ಜೈಲಿನಲ್ಲಿಯೇ ಹತ್ಯೆಗೆ ಸಂಚು, ಕೇಜ್ರಿವಾಲ್ ಆರೋಗ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ: ಎಎಪಿ ಆರೋಪ

Date:

ಅಬಕಾರಿ ನೀತಿ ಹಗರಣದ ಆರೋಪದಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದೊಂದಿಗೆ ಬಿಜೆಪಿ ಆಟವಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಭಾನುವಾರ ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, “ಅರವಿಂದ್ ಕೇಜ್ರಿವಾಲ್ ಅವರ ವೈದ್ಯಕೀಯ ವರದಿಯು ಅವರಿಗೆ ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳುತ್ತದೆ. ಆದರೆ ಬಿಜೆಪಿಯವರು ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ಚೆಲ್ಲಾಟವಾಡುತ್ತಿದ್ದಾರೆ. ಕೇಜ್ರಿವಾಲ್ ಹತ್ಯೆಗೆ ಸಂಚು ನಡೆಯುತ್ತಿದೆ” ಎಂದು ದೂರಿದರು.

“ಆರಂಭದಲ್ಲಿ ಕೇಜ್ರಿವಾಲ್ ಅವರು ಸಿಹಿ ತಿಂದು ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿಗರು ಹೇಳುತ್ತಿದ್ದರು. ಆದರೆ ಈಗ ಕೇಜ್ರಿವಾಲ್ ತನ್ನ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಯಾರಾದರೂ ತಮ್ಮ ಸ್ವಂತ ಜೀವಕ್ಕೆ ಯಾಕೆ ಆಪತ್ತು ತರುತ್ತಾರೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಅರವಿಂದ್ ಕೇಜ್ರಿವಾಲ್ ಕೋಮಾಗೆ ಜಾರಬಹುದು ಎಂದ ಎಎಪಿ, ತಿಹಾರ್ ಜೈಲು ಹೇಳುವುದೇನು?

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು, “ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೋರಿ ಸೇವಿಸಿದ್ದಾರೆ. ಅವರಿಗೆ ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ವಿಕೆ ಸಕ್ಸೇನಾ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್‌ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸಕ್ಸೇನಾ ಅವರು ಕೇಜ್ರಿವಾಲ್ ಅವರ ಆರೋಗ್ಯದ ಕುರಿತು ಉಲ್ಲೇಖ ಮಾಡಿದ್ದಾರೆ. “ಮುಖ್ಯಮಂತ್ರಿ ಅವರಿಗೆ ಮನೆಯಲ್ಲೇ ತಯಾರಿಸಿದ ಆಹಾರ ಸಾಕಷ್ಟು ಲಭ್ಯವಿದ್ದರೂ ಕೂಡಾ ಅವರು ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೊರಿಗಳನ್ನು ಸೇವಿಸಿದ್ದಾರೆ” ಎಂದು ದೂರಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...