ಹಾಥರಸ್ ಕಾಲ್ತುಳಿತ ದುರಂತ: ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

Date:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ.

ಶುಕ್ರವಾರ ಮುಂಜಾನೆ ದೆಹಲಿಯಿಂದ ಹಾಥರಸ್‌ಗೆ ರಸ್ತೆ ಮೂಲಕ ಅಲಿಗಢ್‌ನ ಪಿಲಾಖ್ನಾ ಗ್ರಾಮಕ್ಕೆ ರಾಹುಲ್‌ ಗಾಂಧಿ ತೆರಳಿದರು. ವಿಪಕ್ಷ ನಾಯಕರ ಜೊತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನೇತ್ ಮತ್ತು ಇತರ ಪದಾಧಿಕಾರಿಗಳು ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ, ರಾಹುಲ್ ಗಾಂಧಿ ಅವರು ಇಂದು ಹಾಥರಸ್‌ನಲ್ಲಿ ಮೃತಪಟ್ಟ ವಿವಿಧ ಗ್ರಾಮಗಳಲ್ಲಿರುವ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಹಾಥರಸ್‌ ಘಟನೆಯು ಉತ್ತರ ಪ್ರದೇಶ ಸರ್ಕಾರದ ವೈಫಲ್ಯವಾಗಿದೆ. ನಿನ್ನೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹಾಥರಸ್‌ಗೆ ಭೇಟಿ ನೀಡಿದ್ದರು. ನಂತರ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಕೂಡ ಅಲ್ಲಿಗೆ ಹೋಗಿದ್ದರು. ಆದರೆ ಇಬ್ಬರು ಒಟ್ಟಿಗೆ ಹೋಗಲಿಲ್ಲ. ಇದು ಸರ್ಕಾರದ ಆಂತರಿಕ ಕಚ್ಚಾಟವನ್ನು ತೋರಿಸುತ್ತದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಾಥರಸ್‌ನಲ್ಲಿ ಜುಲೈ 2 ರಂದು ಸತ್ಸಂಗದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಸಾವನ್ನಪ್ಪಿದ 121 ಜನರಲ್ಲಿ 17 ಮಂದಿ ಅಲಿಗಢದವರು ಮತ್ತು 19 ಜನರು ಹಾಥರಸ್‌ನವರಾಗಿದ್ದಾರೆ.

ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಸತ್ಸಂಗ ಹಮ್ಮಿಕೊಳ್ಳಲಾದ ಆಯೋಜನೆಯ ಸದಸ್ಯರಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ನಾರಾಯಣ್‌ ಸಾಕಾರ್‌ ಹರಿ ಎಂಬಾತ ಹಮ್ಮಿಕೊಂಡಿದ್ದ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಬಹುತೇಕ ಮಹಿಳೆಯರು ಒಳಗೊಂಡು ಒಟ್ಟು 121 ಮಂದಿ ಮೃತಪಟ್ಟು, 31 ಮಂದಿ ಗಾಯಗೊಂಡಿದ್ದರು.

ಅಲಿಘಢ ಐಜಿ ಶಲಭ್‌ ಮಾತೂರ್‌ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಒಳಗೊಂಡು 6 ಮಂದಿಯನ್ನು ಬಂಧಿಸಲಾಗಿದೆ. ಎಲ್ಲ ಸದಸ್ಯರು ಸಂಘಟನಾ ಸಮಿತಿ ಹಾಗೂ ಸೇವಾದಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಮಳೆ ಹೊಯ್ಯುತಿದೆ, ಡೆಂಘೀ ಹರಡುತಿದೆ- ಆರೋಗ್ಯ ಇಲಾಖೆ ಏನು ಮಾಡುತ್ತಿದೆ?

ಈ ನಡುವೆ ಮುಖ್ಯ ಸೇವದಾರನಾದ ದೇವ್‌ ಪ್ರಕಾಶ್‌ ಮಧುಕರ್‌ ಎಂಬಾತನನ್ನು ಮುಖ್ಯ ಆರೋಪಿ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಈತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಲಾಗಿದ್ದು, ಮಧುಕರ್‌ ಬಗ್ಗೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಮಾತೂರ್‌ ತಿಳಿಸಿದ್ದಾರೆ.

ಸತ್ಸಂಗದಲ್ಲಿ 2.50 ಲಕ್ಷ ಮಂದಿ ಭಾಗಿಯಾಗಿದ್ದು, ಜಿಲ್ಲಾಡಳಿತ 80 ಸಾವಿರ ಜನರಿಗಷ್ಟೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...