ಮಧ್ಯಪ್ರದೇಶದಲ್ಲೂ ಕಾಣಿಸಿಕೊಂಡ `ಪೇ ಸಿಎಂ’ ಪೋಸ್ಟರ್ ವಾರ್!

Date:

  • ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ
  • ಶಿವರಾಜ್ ಸಿಂಗ್‌, ಕಮಲ್‌ನಾಥ್‌ ಕುರಿತು ಆಕ್ಷೇಪಾರ್ಹ ಪೋಸ್ಟರ್‌ಗಳು

ಮಧ್ಯಪ್ರದೇಶ ರಾಜ್ಯದಲ್ಲಿ ಈ ವರ್ಷಾಂತ್ಯ ನಡೆಯುವ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷಗಳ ನಡುವೆ ನಡೆಯುತ್ತಿರುವ ಪೋಸ್ಟರ್‌ ಸಮರ ರಾಜಕೀಯ ಕಣವನ್ನು ಮತ್ತಷ್ಟು ರಂಗೇರಿಸುತ್ತಿದೆ.

ಚುನಾವಣೆ ಪ್ರಚಾರ ಹಿನ್ನೆಲೆ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಇದೀಗ ಕಾಂಗ್ರೆಸ್‌ ಕರ್ನಾಟಕದಂತೆ ರಾಜ್ಯದಲ್ಲೂ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಪೋಸ್ಟರ್‌ ಸಮರ ಆರಂಭಿಸಿದೆ.

ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಚಿತ್ರಗಳಿರುವ ಆಕ್ಷೇಪಾರ್ಹ ಪೋಸ್ಟರ್‌ಗಳು ಮಧ್ಯಪ್ರದೇಶ ರಾಜ್ಯದಲ್ಲಿ ಕಾಣಿಸಿಕೊಂಡ ಮೂರು ದಿನಗಳ ನಂತರ ಈಗ ಮತ್ತೆ ಶಿವರಾಜ್ ಸಿಂಗ್ ಅವರ ಚಿತ್ರ ಹಾಗೂ ಕ್ಯೂಆರ್ ಕೋಡ್ ಇರುವ ಪೋಸ್ಟರ್‌ಗಳು ಕೆಲವೆಡೆ ಕಂಡು ಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚಿತ್ರದೊಂದಿಗೆ ಕ್ಯೂಆರ್ ಕೋಡ್ ಇರುವ ಹಾಗೂ ಕೆಲಸ ಮಾಡಿಸಿಕೊಳ್ಳಬೇಕಾದರೆ 50 ಪರ್ಸೆಂಟ್ ಕಮಿಷನ್ ತನ್ನಿ ಎಂದು ಬರೆದಿರುವ ಪೋಸ್ಟರ್‌ಗಳು ಭೋಪಾಲ್ ಮತ್ತು ಸಿಂಗ್ರೌಲಿಯಲ್ಲಿ ಕಾಣಿಸಿವೆ.

ಮಧ್ಯಪ್ರದೇಶ ಭೋಪಾಲ್‌ನ ಪ್ಲಾಟಿನಂ ಪ್ಲಾಜಾ ಸೇರಿದಂತೆ ನಾನಾ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಅವರ ಪೋಸ್ಟರ್‌ಗಳನ್ನು ಹಾಕಲಾಗಿದೆ. ಇವುಗಳಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಅವರ ಚಿತ್ರವನ್ನು ‘ಫೋನ್‌ಪೇ ಸ್ಕ್ಯಾನರ್’ನ ಮಧ್ಯದಲ್ಲಿ ಅಂಟಿಸಲಾಗಿದೆ.

“50 ಪರ್ಸೆಂಟ್ ತನ್ನಿ, ಕೆಲಸ ಮಾಡಿಸಿಕೊಳ್ಳಿ” ಎಂದು ಪೋಸ್ಟರ್ ಮೇಲೆ ಬರೆಯಲಾಗಿದೆ. ಈ ಪೋಸ್ಟರ್ ಅನ್ನು ಯಾರು ಹಾಕಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಕಾಂಗ್ರೆಸ್‌ನ ಸಂಸದರೊಬ್ಬರು ಈ ಪೋಸ್ಟರ್‌ ಅನ್ನು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಕಾಂಗ್ರೆಸ್‌ ಪಕ್ಷವು ತನ್ನ ಸಾಮಾಜಿಕ ಮಾಧ್ಯಮಗಳ ಖಾತೆಗಳ ಮೂಲಕ ಈ ಕುರಿತು ಪ್ರಚಾರ ನಡೆಸುತ್ತಿದೆ.

