4 ರಾಜ್ಯಗಳ ಚುನಾವಣಾ ಫಲಿತಾಂಶ: ಡಿ.6ರಂದು ‘ಇಂಡಿಯಾ’ ಒಕ್ಕೂಟದ ಸಭೆ ಕರೆದ ಖರ್ಗೆ

Date:

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡ ನಂತರ ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ತನ್ನ ಒಕ್ಕೂಟದ ಪಕ್ಷಗಳ ನಾಯಕರಿಗೆ ಡಿಸೆಂಬರ್‌ 6ರಂದು ನಡೆಯುವ ಸಭೆಗೆ ಆಹ್ವಾನಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖ ಪಕ್ಷಗಳ ನಾಯಕರಾದ  ಡಿಎಂಕೆ, ತೃಣಮೂಲ ಕಾಂಗ್ರೆಸ್ ಸೇರಿದಂತೆ ಮೈತ್ರಿ ಪಕ್ಷದ ನಾಯಕರನ್ನು ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಸಭೆ ಸೇರಿ ಮುಂದಿನ ಲೋಕಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಇಂಡಿಯಾ ಬಣದ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಡಿಯಾ ಬಣದಲ್ಲಿ ಬಿಜೆಪಿ ವಿರುದ್ಧ 28 ಪಕ್ಷಗಳು ಒಗ್ಗೂಡಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದು ಈ ಬಣದ ಪ್ರಮುಖ ಗುರಿಯಾಗಿದೆ.ಇಂಡಿಯಾ ಒಕ್ಕೂಟದ ನಾಯಕರು ದೇಶದ ವಿವಿಧೆಡೆ ಜಂಟಿ ರ್‍ಯಾಲಿ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ ವಿಧಾನಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಅದಕ್ಕೆ ತಾತ್ಕಾಲಿಕವಾಗಿ ಮುಂದೂಡಲಾಯಿತು.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್‌ಡಿಎ ಒಕ್ಕೂಟವನ್ನು ಎದುರಿಸಲು ಜುಲೈ 2023 ರಲ್ಲಿ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು ರಚಿಸಲಾಯಿತು.

‘ಇಂಡಿಯಾ’ವು ಒಕ್ಕೂಟದ ಕೊನೆಯ ಸಭೆಯನ್ನು ಮುಂಬೈನಲ್ಲಿ ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಆಯೋಜಿಸಿದ್ದರು ಮತ್ತು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಐದು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಹಾಜರಿದ್ದರು.

ಎರಡು ದಿನಗಳ ಕಾಲ ನಡೆದ ಚರ್ಚೆಗಳಲ್ಲಿ, ಒಕ್ಕೂಟದ ನಾಯಕರು ಮುಂಬರುವ ಸಾರ್ವತ್ರಿಕ ಚುನಾವಣೆಗಳಲ್ಲಿ ಕಾರ್ಯತಂತ್ರ ರೂಪಿಸುವ ಬಗ್ಗೆ ಸಮನ್ವಯ ಸಮಿತಿಯನ್ನು ರಚಿಸಿತು. ಅಲ್ಲದೆ 2024 ರ ಲೋಕಸಭಾ ಚುನಾವಣೆಗಳನ್ನು ‘ಸಾಧ್ಯವಾದಷ್ಟು’ ಒಟ್ಟಾಗಿ ಹೋರಾಡಲು ಮೂರು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...