ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

Date:

ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಯ ವಿರುದ್ಧವಾಗಿ ಕಾಂಗ್ರೆಸ್ ಈಗ ದೆಹಲಿ ಹೈಕೋರ್ಟ್‌ನ ಮೆಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ಮನ್‌ಮೋಹನ್ ಮತ್ತು ನ್ಯಾಯಮೂರ್ತಿ ಮನ್‌ಮೀತ್ ಪಿಎಸ್‌ ಅರೋರಾರನ್ನು ಒಳಗೊಂಡ ಪೀಠವು ಈ ಅರ್ಜಿ ವಿಚಾರಣೆಗೆ ಸಮ್ಮತಿಸಿದ್ದು, ಗುರುವಾರ ವಿಚಾರಣೆ ನಡೆಯಲಿದೆ.

ಕಾಂಗ್ರೆಸ್ ಪರ ವಕೀಲರು ಆದಾಯ ತೆರಿಗೆ ಇಲಾಖೆಯು ನಾಲ್ಕು ವರ್ಷಗಳ ಅವಧಿಯ ಆದಾಯ ತೆರಿಗೆಯ ಮರು ಮೌಲ್ಯಮಾಪನ ಪ್ರಕ್ರಿಯೆ ಮತ್ತೆ ಆರಂಭಿಸಿದೆ ಎಂದು ಹೇಳಿದ್ದಾರೆ. ಹಾಗೆಯೇ ಗುರುವಾರವೇ ಈ ಅರ್ಜಿಯ ವಿಚಾರಣೆಯನ್ನು ನಡೆಸುವಂತೆ ಮನವಿ ಮಾಡಿದ್ದು ಕೋರ್ಟ್ ಇದಕ್ಕೆ ಸಮ್ಮತಿ ಸೂಚಿಸಿದೆ.

ಇದನ್ನು ಓದಿದ್ದೀರಾ?  ಆದಾಯ ತೆರಿಗೆಯಿಂದ ರದ್ದಾಗಿದ್ದ ಕಾಂಗ್ರೆಸ್ ಬ್ಯಾಂಕ್ ಖಾತೆಗಳು ಚಾಲ್ತಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ಬೇರೆ ಬೇರೆ ವರ್ಷಗಳ ಆದಾಯ ತೆರಿಗೆಯ ಮರು ಮೌಲ್ಯಮಾಪನವನ್ನು ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದೂ ಕಾಂಗ್ರೆಸ್ ಪರ ವಕೀಲರು ತಿಳಿಸಿದ್ದಾರೆ. ಹಾಗೆಯೇ ಶೀಘ್ರ ವಿಚಾರಣೆಗೆ ಮನವಿ ಮಾಡಿದ್ದಾರೆ. ಇದಕ್ಕೆ ಸಮ್ಮತಿ ಸೂಚಿಸಿದ ನ್ಯಾಯ ಪೀಠವು, “ನಾಳೆ 12.30 ಗಂಟೆಗೆ ಈ ಪ್ರಕರಣದ ವಿಚಾರಣೆ ನಡೆಸಲಾಗುವುದು” ಎಂದಿದೆ.

ಸುಮಾರು 100 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿ ಮಾಡುವಂತೆ ಕಾಂಗ್ರೆಸ್‌ಗೆ ಇತ್ತೀಚೆಗೆ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಆದೇಶಿಸಿದೆ. ಹೈಕೋರ್ಟ್‌ ಈ ಆದೇಶ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದೆ. ಆದಾಯ ತೆರಿಗೆ ಇಲಾಖೆಯು 2018-19ನೇ ಹಣಕಾಸು ವರ್ಷದ ತೆರಿಗೆ 100 ಕೋಟಿ ರೂಪಾಯಿ ಪಾವತಿಸುವಂತೆ ಕಾಂಗ್ರೆಸ್‌ಗೆ ಫೆಬ್ರವರಿ 13ರಂದು ನೋಟಿಸ್ ಕಳುಹಿಸಿತ್ತು. ತೆರಿಗೆ ಅಧಿಕಾರಿಗಳು 199 ಕೋಟಿ ರೂಪಾಯಿಗೂ ಹೆಚ್ಚಿನ ಆದಾಯವನ್ನು ಲೆಕ್ಕ ಹಾಕಿ ಈ ಆದೇಶವನ್ನು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...