ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಸಂಪತ್ತಿನ ಪುನರ್‌ಹಂಚಿಕೆ ಸಮೀಕ್ಷೆ: ರಾಹುಲ್ ಗಾಂಧಿ

Date:

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಜನರ ನಡುವೆ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ದೇಶಾದ್ಯಂತ ಆರ್ಥಿಕ ಹಾಗೂ ಸಾಂಸ್ಥಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳುವುದಾಗಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಹೈದರಾಬಾದ್‌ನ ಸರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

“ಮೊದಲು ನಾವು ದೇಶಾದ್ಯಂತ ಜಾತಿ ಗಣತಿ ಹಮ್ಮಿಕೊಂಡು ಎಷ್ಟು ಮಂದಿ ಎಸ್‌ಸಿ,ಎಸ್‌ಟಿ ಹಾಗೂ ಒಬಿಸಿ ಪಂಗಡಕ್ಕೆ ಸೇರಿದ್ದಾರೆ ಎಂದು ನಿರ್ಣಯಿಸುತ್ತೇವೆ. ಅದಾದ ನಂತರ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಐತಿಹಾಸಿಕ ಹಜ್ಜೆಯೊಂದಿಗೆ ಆರ್ಥಿಕ ಹಾಗೂ ಸಾಂಸ್ಥಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳುತ್ತೇವೆ” ಎಂದು ರಾಹುಲ್‌ ಗಾಂಧಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಎಲ್ಲ ವಲಯದ ಎಲ್ಲ ಸಮುದಾಯಗಳನ್ನು ನಮ್ಮ ಪಕ್ಷವು ಪ್ರತಿನಿಧಿಸುತ್ತದೆ. ಜನರಿಗೆ ಸರಿಯಾದ ಪಾಲು ನೀಡಲು ಇದರಿಂದ ಅನುಕೂಲವಾಗುತ್ತದೆ ಎಂಬುದನ್ನು ಕಾಂಗ್ರೆಸ್‌ ಖಚಿತಪಡಿಸುತ್ತದೆ ಎಂದು ರಾಹುಲ್ ಗಾಂಧಿ ಪುನರ್ರಚ್ಚಿಸಿದರು.

ದೇಶದ ಒಟ್ಟು ಜನಸಂಖ್ಯೆಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತರು ದೇಶದ ಜನಸಂಖ್ಯೆಯಲ್ಲಿ ಶೇ.90 ರಷ್ಟಿದ್ದಾರೆ. ಆದರೆ ಉದ್ಯೋಗಗಲ್ಲಿ ನೀವು ಅವರನ್ನು ನೋಡುವುದಿಲ್ಲ. ವಾಸ್ತವ ಏನೆಂದರೆ ದೇಶದ ಶೇ.90 ರಷ್ಟು ಜನರು ಸರಿಯಾದ ಪಾಲು ಹೊಂದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

90 ಐಎಎಸ್ ಅಧಿಕಾರಿಗಳು ದೇಶದ ಆಡಳಿತವನ್ನು ನಿಯಂತ್ರಿಸುತ್ತಿದ್ದು, ಆದರೆ ಇವರಲ್ಲಿ ಕೇವಲ ಮೂವರು ಒಬಿಸಿ, ಒಬ್ಬರು ಆದಿವಾಸಿ ಹಾಗೂ ಒಬ್ಬರು ದಲಿತರು ಮಾತ್ರ ಇದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದರು.

ಏ.05 ರಂದು ನ್ಯಾಯದ ಐದು ಆಧಾರಸ್ತಂಭಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಜಾತಿ ಗಣತಿ ಪ್ರಮುಖ ಕಾರ್ಯಸೂಚಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...