ದಾರಿ ತಪ್ಪಿಸುವ ಹೇಳಿಕೆ ನೀಡಿರುವ ಪ್ರಧಾನಿ, ಅನುರಾಗ್ ಠಾಕೂರ್: ಕ್ರಮಕ್ಕೆ ಸ್ಪೀಕರ್‌ಗೆ ಕಾಂಗ್ರೆಸ್ ಪತ್ರ

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಸದನದಲ್ಲಿ ತಮ್ಮ ಭಾಷಣಗಳ ಸಂದರ್ಭ ತಪ್ಪು ಮತ್ತು ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದೆ.

ನಿರ್ದೇಶನ 115(1)ರ ನಿಬಂಧನೆಗಳನ್ನು ಅನ್ವಯಿಸುವಂತೆ ಸ್ಪೀಕರ್‌ಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿರುವ ಕಾಂಗ್ರೆಸ್ ಸಂಸದ ಮಾಣಿಕಂ ಟಾಗೋರ್ ಅವರು, ಅಗತ್ಯ ಪ್ರಕ್ರಿಯೆಯನ್ನು  ಆರಂಭಿಸುವಂತೆ ಮತ್ತು ಈ ನಿಟ್ಟಿನಲ್ಲಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಮಹಿಳೆಯರಿಗೆ ಪ್ರತಿ ತಿಂಗಳು 8,500 ರೂ.ಗಳನ್ನು ಕೊಡುವ ಸುಳ್ಳು ಭರವಸೆಯನ್ನು ಕಾಂಗ್ರೆಸ್ ನೀಡಿತ್ತು ಎಂದು ಮೋದಿ ಹೇಳಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷವು, ಅದು ಗೆಲುವು ಮತ್ತು ಸರಕಾರ ರಚನೆಯನ್ನು ಆಧರಿಸಿ ನೀಡಿದ್ದ ಭರವಸೆಯಾಗಿತ್ತು ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಮಳೆ ಹೊಯ್ಯುತಿದೆ, ಡೆಂಘೀ ಹರಡುತಿದೆ- ಆರೋಗ್ಯ ಇಲಾಖೆ ಏನು ಮಾಡುತ್ತಿದೆ?

ಕಾಂಗ್ರೆಸ್ ತಾನು ಏಕಾಂಗಿಯಾಗಿ ಸ್ಪರ್ಧಿಸಿದ್ದ 16 ರಾಜ್ಯಗಳಲ್ಲಿ ಅದರ ಮತಗಳಿಕೆ ಪ್ರಮಾಣ ಕಡಿಮೆಯಾಗಿತ್ತು ಎಂಬ ಮೋದಿಯವರ ಹೇಳಿಕೆಯು ಸತ್ಯದಿಂದ ದೂರವಾಗಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ,‌ ಕರ್ನಾಟಕ, ತೆಲಂಗಾಣ ಇತ್ಯಾದಿ ರಾಜ್ಯಗಳಲ್ಲಿ ಅದರ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಪಕ್ಷದಲ್ಲಿ ತಿಳಿಸಿದೆ.

ಕಾಂಗ್ರೆಸ್‌ನ ಅಧಿಕಾರಾವಧಿಯಲ್ಲಿ ಸೇನೆಯ ಬಳಿ ಗುಂಡು ನಿರೋಧಕ ಜಾಕೆಟ್‌ಗಳಿರಲಿಲ್ಲ ಎಂಬ ಮೋದಿಯವರ ಹೇಳಿಕೆ ತೀರ ತಪ್ಪುದಾರಿಗೆ ಎಳೆಯುವಂಥದ್ದಾಗಿದೆ. ಜಾಕೆಟ್‌ಗಳ ಕೊರತೆಯಿತ್ತು, ಜಾಕೆಟ್‌ಗಳನ್ನು ಹೊಂದಿದ್ದರು ಎಂದು ಪತ್ರದಲ್ಲಿ ತಿಳಿಸಿರುವ ಟಾಗೋರ್, ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಸೇನೆಗೆ ಯುದ್ಧವಿಮಾನಗಳನ್ನು ನೀಡಿರಲಿಲ್ಲ ಎಂಬ ಪ್ರಧಾನಿ ಹೇಳಿಕೆಯೂ ದಾರಿ ತಪ್ಪಿಸುವಂಥದ್ದಾಗಿದೆ ಎಂದು ತಿಳಿಸಲಾಗಿದೆ

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರೂ ಸದನದಲ್ಲಿ ತನ್ನ ಭಾಷಣದಲ್ಲಿ ಈ ಆರೋಪವನ್ನು ಮಾಡಿದ್ದರು. ಆ ವೇಳೆ ದೇಶವು ಮಿಗ್ 29,ಜಾಗ್ವಾರ್,ಮಿರಾಜ್ 2000 ಮತ್ತು ಸುಖೋಯಿ ಎಸ್‌ಯು 30 ಯುದ್ಧ ವಿಮಾನಗಳನ್ನು ಹೊಂದಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...