ಮಧ್ಯಪ್ರದೇಶ ರಾಜ್ಯದಲ್ಲಿ ಈ ಹಿಂದೆ ಜೂನ್ 23ರಂದು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಇದೇ ರೀತಿಯ ಪೋಸ್ಟರ್‌ಗಳನ್ನು ಹಾಕಲಾಗಿತ್ತು. ಇದರಲ್ಲಿ ಅವರನ್ನು ‘ಬೇಕಾಗಿದ್ದಾರೆ’ ಮತ್ತು ‘ಭ್ರಷ್ಟನಾಥ’ ಎಂದು ಬರೆಯಲಾಗಿತ್ತು.

ಇದರಲ್ಲೂ ಕ್ಯೂ ಆರ್ ಕೋಡ್ ಹಾಕಿ ಅದರ ಮೇಲೆ ಕಮಲ್‌ನಾಥ್‌ ಚಿತ್ರ ಹಾಕಲಾಗಿತ್ತು. ಕಾಂಗ್ರೆಸ್ ಸರ್ಕಾರದ 15 ತಿಂಗಳಿಂದ ಈಡೇರದ ಭರವಸೆಗಳ ಬಗ್ಗೆ ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ತೋರಿಸುತ್ತದೆ ಎಂದು ಹೇಳಲಾಗಿತ್ತು.

ಈ ಪೋಸ್ಟರ್‌ಗಳು ಬಿಜೆಪಿಯ ಕುತಂತ್ರ ಎಂದು ಕಾಂಗ್ರೆಸ್ ಬಣ್ಣಿಸಿತ್ತು. ಇದಾದ ಬಳಿಕ ಸಂಜೆ ವೇಳೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ, ಕ್ಯೂ ಆರ್ ಕೋಡ್ ಇರುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಕರ್ನಾಟಕದಲ್ಲಿ ನಡೆದಿದ್ದ ‘ಪೇ ಸಿಎಂ’ ಪೋಸ್ಟರ್ ಸಮರ

ಮಧ್ಯಪ್ರದೇಶ ರಾಜ್ಯದಲ್ಲಿ ನಡೆಯುತ್ತಿರುವ ಪೋಸ್ಟರ್ ಸಮರಕ್ಕೆ ಕರ್ನಾಟಕದ ವಿಧಾನಸಭೆ ಚುನಾವಣೆ ವೇಳೆ ನಡೆದಿದ್ದ ‘ಪೇ ಸಿಎಂ’ ಪೋಸ್ಟರ್ ಸಮರವೇ ಸ್ಪೂರ್ತಿ ಎಂದು ಹೇಳಲಾಗಿದೆ.

ಪ್ರಚಾರದ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರ ಹಾಕಿ ‘ಪೇ ಸಿಎಂ’ ಎಂಬ ಕ್ಯೂಆರ್ ಕೋಡ್ ಪೋಸ್ಟರ್‌ಗಳನ್ನು ಕಾಂಗ್ರೆಸ್ ಪಕ್ಷ ವ್ಯಾಪಕವಾಗಿ ಪ್ರಚಾರ ಮಾಡಿತ್ತು.

ಇದು ಆಗಿನ ಬಿಜೆಪಿ ಸರ್ಕಾರಕ್ಕೆ ಭಾರೀ ಮುಜುಗರ ಉಂಟು ಮಾಡಿತ್ತು. ಈಗ ಮಧ್ಯಪ್ರದೇಶ ರಾಜ್ಯದಲ್ಲಿ ಚುನಾವಣೆಗಳು ಹತ್ತಿರವಾಗುತ್ತಿರುವ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಚಿತ್ರಗಳಿರುವ ಕ್ಯೂ ಆರ್ ಕೋಡ್ ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಈ ಸುದ್ದಿ ಓದಿದ್ದೀರಾ? ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; 15 ಕಿ.ಮೀ ಸಾಲುಗಟ್ಟಿ ನಿಂತ ವಾಹನಗಳು

ಮಧ್ಯಪ್ರದೇಶದ ‘ಶೇ 50 ಕಮಿಷನ್ ಸರ್ಕಾರ’ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುವ ಸುದ್ದಿಗಳೊಂದಿಗೆ ಫೋನ್ಪೇ ಸಂಬಂಧ ಹೊಂದಿಲ್ಲ. ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳೊಂದಿಗೆ ರಾಜಕೀಯ ಸಂಬಂಧ ಇಲ್ಲ ಫೋನ್‌ಪೇ ವಕ್ತಾರರು ತಿಳಿಸಿದ್ದಾರೆ.

ಈ ವರ್ಷದ ಕೊನೆಯಲ್ಲಿ ಅಂದರೆ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...