ಕರ್ನಾಟಕದಲ್ಲಿ ಕಾಂಗ್ರೆಸ್ ಅಲೆ | ಸಮೀಕ್ಷೆ ಅಲ್ಲಗಳೆದ ಬಿಜೆಪಿಗೆ ಯೋಗೇಂದ್ರ ಯಾದವ್ ತಿರುಗೇಟು

Date:

  • ಯೋಗೇಂದ್ರ ಯಾದವ್ ಹಂಚಿಕೊಂಡ ಅಂಕಿ ಅಂಶ ನಿರಾಕರಿಸಿದ ಬಿ ಎಲ್ ಸಂತೋಷ್
  • ಕಾಂಗ್ರೆಸ್ ಕರ್ನಾಟಕದಲ್ಲಿ ಬಹುಮತ ಗಳಿಸಲಿದೆ ಎಂದ ‘ಈ ದಿನ.ಕಾಮ್’ ಸಮೀಕ್ಷೆ

ಈದಿನ.ಕಾಮ್ ಸಮೀಕ್ಷೆಯ ವಿವರಗಳನ್ನು ಪರಿಗಣಿಸಿ ಸಾಮಾಜಿಕ ಕಾರ್ಯಕರ್ತ, ಚುನಾವಣಾ ವಿಶ್ಲೇಷಕ ಯೋಗೇಂದ್ರ ಯಾದವ್ ಅವರು “ಕರ್ನಾಟಕದಲ್ಲಿ ಕಾಂಗ್ರೆಸ್ ಅಲೆ ಇದೆ” ಎಂದು ಹೇಳಿದ್ದಾರೆ.

ಅವರು ಕನ್ನಡದ ಜಾಲತಾಣ ‘ಈ ದಿನ.ಕಾಮ್’ ನಡೆಸಿದ ಸಮೀಕ್ಷೆಯ ಅಂಕಿ ಅಂಶಗಳನ್ನು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಈದಿನ.ಕಾಮ್ ಸಮೀಕ್ಷೆ ಮುಂದಿಟ್ಟಿರುವ ಅಂಕಿ ಅಂಶಗಳನ್ನು ಬಿಜೆಪಿ ನಿರಾಕರಿಸಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರು ಯೋಗೇಂದ್ರ ಯಾದವ್ ಅವರ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಟ್ವೀಟ್ ಮಾಡಿರುವ ಅವರು, “ಇದು ಕಲ್ಪಿತ ಸಮೀಕ್ಷೆ” ಎಂದು ಟೀಕಿಸಿದ್ದಾರೆ. ಯೋಗೇಂದ್ರ ಅವರು ಇದಕ್ಕೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

“ಸತ್ಯದ ಬೇಳೆ ರುಚಿಸದವರು ಅಡುಗೆ ಮಾಡಿದವರನ್ನೇ ದೂಷಿಸುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೆ ಶಾಸಕರನ್ನು ಖರೀದಿಸಿ ತಮ್ಮ ಬಹುಮತದ ಬೇಳೆ ಬೇಯಿಸಿಕೊಳ್ಳುತ್ತಿದ್ದವರಿಗೆ ಸಮೀಕ್ಷೆಯಿಂದ ತೊಂದರೆಯುಂಟಾಗಿರುವುದು ಆಶ್ಚರ್ಯ ಉಂಟು ಮಾಡಿದೆ. ಬಿಜೆಪಿಯ ಆಂತರಿಕ ಸಮೀಕ್ಷೆಗಳಿಗೆ ‘ಈದಿನ’ ಜಾಲತಾಣದ ಸಮೀಕ್ಷೆ ಅನುರಣಿಸುತ್ತಿದೆಯೇ?” ಎಂದು ಯೊಗೇಂದ್ರ ಅವರು ಕುಟುಕಿದ್ದಾರೆ.

ಯೋಗೇಂದ್ರ ಅವರನ್ನು ಟೀಕಿಸಿ ಬಿ ಎಲ್ ಸಂತೋಷ್ ಈ ಮೊದಲು ಟ್ವೀಟ್ ಮಾಡಿದ್ದರು.

“ತನ್ನ ಯಜಮಾನರನ್ನು ಮೆಚ್ಚಿಸಲು ಪಾದಯಾತ್ರೆಗಳು ಮತ್ತು ಆಂದೋಲನಗಳ ನಡುವೆ ಸಮೀಕ್ಷೆಗಳಿಗೆ ಅವರು ಸಮಯ ಕಂಡುಕೊಂಡಿರುವುದು ನಿಜಕ್ಕೂ ಆಶ್ಚರ್ಯಕರ” ಎಂದು ಯೋಗೇಂದ್ರ ಅವರ ಹೆಸರನ್ನು ಟ್ಯಾಗ್ ಮಾಡಿ ಬಿ ಎಲ್ ಸಂತೊಷ್ ಟ್ವೀಟ್ ಮಾಡಿದ್ದರು.

ಯೋಗೇಂದ್ರ ಯಾದವ್ ಅವರು ಇದಕ್ಕೂ ಮೊದಲು ‘ಈದಿನ’ ಜಾಲತಾಣ ನಡೆಸಿರುವ ಸಮೀಕ್ಷೆಯ ಅಂಕಿ ಅಂಶಗಳನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಕರಗಿ ನೀರಾಗಿರುವ ಗುಜರಾತ್‌ ರಸ್ತೆಗಳು; ಗುಜರಾತ್ ಮಾಡೆಲ್‌ಗೆ ಟೀಕಿಸಿದ ವಿಪಕ್ಷಗಳು

‘ಈದಿನ.ಕಾಮ್’ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಈ ಬಾರಿ ಕಾಂಗ್ರೆಸ್ 134-140 ಸ್ಥಾನಗಳ ಮೂಲಕ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ಹೇಳಿದೆ.

ಬಿಜೆಪಿಯು 57-65 ಸ್ಥಾನಗಳನ್ನು ಗಳಿಸಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಕಾಂಗ್ರೆಸ್‌ನ ಇತರ ನಾಯಕರೂ ಸಮೀಕ್ಷೆಯ ಅಂಕಿ ಅಂಶಗಳನ್ನು ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...