90° ತಿರುವುಳ್ಳ ಸೇತುವೆ ನಿರ್ಮಾಣ; 7 ಎಂಜಿನಿಯರ್‌ಗಳ ಅಮಾನತು

Date:

ಭೋಪಾಲ್‌ನ ಐಶ್‌ಬಾಗ್ ಪ್ರದೇಶದಲ್ಲಿ ವಾಹನಗಳು ತಿರುವಲು ಸಾಧ್ಯವೇ ಇಲ್ಲದ 90° ತಿರುವುಳ್ಳ ಮೇಲುರಸ್ತೆಯನ್ನ ನಿರ್ಮಾಣ ಕಾಮಗಾರಿ ಸಂಬಂಧ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ದೋಷಪೂರಿತ ವಿನ್ಯಾಸದಲ್ಲಿ ಸೇತುವೆ ನಿರ್ಮಿಸಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಅಮಾನತುಗೊಂಡಿದ್ದಾರೆ.

ಐಶ್‌ಬಾಗ್‌ನ ರೈಲ್ವೇ ಹಳಿಗಳನ್ನು ದಾಟಲು ವಾಹನಗಳ ಕಾಯುವಿಕೆಯನ್ನು ತಪ್ಪಿಸಲು ಮೇಲುರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ, ಸೇತುವೆಯು 90° ಇರುವ ಕಾರಣ, ಇದರಲ್ಲಿ ವಾಹನ ಸಂಚಾರ ಸಾಧ್ಯವಿಲ್ಲ. ಸೇತುವೆಯ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸರ್ಕಾರದ ವಿರುದ್ಧ ಭಾರೀ ಆಕ್ರೋಶ,ಟ್ರೋಲ್, ಟೀಕೆಗಳು ವ್ಯಕ್ತವಾಗಿದ್ದವು.

ಈ ಬೆನ್ನಲ್ಲೇ, ಲೋಕೋಪಯೋಗಿ ಇಲಾಖೆಯ 7 ಮಂದಿ ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ. “ಐಶ್‌ಬಾಗ್ ಆರ್‌ಒಬಿ ನಿರ್ಮಾಣದಲ್ಲಿ ಗಂಭೀರ ಲೋಪಗಳನ್ನು ನಾವು ಗಮನಿಸಿದ್ದೇವೆ. ತನಿಖೆಗೆ ಆದೇಶಿಸಲಾಗಿದೆ. ವಿಚಾರಣಾ ವರದಿಯ ಆಧಾರದ ಮೇಲೆ, ಎಂಟು ಪಿಡಬ್ಲ್ಯೂಡಿ ಎಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲಾಖೆಯ ಇಬ್ಬರು ಮುಖ್ಯ ಎಂಜಿನಿಯರ್‌ಗಳು ಸೇರಿದಂತೆ ಏಳು ಎಂಜಿನಿಯರ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ನಿವೃತ್ತ ಸೂಪರಿಂಟೆಂಡೆಂಟ್ ಎಂಜಿನಿಯರ್ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ನಿರ್ಮಾಣ ಸಂಸ್ಥೆ ಮತ್ತು ವಿನ್ಯಾಸ ಸಲಹೆಗಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಆರ್‌ಒಬಿದಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಲು ಸಮಿತಿ ರಚಿಸಲಾಗಿದೆ. ಮಾರ್ಪಾಡುಗಳಾದ ಬಳಿಕವೇ ಆರ್‌ಒಬಿ ಉದ್ಘಾಟನೆಯಾಗಲಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...