ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ದೇಶಾದ್ಯಂತ ಕಾಂಗ್ರೆಸ್‌ನಿಂದ ‘ಜೈ ಹಿಂದ್ ಯಾತ್ರೆ’

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದ ಭಾರತೀಯರನ್ನು ಸ್ಮರಿಸಲು ಮತ್ತು ಆಪರೇಷನ್ ಸಿಂಧೂರ ನಡೆಸಿದ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಕಾಂಗ್ರೆಸ್ ಶುಕ್ರವಾರ ದೇಶಾದ್ಯಂತ ‘ಜೈ ಹಿಂದ್ ಯಾತ್ರೆ’ಯನ್ನು ಘೋಷಿಸಿದೆ.

“ಈ ‘ಜೈ ಹಿಂದ್ ಯಾತ್ರೆ’ ಪ್ರತಿದಿನ ನಮ್ಮ ರಾಷ್ಟ್ರವನ್ನು ರಕ್ಷಿಸುವ ನಮ್ಮ ಯೋಧರ ಧೈರ್ಯ ಮತ್ತು ತ್ಯಾಗಕ್ಕೆ ಗೌರವವಾಗಿದೆ. ಇದು ಕೇವಲ ಮೆರವಣಿಗೆಯಲ್ಲ, ಇದು ಏಕತೆ, ಶಾಂತಿ ಮತ್ತು ನ್ಯಾಯಕ್ಕಾಗಿ ಕರೆ” ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಹೆಸರು ಅನುಮೋದಿಸಿದ ಕಾಂಗ್ರೆಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪವನ್ ಖೇರಾ, ದೇಶಾದ್ಯಂತದ ಕಾಂಗ್ರೆಸ್ ಕಾರ್ಯಕರ್ತರು ಭಯೋತ್ಪಾದನೆಯ ವಿರುದ್ಧ ದೃಢವಾಗಿ ನಿಲ್ಲುತ್ತಾರೆ. ಬಲವಾದ ಮತ್ತು ಸುರಕ್ಷಿತ ಭಾರತಕ್ಕಾಗಿ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ ಎಂದು ಹೇಳಿದರು.

“ಈ ಆಂದೋಲನವು ದೇಶಕ್ಕಾಗಿ ಸೇವೆ ಸಲ್ಲಿಸುವವರ ಬಗ್ಗೆ ನಮ್ಮ ಆಳವಾದ ಗೌರವವನ್ನು ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ನಮ್ಮ ಭರವಸೆಯನ್ನು ಪ್ರತಿಬಿಂಬಿಸುತ್ತದೆ. ಒಟ್ಟಾಗಿ, ನಾವು ದೃಢನಿಶ್ಚಯ ಮತ್ತು ಭರವಸೆಯೊಂದಿಗೆ ಮುಂದುವರಿಯುತ್ತೇವೆ. ನಾನು ಹೆಮ್ಮೆ ಮತ್ತು ಉತ್ತಮ ಉದ್ದೇಶದೊಂದಿಗೆ ಈ ಹಾದಿಯಲ್ಲಿ ನಡೆಯೋಣ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ದಾವಣಗೆರೆ | ಕಾಶ್ಮೀರದ ಪ್ರವಾಸಿಗರ ಮೇಲಿನ ಉಗ್ರ ಕೃತ್ಯಕ್ಕೆ ಚನ್ನಗಿರಿ ಯುವ ಕಾಂಗ್ರೆಸ್ ಖಂಡನೆ, ಶಿಕ್ಷೆಗೆ ಆಗ್ರಹ.

ಮಣಿಪುರ ಮತ್ತು ಒಡಿಶಾದಂತಹ ಕೆಲವು ರಾಜ್ಯ ಘಟಕಗಳು ಈಗಾಗಲೇ ‘ಜೈ ಹಿಂದ್ ಯಾತ್ರೆ’ಗಳನ್ನು ನಡೆಸಿವೆ. ಭುವನೇಶ್ವರದಲ್ಲಿ, ಕಾಂಗ್ರೆಸ್ ಒಡಿಶಾ ಅಧ್ಯಕ್ಷ ಭಕ್ತ ಚರಣ್ ದಾಸ್ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಕಾರ್ಮಿಕರು ತ್ರಿವರ್ಣ ಧ್ವಜವನ್ನು ಹಿಡಿದು ಸಾಗಿದ್ದಾರೆ. ಇಂಫಾಲ್‌ನಲ್ಲಿ ರಾಜ್ಯ ಅಧ್ಯಕ್ಷೆ ಕೆ ಮೇಘಚಂದ್ರ ಮತ್ತು ನಾಯಕಿ ಒ ಇಬೋಬಿ ಸಿಂಗ್ ಮೆರವಣಿಗೆಯ ನೇತೃತ್ವ ವಹಿಸಿದ್ದರು.

ಸದ್ಯ ‘ಸಂವಿಧಾನ ಬಚಾವೋ’ ಅಭಿಯಾನವನ್ನು ಕಾಂಗ್ರೆಸ್ ಮುಂದೂಡಿದೆ. ಆದರೆ ಇಡೀ ದೇಶವು ಒಗ್ಗಟ್ಟಾಗಿದೆ ಎಂಬ ಸಂದೇಶ ಜಗತ್ತಿಗೆ ಕಳುಹಿಸಲು ‘ಜೈ ಹಿಂದ್ ಯಾತ್ರೆ’ ನಡೆಸಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕರುಗಳು ಹೇಳಿದ್ದಾರೆ.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಲ್ಲಿ ಜೈಶ್-ಎ-ಮೊಹಮ್ಮದ್ ಭದ್ರಕೋಟೆಯಾದ ಬಹಾವಲ್ಪುರ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾದ ನೆಲೆ ಸೇರಿವೆ. ಇದಾದ ಬಳಿಕ ಭಾರತ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...