ವೈದ್ಯೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

Date:

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ವೈದ್ಯೆಯೊಬ್ಬರ ಹಿಜಾಬ್‌ ಎಳೆದ ಘಟನೆ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಿತೀಶ್‌ ಅವರ ಮಾನಸಿಕ ಸ್ಥಿತಿಗತಿಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಡುವೆ, ನಿತೀಶ್‌ ಕುಮಾರ್ ವಿರುದ್ಧ ಬೆಂಗಳೂರು ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ವಕೀಲ ಓವೈಜ್ ಹುಸೇನ್ ಎಸ್ ಅವರು ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್ ಜನರಲ್ (ಡಿಜಿ ಮತ್ತು ಐಜಿಪಿ) ಎಂ.ಎ ಸಲೀಮ್, ಬೆಂಗಳೂರು ಪೊಲೀಸ್ ಆಯುಕ್ತರು ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದಾರೆ. ನಿತೀಶ್‌ ವಿರುದ್ಧ ಶೂನ್ಯ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಲ್ಲಿ ನಿತೀಶ್‌ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಎಳೆದಿದ್ದಾರೆ. ಅವರ ವಿರುದ್ಧ ಲೈಂಗಿಕ ದೌರ್ಜನ್ಯ, ಒಪ್ಪಿಗೆಯಿಲ್ಲದ ದೈಹಿಕ ಹಸ್ತಕ್ಷೇಪ, ಮಹಿಳೆಯ ಘನತೆಯ ಉಲ್ಲಂಘನೆ, ಸಾರ್ವಜನಿಕ ಅವಮಾನ ಹಾಗೂ ಧಾರ್ಮಿಕ ಘನತೆಯ ಉಲ್ಲಂಘನೆ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಬೇಕೆಂದು ವಕೀಲ ಹುಸೇನ್ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಪಾಕಿಸ್ತಾನಕ್ಕೆ ಸಾಲ ನೀಡಲು ಅಂತಾರಾಷ್ಟ್ರೀಯ ವಿತ್ತ ನಿಧಿ ಹೇರಿದ 11 ಷರತ್ತುಗಳೇನು?

ಸೋಮವಾರ, ಬಿಹಾರದಲ್ಲಿ ನಡೆದ ಕಾರ್ಯಕ್ರಮದ ವಿಡಿಯೋ ವೈರಲ್ ಆಗಿದ್ದು, ನಿತೀಶ್ ಕುಮಾರ್ ಮಹಿಳಾ ವೈದ್ಯರಿಗೆ ಪ್ರಮಾಣಪತ್ರ ನೀಡುವಾಗ ಅವರ ಹಿಜಾಬ್ ತೆಗೆಯುವಂತೆ ಸನ್ನೆ ಮಾಡುತ್ತಿರುವುದು ಕಂಡುಬಂದಿದೆ. ಮಹಿಳೆ ಪ್ರತಿಕ್ರಿಯಿಸುವ ಮೊದಲೇ ನಿತೀಶ್‌ ಅವರು ಹಿಜಾಬ್ ಅನ್ನು ಹಿಡಿದು ಕೆಳಗೆ ಎಳೆಯುತ್ತಿರುವುದು ಕಂಡುಬಂದಿದೆ.

ಹಿಜಾಬ್ ಎಳೆದ ಘಟನೆಗೆ ಸಂಬಂಧಿಸಿದಂತೆ ನಿತೀಶ್‌ ವಿರುದ್ಧ ಬೆಂಗಳೂರು ಮಾತ್ರವಲ್ಲದೆ, ದೇಶದ ನಾನಾ ಭಾಗಗಳಲ್ಲಿ ದೂರು ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...