ನ್ಯಾಯಮೂರ್ತಿ ಹುದ್ದೆಗೆ ಅರ್ಹ ಮಹಿಳಾ ವಕೀಲರನ್ನು ಪರಿಗಣಿಸಿ: ಸಿಜೆಐ ಸಲಹೆ

Date:

ಹೈಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗೆ ಅರ್ಹ ಮಹಿಳಾ ವಕೀಲರನ್ನು ಪರಿಗಣಿಸಬೇಕು. ಅದು ಕೇವಲ ಅಪವಾದವಾಗಬಾರದು, ಬದಲಿಗೆ ಅದು ಒಂದು ನಿಯಮವಾಗಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರು ಹೈಕೋರ್ಟ್ ಕೊಲಿಜಿಯಂಗಳಿಗೆ ಸಲಹೆ ನೀಡಿದ್ದಾರೆ.

ಮಾರ್ಚ್ 8ರಂದು ಮಹಿಳಾ ದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ನಡೆದ “ಇಂಡಿಯನ್ ವುಮೆನ್ ಇನ್ ಲಾ” ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಸಿಜೆಐ, “ಮಹಿಳೆಯರು ಯಾವುದೇ ಸವಲತ್ತು ಅಥವಾ ದಾನವನ್ನು ಕೇಳುತ್ತಿಲ್ಲ ಬದಲಿಗೆ ತಮಗೆ ಸಿಗಬೇಕಾದ ನ್ಯಾಯಯುತವಾದ ಮತ್ತು ಸೂಕ್ತವಾದ ಪ್ರಾತಿನಿಧ್ಯವನ್ನು ಕೇಳುತ್ತಿದ್ದಾರೆ” ಎಂದು ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ? ನೋಟು ಬ್ಯಾನ್ ಕುರಿತು ಕಾನೂನಾತ್ಮಕ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ; ಕೇಂದ್ರದ ವಿರುದ್ಧ ನ್ಯಾ. ನಾಗರತ್ನ ಅಸಮಾಧಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇವಲ ವಯಸ್ಸಿನ ಮಿತಿಯ ಕಾರಣಕ್ಕಾಗಿ ಅರ್ಹ ಮಹಿಳಾ ವಕೀಲರ ಹೆಸರನ್ನು ತಾಂತ್ರಿಕವಾಗಿ ತಿರಸ್ಕರಿಸಬಾರದು. ಹೈಕೋರ್ಟ್ ವ್ಯಾಪ್ತಿಯಲ್ಲಿ ಅರ್ಹ ಮಹಿಳಾ ಅಭ್ಯರ್ಥಿಗಳು ಸಿಗದಿದ್ದರೆ, ಸುಪ್ರೀಂ ಕೋರ್ಟ್‌ನಲ್ಲಿ ವಕೀಲ ವೃತ್ತಿ ಮಾಡುತ್ತಿರುವ ಆಯಾ ರಾಜ್ಯದ ಮಹಿಳಾ ವಕೀಲರನ್ನು ನ್ಯಾಯಮೂರ್ತಿ ಹುದ್ದೆಗೆ ಪರಿಗಣಿಸಬೇಕು” ಎಂದು ವಿನಂತಿಸಿದ್ದಾರೆ.

ಹಾಗೆಯೇ, “ಕೇವಲ ಸಾಂಸ್ಥಿಕ ಉದ್ದೇಶವಿದ್ದರೆ ಸಾಲದು, ಅದು ಕಾರ್ಯರೂಪಕ್ಕೆ ಬರಲು ಸಾಂಸ್ಥಿಕ ಕಲ್ಪನೆ ಮತ್ತು ಕ್ರಮದ ಅಗತ್ಯವಿದೆ” ಎಂದು ಸಿಜೆಐ ಒತ್ತಿ ಹೇಳಿದ್ದಾರೆ.

ಪ್ರಸ್ತುತ ಹೈಕೋರ್ಟ್, ಸುಪ್ರೀಂ ಕೋರ್ಟ್‌ನಲ್ಲಿ ಮಹಿಳಾ ನ್ಯಾಯಮೂರ್ತಿಗಳು ಎಷ್ಟಿದ್ದಾರೆ?

ಪ್ರಸ್ತುತ ಸುಪ್ರೀಂ ಕೋರ್ಟ್‌ನ 33 ಕಾರ್ಯನಿರತ ನ್ಯಾಯಮೂರ್ತಿಗಳಲ್ಲಿ ಕೇವಲ ಒಬ್ಬರು ಮಹಿಳಾ ನ್ಯಾಯಮೂರ್ತಿ ಇದ್ದಾರೆ. ಅವರು ನ್ಯಾಯಮೂರ್ತಿ ಬಿ.ವಿ. ನಾಗರತ್ನ. ಅವರು 2027ರ ಸೆಪ್ಟೆಂಬರ್‌ನಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗುವ ನಿರೀಕ್ಷೆಯಿದೆ.

ಇದನ್ನು ಓದಿದ್ದೀರಾ? ಬಿಲ್ಕಿಸ್ ಪ್ರಕರಣ । ಕೆಟ್ಟ ಕಾಲದಲ್ಲಿ ನ್ಯಾಯ ಗೆಲ್ಲಿಸಿದ ನ್ಯಾಯಮೂರ್ತಿ ನಾಗರತ್ನ

ದೇಶದ 25 ಹೈಕೋರ್ಟ್‌ಗಳಲ್ಲಿ ಒಟ್ಟು 781 ಕಾರ್ಯನಿರತ ನ್ಯಾಯಮೂರ್ತಿಗಳ ಪೈಕಿ 116 ಮಂದಿ ಮಹಿಳೆಯರಿದ್ದಾರೆ. ಅಂದರೆ ಶೇ.14.85ರಷ್ಟು ಮಹಿಳಾ ನ್ಯಾಯಮೂರ್ತಿಗಳು ಇರುವುದು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಅತಿ ಹೆಚ್ಚು ಅಂದರೆ 18 ಮಹಿಳಾ ನ್ಯಾಯಮೂರ್ತಿಗಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಸ್ತುತ ಕಾರ್ಯನಿರತ ಬಲದಲ್ಲಿ 9 ಮಂದಿ ಮಹಿಳೆಯರಿದ್ದಾರೆ. ಅಂದರೆ ಶೇ. 19.57ರಷ್ಟು ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಆದರೆ ಉತ್ತರಾಖಂಡ, ತ್ರಿಪುರ ಮತ್ತು ಮಣಿಪುರ ಹೈಕೋರ್ಟ್‌ಗಳಲ್ಲಿ ಸದ್ಯಕ್ಕೆ ಒಬ್ಬರೂ ಮಹಿಳಾ ನ್ಯಾಯಮೂರ್ತಿಗಳಿಲ್ಲ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಲಿಸಿದರೆ ಜಿಲ್ಲಾ ನ್ಯಾಯಾಂಗದಲ್ಲಿ ಮಹಿಳೆಯರ ಪ್ರಾತಿನಿಧ್ಯ ಉತ್ತಮವಾಗಿದ್ದು, ಒಟ್ಟು ಬಲದ ಸುಮಾರು 37-38% ರಷ್ಟು ಮಹಿಳೆಯರು ಇದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...