ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಎರಡು ದಿನ ಪ್ರಚಾರದಿಂದ ನಿಷೇಧ ಹೇರಿದೆ.
ಆಯೋಗದ ಆದೇಶದ ಹಿನ್ನೆಲೆಯಲ್ಲಿ ಸುರ್ಜೇವಾಲ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳವರೆಗೂ ಯಾವುದೇ ರ್ಯಾಲಿ ಅಥವಾ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ.
“ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಸಂಬಂಧಿತ ವಿಷಯಗಳಿಗೆ ಸುರ್ಜೇವಾಲ ಅವರಿಗೆ ಆಯೋಗವು ನೋಟಿಸ್ ನೀಡುತ್ತದೆ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಸುರ್ಜೇವಾಲ ಅವರು ಗೌರವಕ್ಕೆ ಕುಂದು ತರುವಂತ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಚುನಾವಣಾ ಆಯೋಗವು ಬಲವಾಗಿ ಖಂಡಿಸುತ್ತದೆ” ಎಂದು ಚುನಾವಣಾ ಆಯೋಗ ನೋಟಿಸ್‌ನಲ್ಲಿ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?
“ಈ ಹಿನ್ನೆಲೆಯಲ್ಲಿ ಸಂವಿಧಾನದ 324ನೇ ವಿಧಿಯಡಿ ಆಯೋಗವು ಸುರ್ಜೇವಾಲ ಅವರಿಗೆ ಸಾರ್ವಜನಿಕ ಸಭೆಗಳು, ಮೆರವಣಿಗೆಗಳು ರ್ಯಾಲಿಗಳು ಹಾಗೂ ಸಂದರ್ಶನ ಒಳಗೊಂಡ ಯಾವುದೇ ಪ್ರಚಾರದಲ್ಲಿ ಮುಂದಿನ 24 ಗಂಟೆಗಳ ಕಾಲ ತೊಡಗುವಂತಿಲ್ಲ” ಎಂದು ಹೇಳಿದೆ.
ಈ ಲೋಕಸಭಾ ಚುನಾವಣೆಯಲ್ಲಿ ಸುರ್ಜೇವಾಲ ಅವರು ಆಯೋಗದಿಂದ ನಿಷೇಧಗೊಂಡ ಮೊದಲ ರಾಜಕಾರಣಿಯಾಗಿದ್ದಾರೆ.
ಬಿಜೆಪಿ ಸಂಸದೆ ಹೇಮಾಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ ನೀಡಿದ್ದ ನಂತರ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರು ಕ್ಷಮೆಯಾಚಿಸಿದ್ದರು.





