ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಪರಿಷ್ಕೃತ ದರಗಳಂತೆ ಬೆಲೆಗಳು 25.50 ರೂ. ಹೆಚ್ಚಾಗಿದ್ದು ಇಂದಿನಿಂದಲೇ ಜಾರಿಗೆ ಬರಲಿವೆ.
19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪರಿಷ್ಕೃತ ದರಗಳಂತೆ ದೆಹಲಿಯಲ್ಲಿ 1,795 ರೂ.ಗಳಿಗೆ ಲಭ್ಯವಾಗಲಿದೆ.
ಪರಿಷ್ಕೃತ ದರಗಳಂತೆ ಕೋಲ್ಕತಾದಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ 1,911 ರೂ.ಗಳಿಗೆ ಏರಿಕೆಯಾಗದರೆ, ಮುಂಬೈನಲ್ಲಿ 1,749 ರೂ. ಹಾಗೂ ಚೆನ್ನೈನಲ್ಲಿ 1,960 ರೂ.ಗೆ ಹೆಚ್ಚಳವಾಗಲಿದೆ.
ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪರಿಷ್ಕೃತ ದರ 1,875 ರೂ.ಗಳಿಗೆ ಏರಿಕೆಯಾಗಲಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ





