ಚುನಾವಣಾ ಆಯುಕ್ತರ ನೇಮಕ ಆಯ್ಕೆ ಸಮಿತಿಯಿಂದ ಸಿಜೆಐ ಹೊರಗೆ: ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್

Date:

ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಹಾಗೂ ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸೇವಾ ಷರತ್ತುಗಳನ್ನು ನಿಯಂತ್ರಿಸುವುದಕ್ಕಾಗಿ ಇತ್ತೀಚೆಗೆ ಜಾರಿಗೆ ತಂದ ಕಾಯಿದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನೂತನ ಕಾಯಿದೆಯು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ತತ್ವವನ್ನು ಉಲ್ಲಂಘಿಸುತ್ತದೆ. ಏಕೆಂದರೆ ಇದು ಚುನಾವಣಾ ಆಯೋಗದ ಸದಸ್ಯರ ನೇಮಕಾತಿಗೆ “ಸ್ವತಂತ್ರ ಕಾರ್ಯವಿಧಾನವನ್ನು” ಒದಗಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕರಾದ ಡಾ. ಜಯಾ ಠಾಕೂರ್ ಮತ್ತು ಸಂಜಯ್ ನಾರಾಯಣರಾವ್ ಮೆಶ್ರಮ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ವಾದಿಸಲಾಗಿದೆ.

ಭಾರತದ ಚುನಾವಣಾ ಆಯೋಗದ ಆಯುಕ್ತರ ನೇಮಕಾತಿಯ ಪ್ರಕ್ರಿಯೆಯನ್ನು ವಿವರಿಸುವ ಕಾಯಿದೆಯ ಸೆಕ್ಷನ್ 7 ಮತ್ತು 8 ನ್ನು ಅರ್ಜಿಯು ನಿರ್ದಿಷ್ಟವಾಗಿ ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

ಕೇಂದ್ರ ಚುನಾವಣಾ ಆಯೋಗದ ಸದಸ್ಯರ ನೇಮಕದಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನು ಸೇರ್ಪಡೆಗೊಳಿಸದಿರುವುದು ಅನೂಪ್‌ ಬರ್ನಾವಾಲಾ ವರ್ಸಸ್‌ ಕೇಂದ್ರ ಸರ್ಕಾರದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌  ನೀಡಿರುವ  ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ತಿಳಿಸಿದ್ದಾರೆ

ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರ (ನೇಮಕಾತಿ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ- 2023ರ ಪ್ರಕಾರ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ಹುದ್ದೆಗಳನ್ನು ಪ್ರಧಾನಿ, ಕೇಂದ್ರ ಸಂಪುಟ ಸಚಿವರು ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿ ನೇಮಕ ಮಾಡಬಹುದಾಗಿದೆ.

ಮಸೂದೆಯನ್ನು ಕಳೆದ ತಿಂಗಳು ಸಂಸತ್ತು ಅಂಗೀಕರಿಸಿತ್ತು. ಡಿಸೆಂಬರ್ 29, 2023ರಂದು ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...