ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

Date:

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ ಕಾರಣ ಹಳ್ಳಿಯಲ್ಲಿರುವ ಎಲ್ಲಾ ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಭಾರತ-ಚೀನಾ ಗಡಿಯ ಸಮೀಪವಿರುವ ನಿತಿ ಕಣಿವೆಯಲ್ಲಿರುವ ಸುಭಾಯ್ ಗ್ರಾಮದ ಸ್ಥಳೀಯ ಪಂಚಾಯತ್ ಭಾನುವಾರ ಬಹಿಷ್ಕಾರವನ್ನು ಘೋಷಿಸಿದೆ. ಗ್ರಾಮದಲ್ಲಿ ಸುಮಾರು ಅರ್ಧ ಡಜನ್‌ನಷ್ಟು ಪರಿಶಿಷ್ಟ ಜಾತಿ ಕುಟುಂಬಗಳಿದದು ಗ್ರಾಮದಲ್ಲಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬಗಳಲ್ಲಿ ತಮಟೆ ಬಾರಿಸುವ ಪದ್ಧತಿ ಬೆಳೆದುಬಂದಿದೆ.

ಆದರೆ ಪುಷ್ಕರ್ ಲಾಲ್ ಎಂಬವರು ತಮ್ಮ ಪಾಳಿಯ ಸಂದರ್ಭದಲ್ಲಿ ಅನಾರೋಗ್ಯದ ಕಾರಣ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ತಮಟೆ ಬಾರಿಸಲು ಹೋಗಲು ಸಾಧ್ಯವಾಗಿಲ್ಲ. ಈ ಕಾರಣದಿಂದಾಗಿ ಸ್ಥಳೀಯ ಪಂಚಾಯತ್ ಇಡೀ ಸಮುದಾಯಕ್ಕೆ ಗ್ರಾಮದಿಂದ ಸಾಮಾಜಿಕ ಬಹಿಷ್ಕಾರಕ್ಕೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

ಪಂಚಾಯತ್ ಸದಸ್ಯರೊಬ್ಬರು ಬಹಿಷ್ಕಾರವನ್ನು ಘೋಷಿಸಿದ್ದು ಆದೇಶವನ್ನು ಪಾಲಿಸದಿದ್ದರೆ ಇದೇ ರೀತಿಯ ಕಠಿಣ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಪಂಚಾಯತ್ ಆದೇಶದ ಪ್ರಕಾರ, ಎಸ್‌ಸಿ ಕುಟುಂಬಗಳು ಗ್ರಾಮದಲ್ಲಿರುವ ಅರಣ್ಯ ಮತ್ತು ಜಲಮೂಲಗಳನ್ನು ಬಳಸದಂತೆ ತಿಳಿಸಲಾಗಿದೆ. ಅಂಗಡಿಗಳಿಂದ ಅಗತ್ಯ ವಸ್ತುಗಳನ್ನು ಖರೀದಿಸಲು, ವಾಹನಗಳಲ್ಲಿ ಪ್ರಯಾಣಿಸಲು ಮತ್ತು ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ.

ಪ್ರಸ್ತುತ ಬಹಿಷ್ಕಾರಕ್ಕೆ ಒಳಗಾದ ದಲಿತ ಕುಟುಂಬಗಳು ಜೋಶಿಮಠ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ರಾಮಕೃಷ್ಣ ಖಂಡ್ವಾಲ್ ಮತ್ತು ಯಶವೀರ್ ಸಿಂಗ್ ಎಂಬ ಇಬ್ಬರು ಈ ಕೃತ್ಯ ಎಸಗಿರುವುದಾಗಿ ಆರೋಪಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...