ವರದಿಗಾರ್ತಿಗೆ ಅವಮಾನಿಸಿದ ಅಣ್ಣಾಮಲೈ: ಪತ್ರಕರ್ತರ ಖಂಡನೆ

Date:

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ತಮಗೆ ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಯೊಬ್ಬರಿಗೆ ತೋರಿದ ವರ್ತನೆ ವಿವಾದವನ್ನು ಹುಟ್ಟುಹಾಕಿದ್ದು, ಇದರಿಂದ ಪತ್ರಕರ್ತರಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.

ಕೊಯಮತ್ತೂರಿನ ಸುದ್ದಿಗೋಷ್ಠಿಯೊಂದರಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿಲ್ಲದಿದ್ದರೆ ನೀವು ಬಿಜೆಪಿಯಲ್ಲೇ ಇರುತ್ತೀರಾ ಎಂದು ವರದಿಗಾರ್ತಿಯೊಬ್ಬರು ಅಣ್ಣಾಮಲೈ ಅವರನ್ನು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಣ್ಣಾಮಲೈ ಈ ಪ್ರಶ್ನೆ ಕೇಳಿದ ವರದಿಗಾರ್ತಿ ತನ್ನ ಬಳಿ ಬಂದು ನಿಂತುಕೊಳ್ಳುವಂತೆ ಕರೆದಿದ್ದಾರೆ. ಟಿವಿ ಮೂಲಕ ತಮಿಳುನಾಡಿನ ಎಂಟು ಕೋಟಿ ಜನತೆಯೂ ಇಂತಹ ಪ್ರಶ್ನೆ ಕೇಳುವುದು ಯಾರು ಎನ್ನುವುದು ನೋಡಲಿ, ನೀವು ಬಂದು ನನ್ನ ಪಕ್ಕದಲ್ಲಿ ನಿಂತುಕೊಳ್ಳಿ ಎಂದು ವರದಿಗಾರ್ತಿಗೆ ಅವಮಾನವಾಗುವಂತೆ ಉತ್ತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬನ್ನಿ ನನ್ನ ಪಕ್ಕದಲ್ಲಿ ನಿಲ್ಲಿ ನನಗೆ ಇಂತಹ ಪ್ರಶ್ನೆಯನ್ನು ಯಾರು ಕೇಳಿದ್ದಾರೆ ಎಂದು ಜನರು ಟಿವಿ ಮೂಲಕ ನೋಡಲಿ. ಪ್ರಶ್ನೆಗಳನ್ನು ಕೇಳಲು ಒಂದು ಮಾರ್ಗವಿದೆ. ಅಂತಹ ಅದ್ಭುತ ಪ್ರಶ್ನೆಯನ್ನು ಕೇಳಿದ ವ್ಯಕ್ತಿ ಎಂಟು ಕೋಟಿ ಜನರಿಗೆ ತಿಳಿದಿರಬೇಕು” ಎಂದು ಅಣ್ಣಾಮಲೈ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೇರಳ | ತಪ್ಪು ಮಾಹಿತಿ ನೀಡಿದ ಗೂಗಲ್‌ ಮ್ಯಾಪ್‌: ಕಾರು ನದಿಗೆ ಉರುಳಿ ಇಬ್ಬರು ವೈದ್ಯರ ಸಾವು

ಅಣ್ಣಾಮಲೈ ಪದೇ ಪದೇ ಮಹಿಳಾ ವರದಿಗಾರ್ತಿಗೆ ಕ್ಯಾಮೆರಾಗಳ ಮುಂದೆ ನಿಲ್ಲುವಂತೆ ಕೇಳಿದ್ದಾರೆ. ಅದಕ್ಕೆ ಸ್ಥಳದಲ್ಲಿದ್ದ ಪತ್ರಕರ್ತರು ಆಕ್ಷೇಪಿಸಿದ್ದಾರೆ.

ವರದಿಗಾರರು ಸರಿಯಾದ ರೀತಿಯಲ್ಲಿ ಪ್ರಶ್ನೆಗಳನ್ನು ಕೇಳಲು ಮಾತ್ರ ಸಲಹೆ ನೀಡುತ್ತಿದ್ದೇನೆ, ಒಳ್ಳೆಯ ಉದ್ದೇಶದಿಂದ ನಾನು ನಿಮಗೆ ಸಲಹೆ ನೀಡುತ್ತಿದ್ದೇನೆ ಸಹೋದರಿ ಎಂದು ಅಣ್ಣಾಮಲೈ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು.

ಅಣ್ಣಾಮಲೈ ಅವರ ಕ್ರಮವನ್ನು ತಮಿಳುನಾಡಿನ ವಿವಿಧ ಪತ್ರಕರ್ತ ಸಂಘಗಳು ತೀವ್ರವಾಗಿ ಖಂಡಿಸಿವೆ. ಪತ್ರಿಕೋದ್ಯಮ ನೀತಿಯನ್ನು ಸಾರುವ ಮೊದಲು ಅಣ್ಣಾಮಲೈ ಅವರು ನಾಯಕರಾಗುವ ನೀತಿಯನ್ನು ಕಲಿತು ಗೌರವಯುತವಾಗಿ ನಡೆದುಕೊಳ್ಳಬೇಕು. ಪತ್ರಿಕೋದ್ಯಮವು ನಾಗರಿಕರು ಮತ್ತು ಸಾರ್ವಜನಿಕ ಜೀವನದಲ್ಲಿ ಇರುವವರ ನಡುವೆ ಸೇತುವೆಯಾಗಿ ನಿಂತಿದೆ ಎಂದು ಕೊಯಮತ್ತೂರು ಪ್ರೆಸ್ ಕ್ಲಬ್ ಅಧ್ಯಕ್ಷ ಎ ಆರ್ ಬಾಬು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...