ಗುಜರಾತ್‌ ವಿಮಾನ ದುರಂತ: ಮೃತರ ಸಂಖ್ಯೆಯ ಬಗ್ಗೆ ಹೆಚ್ಚಿದ ಗೊಂದಲ, ಅಧಿಕಾರಿಗಳು ಮೌನ

Date:

ಗುಜರಾತ್ ವಿಮಾನ ದುರಂತ ನಡೆದು ನಾಲ್ಕು ದಿನ ಕಳೆದಿದ್ದು ಇನ್ನೂ ಅಧಿಕೃತ ಸಾವಿನ ಸಂಖ್ಯೆಯನ್ನು ಘೋಷಿಸಿಲ್ಲ. ಮೃತರ ಸಂಖ್ಯೆಯ ಬಗ್ಗೆ ಗೊಂದಲ ಹೆಚ್ಚಾಗುತ್ತಲೇ ಇದೆ. ಆಸ್ಪತ್ರೆಯ ವೈದ್ಯರು 270 ಶವಗಳು ಪತ್ತೆಯಾಗಿದೆ ಎಂದಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಮಾತ್ರ ಮೌನ ಕಾಯ್ದುಕೊಂಡಿದ್ದಾರೆ.

ಏರ್ ಇಂಡಿಯಾ ವಿಮಾನವು 242 ಪ್ರಯಾಣಿಕರನ್ನು ಹೊತ್ತೊಯ್ದಿದೆ. ಈ ಪೈಕಿ ವಿಶ್ವಾಸ್ ಎಂಬ ಓರ್ವ ಪ್ರಯಾಣಿಕ ಮಾತ್ರ ಬದುಕುಳಿದಿರುವುದು. ಈವರೆಗೆ ನಾಲ್ಕು ವೈದ್ಯರು ಮತ್ತು ಒಂಬತ್ತು ನಾಗರಿಕರ ಗುರುತು ದೃಢಪಟ್ಟಿದೆ. ಆದರೆ 272 ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇನ್ನೂ 18 ಜನರ ಪತ್ತೆಹಚ್ಚಲಾಗಿಲ್ಲ.

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ವೈದ್ಯರು ಸೇರಿ ಒಂಬತ್ತು ಮಂದಿ ಸಾವು; ಹಾಸ್ಟೆಲ್ ತೆರವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್‌ನ ಅಹಮದಾಬಾದ್‌ ವಿಮಾನ ದುರಂತದಲ್ಲಿ ಅಧಿಕೃತ ಸಾವಿನ ಸಂಖ್ಯೆಯನ್ನು ಸರ್ಕಾರ ಇನ್ನೂ ಬಹಿರಂಗಪಡಿಸಿಲ್ಲ. ಇದರಿಂದಾಗಿ ಮಾಧ್ಯಮಗಳಲ್ಲಿ ಬೇರೆ ಬೇರೆ ರೀತಿಯ ಮೃತರ ಸಂಖ್ಯೆ ಪ್ರಕಟವಾಗುತ್ತಿದೆ. ಶನಿವಾರ, ಸಿವಿಲ್ ಆಸ್ಪತ್ರೆಯ ಡಾ. ಧವಲ್ ಗಮೇಟಿ ಅವರು 270 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಧ್ಯಮಗಳಿಗೆ ಬಹಿರಂಗಪಡಿಸಿದರು. ಆದರೆ ವಿಮಾನದಲ್ಲಿದ್ದವರ ಸಂಖ್ಯೆ ಮತ್ತು ಹಾಸ್ಟೆಲ್‌ನಲ್ಲಿ ಮೃತಪಟ್ಟವರ ಸಂಖ್ಯೆಯೂ ಇದು ವ್ಯತಿರಿಕ್ತವಾಗಿದೆ.

ಬೋಯಿಂಗ್ 787-8 ಡ್ರೀಮ್‌ಲೈನರ್ 169 ಭಾರತೀಯರು, 53 ಬ್ರಿಟನ್ನರು, 7 ಪೋರ್ಚುಗೀಸ್ ಮತ್ತು 1 ಕೆನಡಿಯನ್ ಸೇರಿದಂತೆ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಅಹಮದಾಬಾದ್‌ನ ಜನನಿಬಿಡ ಪ್ರದೇಶದಲ್ಲಿ ವಿಮಾನ ಪತನಗೊಂಡಾಗ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ 270 ಶವ ಪತ್ತೆಯಾಗಿದೆ ಎಂಬುದು ಗಂಭೀರ ಪ್ರಶ್ನೆಗಳನ್ನು ಹುಟ್ಟಿಹಾಕಿದೆ.

ಡಾ. ಗ್ಯಾಮೆಟಿ ಅವರು ಹೇಳಿದಂತೆ 270 ಜನರ ಅಂಕಿ ಅಂಶ ನಿಖರವಾಗಿದ್ದರೂ 16 ಹೆಚ್ಚುವರಿ ಸಾವುಗಳ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟೀಕರಣವಿಲ್ಲ. ಇದು ಮತ್ತಷ್ಟು ಕಳವಳಕ್ಕೆ ಕಾರಣವಾಗಿದೆ. ಬಿ.ಜೆ. ವೈದ್ಯಕೀಯ ಕ್ಯಾಂಪಸ್‌ನೊಳಗೆ ಕೆಲವು ವೈದ್ಯರು ಮತ್ತು ಹಾಸ್ಟೆಲ್‌ನ ಕಾರ್ಮಿಕರು ನಾಪತ್ತೆಯಾಗಿರಬಹುದು ಎಂಬ ಸುದ್ದಿಯೂ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...