ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವಾಗಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ.
ಅಕ್ಟೋಬರ್ 1ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಅದರ ಪ್ರಚಾರಕ್ಕೆ ಇಂದೇ ಕೊನೆಯ ದಿನವಾಗಿದೆ. ಈ ಪ್ರಚಾರದ ವೇಳೆ ಭಾಷಣ ಮಾಡುವಾಗ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥರಾಗಿದ್ದಾರೆ.
ಇದನ್ನು ಓದಿದ್ದೀರಾ? 10 ವರ್ಷ ಪ್ರಜಾಸತ್ತಾತ್ಮಕ ಸಂಸ್ಥೆಗಳ ನಾಶಕ್ಕೆ ಸಂಘಟಿತ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಅಸ್ವಸ್ಥರಾದ ಬಳಿಕ ನೀರು ಕುಡಿದು ಕೊಂಚ ಸುಧಾರಿಸಿಕೊಂಡ ಖರ್ಗೆ ಅವರು, “ರಾಜ್ಯದ (ಜಮ್ಮು ಕಾಶ್ಮೀರ) ಸ್ಥಾನಮಾನವನ್ನು ಮರುಸ್ಥಾಪಿಸಲು ನಾವು ಹೋರಾಡುತ್ತೇವೆ. ನನಗೆ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಬದುಕುತ್ತೇನೆ” ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಮೂರನೇ ಹಂತದಲ್ಲಿ 40 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ಸಚಿನ್ ಪೈಲಟ್ ಇಂದು ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಆಯೋಜನೆಯಾಗಿದ್ದ ಸಭೆಯಲ್ಲಿ ಭಾಗಿಯಾಗಲಿದ್ದರು.
#WATCH | Jammu and Kashmi: Congress President Mallikarjun Kharge became unwell while addressing a public gathering in Kathua. pic.twitter.com/OXOPFmiyUB
— ANI (@ANI) September 29, 2024





