ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು ಎಎಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಆರೋಪ ಮಾಡಿರುವ ಸಚಿವೆ ಅತಿಶಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕೊಲ್ಲಲು ಪ್ರಯತ್ನಗಳು ನಡೆಯುತ್ತಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅತಿಶಿ, ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಕೆಲವು ದಿನಗಳಿಂದ 300 ಎಂಜಿ ದಾಟಿದೆ. ತಿಹಾರಿ ಜೈಲಿನ ಸಿಬ್ಬಂದಿಗೆ ಕೇಜ್ರಿವಾಲ್ ಅವರು ಇನ್ಸುಲಿನ್ ನೀಡಬೇಕೆಂದು ಕೇಳುತ್ತಿದ್ದರೂ ಅವರು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದರು.

55 ವರ್ಷದ ಅಸ್ತಮ ರೋಗಿಗೆ ಇನ್ಸುಲಿನ್ ನಿರಾಕರಿಸುವ ಮೂಲಕ ಯಾವ ರೀತಿಯ ಸಂಚು ನಡೆಸಲಾಗುತ್ತಿದೆ? ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆಯೆ? ಎಂದು ಅತಿಶಿ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಜ್ರಿವಾಲ್ ಅವರಂಥ ವ್ಯಕ್ತಿಯನ್ನು ಬಿಜೆಪಿ ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ. ಇಂದು ಅದೇ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಟ್ಟು ಕೊಲ್ಲಲು ಪ್ರಯತ್ನಿಸಲಾಗುತ್ತಿದೆ” ಎಂದು ಅತಿಶಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ಅಸ್ತಮ ರೋಗಿಯಾಗಿರುವ ಕೇಜ್ರಿವಾಲ್ ಅವರು ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ನಿತ್ಯ 54 ಯೂನಿಟ್ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ. ಅವರು ಕಳೆದ 30 ವರ್ಷಗಳಿಂದ ಅಸ್ತಮ ರೋಗದಿಂದ ಬಳಲುತ್ತಿದ್ದಾರೆ. ಅವರ ಸಕ್ಕರೆ ಪ್ರಮಾಣ ನಿಯಂತ್ರಿಸಬೇಕೆಂದರೆ ನಿತ್ಯ 54 ಯೂನಿಟ್ ಇನ್ಸುಲಿನ್ ತೆಗೆದುಕೊಳ್ಳಬೇಕಿದೆ ಎಂದು ಅತಿಶಿ ತಿಳಿಸಿದ್ದಾರೆ.

ಅಸ್ತಮ ರೋಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮನೆ ಆಹಾರ ನೀಡಲು ಕೋರ್ಟ್ ಅನುಮತಿಸಿದೆ. ಅದೇ ರೀತಿ ಸಕ್ಕರೆ ಪ್ರಮಾಣ ಸಾಧಾರಣ ಮಟ್ಟಕ್ಕೆ ಇಳಿಸಲು ಪ್ರತ್ಯೇಕ ಆಹಾರ ಕೂಡ ಅಗತ್ಯವಿದೆ. ಇಂದು ಬಿಜೆಪಿ ತಮ್ಮ ಸಹ ಸಂಸ್ಥೆ ಇ.ಡಿ ಮೂಲಕ ಕೇಜ್ರಿವಾಲ್ ಅವರ ಆರೋಗ್ಯವನ್ನು ಕೆಡಿಸಲು ಪ್ರಯತ್ನಿಸುತ್ತಿದೆ ಎಂದು ಅತಿಶಿ ಹೇಳಿದ್ದಾರೆ.

ಇ.ಡಿ ಕೂಡ ಇಂದು ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ ಮೇಲೆ ಜಾಮೀನು ಪಡೆಯಲು ಸಕ್ಕರೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳಲು ಹೆಚ್ಚು ಸಿಹಿ ಪದಾರ್ಥಗಳನ್ನು ಸೇವಿಸುತ್ತಿದ್ದಾರೆ ಎಂದು ದೆಹಲಿ ಕೋರ್ಟ್‌ಗೆ ದಾಖಲೆ ಸಲ್ಲಿಸಿತ್ತು. ಈ ಬೆಳವಣಿಗೆ ನಂತರ ಅತಿಶಿ ಅವರಿಂದ ಆರೋಪಿ  ಕೇಳಿಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...