ಆಂಧ್ರದಲ್ಲಿ ಕಲುಷಿತ ಹಾಲು ಸೇವನೆ: ಮೃತರ ಸಂಖ್ಯೆ 13ಕ್ಕೆ ಏರಿಕೆ

Date:

ಆಂಧ್ರ ಪ್ರದೇಶದ ಈಶಾನ್ಯ ಗೋದಾವರಿ ಜಿಲ್ಲೆಯಲ್ಲಿ ಕಲಬೆರಕೆಯ ಕಲುಷಿತ ಹಾಲು ಸೇವನೆಯಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಏಳು ಮಂದಿ ಆಂಧ್ರ ಪ್ರದೇಶದ ರಾಜಮಹೇಂದ್ರವರಂ ಜಿಲ್ಲೆಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗುರುವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂತ್ರ ಕಟ್ಟುವಿಕೆ, ವಾಂತಿ, ಹೊಟ್ಟೆ ನೋವು ಹಾಗೂ ಡಯಾಲಿಸಿಸ್ ಅಗತ್ಯವಿರುವ ತೀವ್ರ ಮೂತ್ರಪಿಂಡ ವೈಫಲ್ಯದಂತಹ ರೋಗಲಕ್ಷಣಗಳನ್ನು ಹೊಂದಿದ್ದ ಹಲವಾರು ಸ್ಥಳೀಯ ನಿವಾಸಿಗಳು ಫೆಬ್ರವರಿ 22ರಂದು ಆಸ್ಪತ್ರೆಗಳಿಗೆ ದಾಖಲಾದಾಗ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಲಾಲಚೆರುವಿನ ಚೌಡೇಶ್ವರನಗರ ಮತ್ತು ಸ್ವರೂಪ್ ನಗರ ಪ್ರದೇಶಗಳಲ್ಲಿ ಕಲಬೆರಕೆ ಮಾಡಿ ಪೂರೈಸಲಾಗಿದ್ದ ಹಾಲನ್ನು ಸೇವಿಸಿದ ಬಳಿಕ ಈ ಪ್ರದೇಶದ ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯುದ್ಧ ನಿಲ್ಲಲ್ಲ, ಹಾರ್ಮುಜ್ ತೆರೆಯಲ್ಲ: ಟ್ರಂಪ್‌ಗೆ ಇರಾನ್ ಸಡ್ಡು

“ಕಲಬೆರಕೆ ಹಾಲು ಪ್ರಕರಣ ಎಂದು ಶಂಕಿಸಲಾಗಿರುವ ಈ ಘಟನೆಯಲ್ಲಿ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಉಳಿದ ಏಳು ಮಂದಿ ರಾಜಮಹೇಂದ್ರವರಂ ಜಿಲ್ಲೆಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೋಗಲಕ್ಷಣಗಳು ಹಾಲು ಕಲಬೆರಕೆಯಾಗಿರುವುದನ್ನು ಸೂಚಿಸುತ್ತಿದ್ದು, ಇದೇ ಈ ಸಾವುಗಳಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ವಿವಿಧ ಇಲಾಖೆಗಳು ಸಮನ್ವಯದ ಕ್ರಮಕ್ಕೆ ಚಾಲನೆ ನೀಡಿವೆ.

ಈ ನಡುವೆ, ಈ ಘಟನೆಯೊಂದಿಗೆ ಸಂಬಂಧ ಹೊಂದಿರುವ ಹಾಲು ಘಟಕವನ್ನು ಆಹಾರ ಸುರಕ್ಷತಾ ಇಲಾಖೆ ಪರಿಶೀಲನೆ ನಡೆಸಿದ್ದು, ಹಾಲು, ಪನೀರ್, ತುಪ್ಪ, ಕುಡಿಯುವ ನೀರು ಹಾಗೂ ವಿನೆಗರ್ ಮಾದರಿಗಳನ್ನು ನಿಗಾವಹಿಸಲು ಮತ್ತು ಕ್ರಮ ಕೈಗೊಳ್ಳಲು ಸಂಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...