ಅಸ್ಸಾಂ | ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಸಂಸದ

Date:

​ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ಗೆ ಹಿನ್ನಡೆ ಉಂಟಾಗಿದೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಕೇವಲ ಒಂದು ದಿನದ ಬಳಿಕ, ಹಾಲಿ ಸಂಸದ ಪ್ರದ್ಯುತ್ ಬೊರ್ಡೊಲೊಯಿ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

​ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಪ್ರದ್ಯುತ್ ಅವರು ಕಮಲ ಪಾಳಯವನ್ನು ಸೇರಿದರು.

​ಈ ಬೆಳವಣಿಗೆಯನ್ನು ಖಚಿತಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ, “ಹಾಲಿ ಕಾಂಗ್ರೆಸ್ ಸಂಸದರು ಇಂದು ಬಿಜೆಪಿ ಸೇರಿದ್ದಾರೆ. ಪ್ರದ್ಯುತ್ ಬೊರ್ಡೊಲೊಯಿ ಓರ್ವ ಹಿರಿಯ ಸಂಸದರಾಗಿದ್ದು, ಅವರ ಸೇರ್ಪಡೆಯು ಪಕ್ಷಕ್ಕೆ ಖಂಡಿತವಾಗಿಯೂ ಆನೆಬಲ ತಂದಿದೆ” ಎಂದರು. ಅಲ್ಲದೆ, ಬೊರ್ಡೊಲೊಯಿ ಅವರ ಸೇರ್ಪಡೆಗೆ ರಾಷ್ಟ್ರೀಯ ನಾಯಕತ್ವವು ಒಂದು ದಿನದ ಹಿಂದೆಯೇ ಒಪ್ಪಿಗೆ ಸೂಚಿಸಿತ್ತು ಮತ್ತು ಅವರ ಪ್ರಸ್ತುತ ಸಂಸದೀಯ ಅವಧಿಯು ಇನ್ನೂ ಮೂರು ವರ್ಷಗಳ ಕಾಲ ಬಾಕಿ ಇದೆ ಎಂಬುದನ್ನು ಶರ್ಮಾ ಉಲ್ಲೇಖಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಸಾಂನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ಬಿಜೆಪಿ ಸೇರಿದ ಒಂದು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಈ ಬೆಳವಣಿಗೆ ನಡೆದಿದೆ. ಬೊರ್ಡೊಲೊಯಿ ಅವರ ನಿರ್ಗಮನದೊಂದಿಗೆ, ಅಸ್ಸಾಂನಲ್ಲಿ ಕಾಂಗ್ರೆಸ್ ತನ್ನ ಮೂವರು ಲೋಕಸಭಾ ಸಂಸದರಲ್ಲಿ ಒಬ್ಬರನ್ನು ಕಳೆದುಕೊಂಡಂತಾಗಿದೆ.

ಇದನ್ನು ಓದಿದ್ದೀರಾ? ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ನಗಾಂವ್‌ನಿಂದ ಎರಡು ಬಾರಿ ಸಂಸದರಾಗಿರುವ ಮತ್ತು ಮಾಜಿ ಸಿಎಂ ತರುಣ್ ಗೊಗೊಯ್ ಸರ್ಕಾರದಲ್ಲಿ ಸಚಿವರಾಗಿದ್ದ ಬೊರ್ಡೊಲೊಯಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದರು. “ತೀವ್ರ ದುಃಖದಿಂದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಹಾಗೂ ಎಲ್ಲಾ ಹುದ್ದೆಗಳು ಮತ್ತು ಸವಲತ್ತುಗಳಿಗೆ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದರು.

ಈ ಬೆಳವಣಿಗೆಯ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕರು ಭಿನ್ನಾಭಿಪ್ರಾಯ ಎಂದು ಕರೆದಿದೆ. ಅಸ್ಸಾಂ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಮಾತನಾಡಿ, “ಬೊರ್ಡೊಲೊಯಿ ಅವರ ರಕ್ತದಲ್ಲಿಯೇ ಕಾಂಗ್ರೆಸ್ ಹರಿಯುತ್ತಿದೆ. ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು ಮತ್ತು ಮುಂದೆಯೂ ಹಾಗೆಯೇ ಇರುತ್ತೇವೆ” ಎಂದಿದ್ದಾರೆ.

​ಮತ್ತೊಂದೆಡೆ, ಬೊರ್ಡೊಲೊಯಿ ಅವರನ್ನು ರಾಜಕೀಯವಾಗಿ ಗುರಿಯಾಗಿಸುವ ಯತ್ನಗಳು ನಡೆಯುತ್ತಿವೆ ಮತ್ತು ಅವರ ತೇಜೋವಧೆ ಮಾಡಲು ಇಂತಹ ಬೆಳವಣಿಗೆಗಳನ್ನು ವೈಭವೀಕರಿಸಲಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ಬೊರ್ಡೊಲೊಯಿ ಅವರ ನಿರ್ಗಮನವು ಆಂತರಿಕ ಭಿನ್ನಾಭಿಪ್ರಾಯಗಳಿಗೆ ಸಂಬಂಧಿಸಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸುಳಿವು ನೀಡಿದ್ದಾರೆ. “ಟಿಕೆಟ್ ಹಂಚಿಕೆ ವಿಚಾರದಲ್ಲಿ ಅವರು ಅಸಮಾಧಾನಗೊಂಡಿದ್ದರು. ಇದು ದುರದೃಷ್ಟಕರ” ಎಂದು ಅವರು ಹೇಳಿದ್ದಾರೆ. ತಮ್ಮ ಪ್ರಭಾವದ ಕ್ಷೇತ್ರಗಳಲ್ಲಿ ಕೆಲವು ನಾಯಕರಿಗೆ ಮರು ಟಿಕೆಟ್ ನೀಡುವ ಸಾಧ್ಯತೆಯ ಬಗ್ಗೆ ಬೊರ್ಡೊಲೊಯಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ತಲೆದೋರಿದ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...