ಧಾರ್ಮಿಕ ದ್ವೇಷ ಹರಡಿದ ಆರೋಪ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ದೂರು ದಾಖಲು

Date:

ಕೇರಳದ ಯೆಹೋವನ ಸಮಾವೇಶದಲ್ಲಿ ಭಾನುವಾರ(ಅ.29) ನಡೆದ ಸರಣಿ ಸ್ಫೋಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳದ ಎರ್ನಾಕುಲಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಧಾರ್ಮಿಕ ದ್ವೇಷ ಪ್ರಚಾರ ಆರೋಪ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ತೀವ್ರಗಾಮಿ ಅಂಶಗಳ ಬಗ್ಗೆ ಸಹಿಷ್ಣುತೆ ಹೊಂದಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ರಾಜೀವ್ ಚಂದ್ರಶೇಖರ್ ವಿರುದ್ಧ ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೇರಳದ ಯೆಹೋವನ ಸಮಾವೇಶದಲ್ಲಿ ನಡೆದ ಸ್ಪೋಟದ ನಂತರ ರಾಜೀವ್ ಚಂದ್ರಶೇಖರ್ ಅವರು ಈ ಸ್ಪೋಟಕ್ಕೆ ಕೋಮುವಾದಿ ಬಣ್ಣ ಬಳಿಯಲು ತಮ್ಮ ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

Kerala police rajive chandrashekar

“ಕಾಂಗ್ರೆಸ್ ಮತ್ತು ಸಿಪಿಎಂನ ಓಲೈಕೆ ರಾಜಕಾರಣದ ಬೆಲೆಯನ್ನು ಎಲ್ಲಾ ಸಮುದಾಯಗಳ ಮುಗ್ಧರು ಯಾವಾಗಲೂ ಭರಿಸಬೇಕಾಗುತ್ತದೆ. ಕಾಂಗ್ರೆಸ್‌-ಸಿಪಿಎಂ ನಾಚಿಕೆಯಿಲ್ಲದ ತುಷ್ಟೀಕರಣ ರಾಜಕೀಯ ಮಾಡುತ್ತಿವೆ. ಕೇರಳದಲ್ಲಿ ದ್ವೇಷ ಹರಡಲು ಹಮಾಸ್‌ ಅನ್ನು ಬಳಸಿಕೊಳ್ಳಲಾಗುತ್ತಿದೆ. ಕೇರಳದಲ್ಲಿ ಜಿಹಾದ್‌ ನಡೆಸಲು ಕರೆ ನೀಡಲಾಗುತ್ತಿದೆ.ಇದು ಬೇಜವಾಬ್ದಾರಿ ಹುಚ್ಚು ರಾಜಕಾರಣದ ಪರಮಾವಧಿ. ಇದು ಇಲ್ಲಿಗೇ ನಿಲ್ಲಬೇಕಿದೆ.#ಹಮಾಸ್ ಟೆರರಿಸ್ಟ್ಸ್ #ಕೊಚ್ಚಿ ಟೆರರಿಸ್ಟ್ಸ್ ಎಂಬ ಹ್ಯಾಶ್‌ಟ್ಯಾಗ್‌ ಅಡಿಯಲ್ಲಿ” ರಾಜೀವ್‌ ಚಂದ್ರಶೇಖರ್ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಚಲಿಸುತ್ತಿರುವ ರೈಲುಗಳಿಗೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಿದ ನೈರುತ್ಯ ರೈಲ್ವೆ

“ಈ ಹೇಳಿಕೆಯು ಸಂಪೂರ್ಣವಾಗಿ ಕೋಮುವಾದಿ ಮತ್ತು ವಿಷಕಾರಿ ಮನಸ್ಥಿತಿಯ ಪ್ರತಿಫಲನವಾಗಿದೆ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...