ಕೋಮುದ್ವೇಷ | ಮುಸ್ಲಿಂ ಬಾಲಕನ ಮೇಲೆ ಪೊಲೀಸರ ಕ್ರೌರ್ಯ; ಕ್ರೂರ ಹಲ್ಲೆ

Date:

ಈದ್‌ ಹಬ್ಬದ ಹಿನ್ನೆಲೆ ಶಾಪಿಂಗ್‌ ಮುಗಿಸಿ ಮನೆಗೆ ಮರುಳುತ್ತಿದ್ದ ಮುಸ್ಲಿಂ ಬಾಲಕನ ಮೇಲೆ ಪೊಲೀಸ್ ಅಧಿಕಾರಿಗಳು ಕ್ರೂರವಾಗಿ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಉತ್ತರಖಂಡದ ರುದ್ರಪುರದಲ್ಲಿ ನಡೆದಿದೆ. ಮಂಗಳವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

14 ವರ್ಷದ ಬಾಲಕ ಆರಿಶ್ ಎಂಬಾತನ ಮೇಲೆ ರಾದ್ರಪುರದ ರಾಮ್‌ಪುರ ಪೊಲೀಸ್‌ ಔಟ್‌ಪೋಸ್ಟ್‌ನಲ್ಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ರಂಜಾನ್ ಉಪವಾಸ ಮಾಡುತ್ತಿದ್ದ ಆರಿಶ್ ಅವರು ಈದ್‌ಗಾಗಿ ಶಾಪಿಂಗ್‌ ಮಾಡಲು ತೆರಳಿದ್ದರು. ಮನೆಗೆ ಮರಳುವಾಗ ಆತನನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ, ಪೊಲೀಸರು ಮದ್ಯಪಾನ ಮಾಡಿದ್ದರು ಮತ್ತು ನಾಗರಿಕ ಉಡುಪಿನಲ್ಲಿದ್ದರು ಎಂದು ಹೇಳಲಾಗಿದೆ.

ಪಾನಮತ್ತರಾಗಿದ್ದ ಪೊಲೀಸರು ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಆತನಿಗೆ ಕೈಕೋಳ ಹಾಕಿ ಕೂರಿಸಿಕೊಂಡು ದೌರ್ಜನ್ಯ ಎಸಗಿದ್ದಾರೆ. ಆತನ ಪೋಷಕರು ಸ್ಥಳಕ್ಕೆ ಬಂದಾಗ, ಆರಿಶ್‌ನನ್ನು ಜೈಲಿಗೆ ಕೊರೆದೊಯ್ಯುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಿಶ್ ತಂದೆ ಅತಿಕ್ ಅವರು ಕೊತ್ವಾಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ಯಾವುದೇ ಕಾರಣವಿಲ್ಲದೆ ಪೊಲೀಸರು ತನ್ನ ಮಗನನ್ನು ವಶಕ್ಕೆ ಪಡೆದು, ಹಿಂಸಿಸುತ್ತಿದ್ದಾರೆ. ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಂತ್ರಸ್ತ ಬಾಲಕ ಆರಿಶ್, “ನಾನು ನನ್ನ ಬೈಕ್‌ನಲ್ಲಿ ಈದ್ ಶಾಪಿಂಗ್ ಮುಗಿಸಿ ಹಿಂತಿರುಗುತ್ತಿದೆ. ಈ ವೇಳೆ, ಪೊಲೀಸರು ನನ್ನನ್ನು ತಡೆದು, ನನ್ನ ಬೈಕ್‌ನ ಕೀಲಿಯಲ್ಲಿ ಕಸಿಕೊಂಡರು. ನನ್ನನ್ನು ಪೊಲೀಸ್ ಔಟ್‌ಪೋಸ್ಟ್‌ಗೆ ಕರೆದೊಯ್ದರು. ಅಲ್ಲಿ ಹಲ್ಲೆ ನಡೆಸಿದರುನಾನು ಧರಿಸಿದ್ದ ಟೋಪಿ ನೋಡಿದ ಬಳಿಕ, ಅವರು ನನಗೆ ಬೆಲ್ಟ್‌ನಿಂದ ಹೊಡೆದರು. ನಾನು ಉಪವಾಸ ಮಾಡುತ್ತಿದ್ದೇನೆ. ಹೊಡೆಯಬೇಡಿ ಎಂದು ಕೇಳಿಕೊಂಡಾಗ, ಇನ್ನೂ ಹೆಚ್ಚು ಹಲ್ಲೆ ಮಾಡಿದರು” ಎಂದು ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: ಭಾರತ ‘ಮುಸ್ಲಿಂ ರಾಷ್ಟ್ರ’ವಾಗಲು ಸಾಧ್ಯವೇ? ಅಸಲಿ ಸಂಗತಿಗಳೇನು?

ಪೊಲೀಸರ ಹಲ್ಲೆಯಿಂದ ಆರಿಶ್‌ ದೇಹದ ಮೇಲೆ ತೀವ್ರವಾದ ಗಾಯಗಳಾಗಿವೆ. ಗಾಯಗಳ ಚಿತ್ರಗಳನ್ನು ಆರಿಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಆರೋಪಿ ಪೊಲೀಸ್‌ ಅಧಿಕಾರಿಗಳನ್ನು ವಿಜಯ್ ಮತ್ತು ಮಹೇಶ್ ಎಂದು ಗುರುತಿಸಲಾಗಿದೆ.

ಘಟನೆಯನ್ನು ಕಾಂಗ್ರೆಸ್ ನಾಯಕರಾದ ಮೋಹನ್ ಖೇಡಾ ಮತ್ತು ಸಂಜಯ್ ಅನುಜಾ ಅವರು ಖಂಡಿಸಿದ್ದಾರೆ. ಕೊತ್ವಾಲಿ ಪೊಲೀಸ್ ಠಾಣೆಗೆ ತೆರಳಿ ಪ್ರಕರಣದ ಬಗ್ಗೆ ವಿಚಾರಿಸಿದ್ದಾರೆ. ತ್ವರಿತ ತನಿಖೆಗೆ ಒತ್ತಾಯಿಸಿದ್ದಾರೆ.

ಅಪ್ರಾಪ್ತ ಬಾಲಕನ ಮೇಲಿನ ಹಲ್ಲೆ ಕುರಿತು ದೂರು ಬಂದರೆ ತನಿಖೆ ಆರಂಭಿಸಲಾಗುವುದು ಎಂದು ರುದ್ರಪುರ ಸಿಒ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಉತ್ತರಖಂಡದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರಂತೆಯೇ ವರ್ತಿಸುತ್ತಾರೆ. ಕೋಮುದ್ವೇಷವನ್ನು ಮೈಗೂಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ. ಅಂತಹ ಆರೋಪಗಳಿಗೆ ರುದ್ರಪುರದ ಘಟನೆ ಮತ್ತಷ್ಟು ಪುಷ್ಟಿ ನೀಡುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...