ಜಾರ್ಖಂಡ್ | ಕಾಂಗ್ರೆಸ್‌ನ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Date:

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಸ್‌ಟಿ ಮೀಸಲು ಕ್ಷೇತ್ರ ಲೋಹಾರದಂಗದಿಂದ ಹಣಕಾಸು ಸಚಿವ ರಾಮೇಶ್ವರ ಓರಾನ್ ಅವರನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ತ್ರಿಪುರಾ, ಒಡಿಶಾ ಹಾಗೂ ನಾಗಾಲ್ಯಾಂಡ್‌ನಲ್ಲಿ ಪಕ್ಷದ ಉಸ್ತುವಾರಿಯಾಗಿರುವ ಅಜಯ್ ಕುಮಾರ್ ಅವರು ಜೆಮ್‌ಶೆಡ್‌ಪುರ್‌ ಪೂರ್ವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಅಜಯ್ ಕುಮಾರ್ ಅವರು ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಈ ಹಿಂದೆ ಜೆಮ್‌ಶೆಡ್‌ಪುರ್‌ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಈ ಬಾರಿ ವಿಧಾನಸಭೆಗೆ ಸ್ಪರ್ಧಿಸುತ್ತಿದ್ದಾರೆ. ಓರಾನ್ ಸಹ ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಜಾರ್ಖಂಡ್ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷರೂ ಹೌದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್-ನೆತನ್ಯಾಹು ಮೇಲೇಕೆ ಭಾರತೀಯರಿಗೆ ಪ್ರೀತಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳಿದಂತೆ, ಶಿಪ್ಲಿ ನೇಹಾ ಟಿರ್ಕಿ ಅವರನ್ನು ಮಂದಾರ(ಎಸ್‌ಟಿ ಮೀಸಲು) ಕ್ಷೇತ್ರದಿಂದ ಕಣಕ್ಕಿಳಿಸಿದೆ. ನೇಹಾ ಇದೇ ಕ್ಷೇತ್ರದ ಶಾಸಕರೂ ಹೌದು. ನೇಹಾ ಅವರ ತಂದೆ ಬಂಧು ಟಿರ್ಕಿ ಜಾರ್ಖಂಡ್‌ನ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದಾರೆ.
ಇದಕ್ಕೂ ಮುನ್ನ, ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರೊಂದಿಗೆ ಅಭ್ಯರ್ಥಿಗಳ ಕುರಿತಂತೆ ಚರ್ಚೆ ನಡೆಸಲಾಗಿತ್ತು.

ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಪಕ್ಷವು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಸ್ತುತ ರಾಜ್ಯದಲ್ಲಿ ಅಧಿಕಾರವನ್ನು ಹಂಚಿಕೊಂಡಿವೆ.

ಜಾರ್ಖಂಡ್‌ನ 81 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತ್ತು ಫಲಿತಾಂಶಗಳು ನವೆಂಬರ್ 23 ರಂದು ಬರುತ್ತವೆ. ಮೊದಲ ಹಂತದಲ್ಲಿ ನವೆಂಬರ್ 13 ರಂದು 43 ಸ್ಥಾನಗಳಿಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ನವೆಂಬರ್ 20 ರಂದು 38 ಸ್ಥಾನಗಳಿಗೆ ಮತದಾನ ನಡೆಯಲಿದೆ. ಚುನಾವಣಾ ಆಯೋಗದ ಪ್ರಕಾರ ಜಾರ್ಖಂಡ್‌ನಲ್ಲಿ ಒಟ್ಟು 2 ಕೋಟಿ 55 ಲಕ್ಷ 18 ಸಾವಿರದ 642 ಮತದಾರರಿದ್ದಾರೆ. ಇವರಲ್ಲಿ 1 ಕೋಟಿ 29 ಲಕ್ಷ 97 ಸಾವಿರದ 325 ಪುರುಷ ಹಾಗೂ 1 ಕೋಟಿ 25 ಲಕ್ಷ 20 ಸಾವಿರದ 910 ಮಹಿಳಾ ಮತದಾರರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...