‘ಸಂಪೂರ್ಣ ಶರಣಾಗತಿ’: ಅಮೆರಿಕ-ಭಾರತ ಒಪ್ಪಂದದ ವಿರುದ್ಧ ಫೆ.12ರಂದು ದೇಶಾದ್ಯಂತ ಪ್ರತಿಭಟನೆ; ಎಸ್‌ಕೆಎಂ ಕರೆ

Date:

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಸಂಯುಕ್ತ ಕಿಸಾನ್ ಮೋರ್ಚಾ (SKM) ಮತ್ತು ಅಖಿಲ ಭಾರತ ಕಿಸಾನ್ ಸಭಾ (AIKS) ತೀವ್ರವಾಗಿ ಖಂಡಿಸಿವೆ. ಟ್ರಂಪ್ ಪ್ರಸ್ತಾಪಿತ ಒಪ್ಪಂದವನ್ನು ಒಪ್ಪಿಕೊಂಡಿರುವ ಮೋದಿ ಅವರು ಸಂಪೂರ್ಣವಾಗಿ ಶರಣಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಜೀನಾಮೆಗೆ ಆಗ್ರಹಿಸಿರುವ ಎಸ್‌ಕೆಎಂ, ವ್ಯಾಪಾರ ಒಪ್ಪಂದದ ವಿರುದ್ಧ ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಗೆ ಕರೆ ನೀಡಿದೆ.

ಅಮೆರಿಕ ಪ್ರಸ್ತಾವಿತ ಮಧ್ಯಂತರ ವ್ಯಾಪಾರ ಒಪ್ಪಂದವು ಅಮೆರಿಕದ ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಭಾರತೀಯ ಕೃಷಿಯನ್ನು ‘ಸಂಪೂರ್ಣ ಶರಣಾಗತಿ’ ಮಾಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದ ವಿರುದ್ಧ ಫೆಬ್ರವರಿ 12ರಂದು ದೇಶಾದ್ಯಂತದ ಹಳ್ಳಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುತ್ತದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಗಳನ್ನು ಸುಡಲಾಗುತ್ತದೆ ಎಂದು ಎಸ್‌ಕೆಎಂ ಹೇಳಿದೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ಕೃಷಿಯ ಮೇಲೆ ದೂರಗಾಮಿ ಪರಿಣಾಮ ಬೀರುತ್ತದೆ. ಭಾರತವು ಸಂಸ್ಕರಿಸಿದ ಆಹಾರ ಮತ್ತು ಧಾನ್ಯಗಳು, ಪಶು ಆಹಾರಕ್ಕಾಗಿ ಕೆಂಪು ಸೋರ್ಗಮ್ ಮತ್ತು ಸೋಯಾಬೀನ್ ಎಣ್ಣೆಯಂತಹ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ತೆರೆಯುತ್ತದೆ. ಡೈರಿ ವಲಯದ ಮೇಲೂ ಪರಿಣಾಮ ಬೀರುತ್ತದೆ” ಎಂದು AIKS ನಾಯಕ ಕೃಷ್ಣ ಪ್ರಸಾದ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಮಕ್ಕಳ ಲೈಂಗಿಕ ಅಪರಾಧಿ Epstein ಜೊತೆಗೆ ರಾಜಮನೆತನಗಳ ಸಂಬಂಧವೇನು ?

“ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ವ್ಯಾಪಾರ ಒಪ್ಪಂದಗಳು ಆ ಎರಡೂ ಕಡೆಯವರ ‘ಸ್ಥಗಿತಗೊಂಡ’ ಆರ್ಥಿಕತೆಗಳಿಗೆ ಪ್ರಯೋಜನವನ್ನು ನೀಡುವ ಉದ್ದೇಶವನ್ನು ಹೊಂದಿವೆಯೇ ಹೊರತು, ಭಾರತದ ಹಿತಾಸಕ್ತಿಗಳಲ್ಲಿಲ್ಲ” ಎಂದು ಅವರು ಹೇಳಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯೂನಿಯನ್ (ಪಂಜಾಬ್) ನಾಯಕ ದರ್ಶನ್ ಪಾಲ್, “ಈಗಾಗಲೇ ಕಡಿಮೆ ಆದಾಯ ಮತ್ತು ಸಾಲದಿಂದ ಬಳಲುತ್ತಿರುವ ರೈತರ ಪರಿಸ್ಥಿತಿಯನ್ನು ಈ ಒಪ್ಪಂದಗಳು ಇನ್ನಷ್ಟು ಹದಗೆಡಿಸುತ್ತದೆ. ತಮ್ಮ ಸಂಘಟನೆಯು ಟ್ರಂಪ್ ಮತ್ತು ಮೋದಿ ಅವರ ಪ್ರತಿಕೃತಿಗಳನ್ನು ದಹಿಸಿ ಪ್ರತಿಭಟನೆ ನಡೆಸಲಿದೆ” ಎಂದು ಹೇಳಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕೈಟ್, “ವಾಣಿಜ್ಯ ಸಚಿವರು ಕೃಷಿ ಮತ್ತು ಡೈರಿ ವಲಯಗಳು ಮುಕ್ತ ವ್ಯಾಪಾರ ಒಪ್ಪಂದಗಳಿಂದ ಹೊರಗಿವೆಯೆಂದು ಸುಳ್ಳು ಹೇಳುತ್ತಿದ್ದಾರೆ. ಅವರು ರೈತರು ಮತ್ತು ಇಡೀ ಜನರಿಗೆ ದ್ರೋಹ ಮಾಡುತ್ತಿದ್ದಾರೆ. ಅವರು ‘ದೇಶದ್ರೋಹಿ’. ಅವರು ತಕ್ಷಣ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಫೆಬ್ರವರಿ 12ರ ಸಾರ್ವತ್ರಿಕ ಮುಷ್ಕರದಲ್ಲಿ ಭಾಗಿಯಾಗುವಂತೆ ಎಲ್ಲ ರಾಜಕೀಯ ಪಕ್ಷಗಳು, ರೈತರು ಹಾಗೂ ಕೃಷಿ ಕಾರ್ಮಿಕರ ಸಂಘಟನೆಗಳು, ಕಾರ್ಮಿಕ ಸಂಘಗಳು ಹಾಗೂ ಎಲ್ಲ ರೀತಿಯ ಸಂಘಟನೆಗಳಿಗೆ ಎಸ್‌ಕೆಎಂ ಕರೆಕೊಟ್ಟಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...