ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

Date:

ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಹರಿಯಾಣದ ರೋಹ್ಟಕ್‌ನಲ್ಲಿ ನಡೆದಿದೆ. ಮೃತ ಮಹಿಳೆ ತಮ್ಮ ಕಾರ್ಯಕರ್ತೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

ರೋಹ್ಟಕ್‌ನ ಸಂಪ್ಲಾ ಬಸ್‌ ನಿಲ್ದಾಣದ ಬಳಿ ದೊಡ್ಡ ನೀಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ಸಂಪ್ಲಾ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಎಸ್‌ಎಫ್‌ಎಲ್ ತಂಡವು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತೆಯ ವಯಸ್ಸು 20 ರಿಂದ 22 ವರ್ಷವಿರಬಹುದು ಎಂದು ಹೇಳಲಾಗಿದೆ.

“ಯುವತಿಯನ್ನು ಕೊಲೆ ಮಾಡಿ ಆಕೆಯ ಶವವನ್ನು ರಸ್ತೆಗೆ ಎಸೆದು ಹೋಗಿರುವ ಸಾಧ್ಯತೆ ಇದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಆಕೆಯ ಗುರುತನ್ನು ಗುರುತಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಸಂಪ್ಲಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಬಿಜೇಂದ್ರ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಶಾಸಕ ಭರತ್ ಭೂಷಣ್ ಬಾತ್ರಾ ಅವರು ಸಂತ್ರಸ್ತೆಯು ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದಾರೆ. ಆಕೆಯ ಹೆಸರು ಹಿಮಾನಿ ನರ್ವಾಲ್ ಎಂದು ಹೇಳಿದ್ದಾರೆ. ಆಕೆ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಸಕ್ರಿಯವಾಗಿದ್ದರು. ಹರಿಯಾಣ ಚುನಾವಣೆಯಲ್ಲಿ ನರ್ವಾಲ್ ಭೂಪಿಂದರ್ ಹೂಡಾ ಮತ್ತು ದೀಪಿಂದರ್ ಹೂಡಾ ಅವರ ಪರಿವಾಗಿ ಪ್ರಚಾರ ಮಾಡಿದ್ದರು ಎಂದು ಶಾಸಕ ಬಾತ್ರಾ ಹೇಳಿದ್ದಾರೆ.

ಯುವತಿ ಕೊಲೆಯನ್ನು ಕಾಂಗ್ರೆಸ್ ಹರಿಯಾಣ ಅಧ್ಯಕ್ಷ ಭೂಪಿಂದರ್ ಸಿಂಗ್ ಹೂಡಾ ತೀವ್ರವಾಗಿ ಖಂಡಿಸಿದ್ದಾರೆ. “ರೋಹ್ಟಕ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಬರ್ಬರ ಹತ್ಯೆಯ ಸುದ್ದಿ ಅತ್ಯಂತ ದುಃಖಕರ ಮತ್ತು ಆಘಾತಕಾರಿಯಾಗಿದೆ. ಆಕೆಯ ಆತ್ಮಕ್ಕೆ ಶಾಂತಿ ದೊರೆಯಲಿ. ಆಕೆಯ ಕುಟುಂಬದ ಸದಸ್ಯರಿಗೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.

“ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಕಪ್ಪು ಚುಕ್ಕೆಯಾಗಿದೆ. ಘಟನೆಯ ಬಗ್ಗೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...