ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; 15 ಕಿ.ಮೀ ಸಾಲುಗಟ್ಟಿ ನಿಂತ ವಾಹನಗಳು

Date:

  • ಹಿಮಾಚಲ ಪ್ರದೇಶ ಮಂಡಿ ಮತ್ತು ಕುಲ್ಲು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ
  • ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ

ಹಿಮಾಚಲ ಪ್ರದೇಶ ರಾಜ್ಯದಲ್ಲಿ ದಿಢೀರ್ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು ಸಂಚಾರ ಅಸ್ತವ್ಯಸ್ಥಗೊಂಡು ಪ್ರವಾಸಿಗರು ಪರದಾಡುವಂತಾಗಿದೆ ಎಂದು ಮಾಧ್ಯಮಗಳು ಸೋಮವಾರ (ಜೂನ್ 26) ವರದಿ ಮಾಡಿವೆ.

ರಾಜ್ಯದಲ್ಲಿನ ಮಂಡಿ ಮತ್ತು ಕುಲ್ಲು ನಗರಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿದೆ.

ಇದರಿಂದ 15 ಕಿ.ಮೀವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ತಮ್ಮ ಸ್ಥಳ ತಲುಪಲು ಹಿಮಾಚಲ ಪ್ರದೇಶ ರಾಜ್ಯದಲ್ಲಿ ಹಾದುಹೋಗುತ್ತಿದ್ದ ವಾಹನ ಸವಾರರು ಈಗ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಪ್ರವಾಹದ ಪರಿಸ್ಥಿತಿಯೂ ಉಂಟಾಗಿದೆ. ಇದರಿಂದ ಸುಮಾರು 200 ಪ್ರವಾಸಿಗರಿಗೆ ಹೋಟೆಲ್‌ಗಳಲ್ಲಿ ತಂಗಲು ಕೊಠಡಿಗಳು ಸಿಗದೆ ಪರದಾಡುವಂತಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಗುಡ್ಡಗಾಡು ಪ್ರದೇಶದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಭಾನುವಾರ ಸಂಜೆ ಹಠಾತ್‌ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಿಂದ ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಂಡಿದೆ.

ರಸ್ತೆಗೆ ಉರುಳಿ ಹೆದ್ದಾರಿ ಬಂದ್ ಆಗಲು ಕಾರಣವಾಗಿರುವ ದೊಡ್ಡ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳನ್ನು ಬಳಸಲಾಗುತ್ತಿದೆ. ಇನ್ನೂ ಏಳೆಂಟು ಗಂಟೆಯ ನಂತರ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? 62 ವರ್ಷಗಳ ನಂತರ ದೆಹಲಿ, ಮುಂಬೈ ನಗರಗಳಿಗೆ ಒಟ್ಟಿಗೆ ಆಗಮಿಸಿದ ಮುಂಗಾರು

ಚಂಡೀಗಢ – ಮನಾಲಿ ಹೆದ್ದಾರಿಯಲ್ಲೂ ಬಂಡೆಗಳು ಉರುಳಿದ್ದು, ಅವುಗಳನ್ನು ತೆರವುಗೊಳಿಸಲು ರಾಜ್ಯ ವಿಪತ್ತು ನಿರ್ವಹಣಾ ಘಟಕ ಕಾರ್ಯಾಚರಣೆ ನಡೆಸುತ್ತಿದೆ.

ಹಿಮಾಚಲ ಪ್ರದೇಶ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾನುವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾದ ಭೂಕುಸಿತದಿಂದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿರುವುದರಿಂದ ಪ್ರವಾಸಿಗರು ವಾಹನದಲ್ಲೇ ಸಮಯ ಕಳೆಯುತ್ತಿದ್ದಾರೆ. ಕೆಲವರು ವಾಹನಗಳನ್ನು ಅಲ್ಲಿಯೇ ಬಿಟ್ಟು ಹೋಟೆಲ್‌ಗಳನ್ನು ಹುಡುಕುತ್ತಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...