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿಯೂ ಇದೇ ರೀತಿ ಶೀತಮಾರುತ ಇರಲಿದೆ ಎಂದು ಐಎಂಡಿ ಎಚ್ಚರಿಸಿದೆ.

ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಪ್ರತ್ಯೇಕ ಸ್ಥಳಗಳಲ್ಲಿ ಜನವರಿ 5ರಿಂದ 8ರವರೆಗೆ, ಪಶ್ಚಿಮ ರಾಜಸ್ಥಾನದಲ್ಲಿ ಜನವರಿ 5ರಿಂದ 9ರವರೆಗೆ, ಪೂರ್ವ ರಾಜಸ್ಥಾನದಲ್ಲಿ ಜನವರಿ 5ರಿಂದ 10ರವರೆಗೆ ಮತ್ತು ಜಾರ್ಖಂಡ್‌ನಲ್ಲಿ ಜನವರಿ 6 ಮತ್ತು 7ರವರೆಗೆ ಶೀತಗಾಳಿ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇನ್ನು 5 ಮತ್ತು 6ರಂದು ಉತ್ತರಾಖಂಡದಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ.

ಕಳೆದ 24 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್‌ನ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು 0 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ. ಪೂರ್ವ ರಾಜಸ್ಥಾನದ ಸಿಕಾರ್‌ನಲ್ಲಿ ಕನಿಷ್ಠ ತಾಪಮಾನವು 2.5 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...