ಗುಜರಾತ್‌ನಲ್ಲಿ ಖಾತೆ ತೆರೆದ ಕಾಂಗ್ರೆಸ್; ಕೈ ಅಭ್ಯರ್ಥಿ ಗೆನಿಬೆನ್ ಠಾಕೂರ್ ಗೆಲುವು

Date:

ಗುಜರಾತ್ ಬನಸ್ಕಾಂತ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಕಂಡ ಏಕೈಕ ಸ್ಥಾನವಾಗಿದೆ.

ಗುಜರಾತ್‌ನ ಒಟ್ಟು 26ರಲ್ಲಿ ಕಾಂಗ್ರೆಸ್ ಇದೀಗ ಒಂದರಲ್ಲಿ ಗೆಲುವು ಸಾಧಿಸಿ ಖಾತೆ ತೆರೆದಿದೆ. 2009 ಲೋಕಸಭಾ ಚುನಾವಣೆಯ ನಂತರ ಗುಜರಾತ್ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. 2014 ಮತ್ತು 2019 ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಯಾವುದೇ ಸ್ಥಾನವನ್ನು ಗೆದ್ದಿರಲಿಲ್ಲ.

ಗುಜರಾತ್‌ನ ಬನಸ್ಕಾಂತ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆನಿಬೆನ್ ಠಾಕೂರ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ರೇಖಾ ಚೌಧರಿ ವಿರುದ್ಧ ಸ್ಪರ್ಧೆ ಮಾಡಿ 30,000 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಗುಜರಾತ್ನಲ್ಲಿ ಬಿಜೆಪಿ ರಾಜ್ಯದ ಎಲ್ಲ 26 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್ನಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ತೋರಿಸಿದೆ ಆದರೆ ಅಂತಿಮವಾಗಿ ಠಾಕೂರ್ ಅವರ ಪಕ್ಷದಿಂದ ಏಕೈಕ ವಿಜೇತರಾಗಿ ಹೊರಹೊಮ್ಮಿದರು.

ಬನಸ್ಕಾಂತ ಬಿಜೆಪಿಯ ಭದ್ರಕೋಟೆಯಾಗಿದೆ. 2019ರಲ್ಲಿ ಬಿಜೆಪಿಯ ಪರ್ಬತ್ಭಾಯ್ ಪಟೇಲ್ 3,68,000 ಮತಗಳ ಅಂತರದಿಂದ ಕಾಂಗ್ರೆಸ್ ಪಾರ್ತಿ ಭಟೋಲ್ ಅವರನ್ನು ಸೋಲಿಸಿ ಕ್ಷೇತ್ರವನ್ನು ಗೆದ್ದರು. 2014 ಚುನಾವಣೆಯಲ್ಲೂ ಬಿಜೆಪಿ ಗೆದ್ದಿತ್ತು.

ಈ ಸುದ್ದಿ ಓದಿದ್ದೀರಾ?  10 ರಾಜ್ಯಗಳಲ್ಲಿ ಬಿಜೆಪಿ ‘ಶೂನ್ಯ’ ಸಾಧನೆ

2014 ಮತ್ತು 2019 ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವಾದ ಗುಜರಾತ್ನಲ್ಲಿ ಕಾಂಗ್ರೆಸ್ ಯಾವುದೇ ಸ್ಥಾನಗಳನ್ನು ಗೆಲ್ಲಲು ವಿಫಲವಾಗಿದೆ. 2009ರಲ್ಲಿ ಗುಜರಾತ್ನಲ್ಲಿ 26 ಸ್ಥಾನಗಳಲ್ಲಿ ಕಾಂಗ್ರೆಸ್ 11 ಮತ್ತು ಬಿಜೆಪಿ 14 ಸ್ಥಾನಗಳನ್ನು ಗೆದ್ದಿತ್ತು.

ಗೆನಿಬೆನ್ ಠಾಕೋರ್ ಪ್ರಸ್ತುತ ಬನಸ್ಕಾಂತ ಜಿಲ್ಲೆಯ ವಾವ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಗೆನಿಬೆನ್ ಅವರು ತಮ್ಮ ಗೆಲುವಿನೊಂದಿಗೆ ಗುಜರಾತ್ನಲ್ಲಿ ಬಿಜೆಪಿಯ ಭದ್ರ ಕೋಟೆಯನ್ನು ಭೇಧಿಸಿದ್ದಾರೆ. ಗೆಲುವಿನೊಂದಿಗೆ ಅವರು ರಾಜ್ಯದ ಕಾಂಗ್ರೆಸ್ನಲ್ಲಿ ದೊಡ್ಡ ನಾಯಕಿಯಾಗಿ ಹೊರಹೊಮ್ಮಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...