ಶಿಂದೆ ಟೀಕೆ | ತನಿಖೆ ಮುಂದುವರಿಸಿ, ಕುನಾಲ್ ಕಾಮ್ರಾರನ್ನು ಬಂಧಿಸಬೇಡಿ: ಬಾಂಬೆ ಹೈಕೋರ್ಟ್‌

Date:

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ವಿರುದ್ಧ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ನೀಡಿದ ಹೇಳಿಕೆ ಸಂಬಂಧಿಸಿದಂತೆ ತನಿಖೆಯನ್ನು ಮುಂದುವರೆಸಲು ಪೊಲೀಸರಿಗೆ ಬಾಂಬೆ ಹೈಕೋರ್ಟ್ ತಿಳಿಸಿದೆ. ಆದರೆ ಕಾಮ್ರಾರ ಬಂಧನ ಮಾಡಬೇಡಿ ಎಂದು ಹೈಕೋರ್ಟ್ ಶುಕ್ರವಾರ ಹೇಳಿದೆ.

ಕಾರ್ಯಕ್ರಮವೊಂದರಲ್ಲಿ ಕುನಾಲ್ ಕಾಮ್ರಾ ಶಿಂದೆ ಅವರನ್ನು ‘ದ್ರೋಹಿ’ ಎಂದು ಕರೆದಿದ್ದರು. ತನ್ನ ಪಕ್ಷವನ್ನೇ ಇಬ್ಭಾಗ ಮಾಡಿದ ದ್ರೋಹಿ ಎಂದಿದ್ದರು. ಇವೆಲ್ಲವನ್ನು ಹಾಡಿನ ಮೂಲಕ ವಿವರಿಸಿದ್ದರು. ಎಲ್ಲಿಯೂ ಶಿಂದೆ ಹೆಸರನ್ನು ಬಳಸದ ಕಾಮ್ರಾ ‘ಥಾಣೆಯ ನಾಯಕ’ ಎಂದು ಹೇಳಿದ್ದರು.

ಇದನ್ನು ಓದಿದ್ದೀರಾ? ಶಿಂದೆ ಟೀಕೆ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಂದೆ ಬೆಂಬಲಿಗರು ಕಾಮ್ರಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕಿಡಿಗೇಡಿಗಳು ಈ ವಿಡಿಯೋ ರೆಕಾರ್ಡ್ ಆದ ಸ್ಟುಡಿಯೋ ಇದ್ದ ಹೊಟೇಲ್‌ ಮೇಲೆ ದಾಳಿ ನಡೆಸಿ ಹಲವು ವಸ್ತುಗಳ ಧ್ವಂಸ ಮಾಡಿದ್ದರು. ಈ ಬಗ್ಗೆ ಪ್ರಕರಣವೂ ದಾಖಲಾಗಿದೆ.

ಇವೆಲ್ಲವುದರ ನಡುವೆ ಶಿವಸೇನೆ ನಾಯಕರು ಕಾಮ್ರಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬೆದರಿಕೆಯನ್ನೂ ಹಾಕಿದ್ದರು. ಜೊತೆಗೆ ಕಾಮ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕುನಾಲ್ ಕಾಮ್ರಾ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಾರಂಗ್ ಕೊತ್ವಾಲ್ ಮತ್ತು ಎಸ್ ಎಂ ಮೋಡಕ್ ಅವರ ಪೀಠವು ಪುರಸ್ಕರಿಸಿದೆ.

ಅಂದರೆ ಕಾಮ್ರಾ ಅವರ ಅರ್ಜಿಯನ್ನು ದೀರ್ಘವಾಗಿ ವಿಚಾರಣೆಗೆ ಒಳಪಡಿಸಲಾಗುವುದು. ಈ ಅರ್ಜಿಯ ವಿಚಾರಣೆಯ ವೇಳೆ ಕುನಾಲ್ ಕಾಮ್ರಾ ಅವರು ಬಂಧಿಸಬಾರದು ಎಂದು ಪೀಠ ಹೇಳಿದೆ.

ಇದನ್ನು ಓದಿದ್ದೀರಾ? ‘ಯಾರು ಅವರು, 2 ನಿಮಿಷದ ಕಾಮೆಡಿಯನ್’: ಕುನಾಲ್ ಕಾಮ್ರಾ ಬಗ್ಗೆ ಕಂಗನಾ ರಣಾವತ್ ಕಿಡಿ

ಹಾಗೆಯೇ ಪೊಲೀಸರು ಕಾಮ್ರಾ ಅವರ ಹೇಳಿಕೆಯನ್ನು ದಾಖಲಿಸಲು ಬಯಸಿದರೆ ಕಾಮ್ರಾ ಪ್ರಸ್ತುತ ವಾಸವಿರುವ ಚೆನ್ನೈನಲ್ಲಿ ನಡೆಸಬೇಕು. ಮೊದಲೇ ಸೂಚನೆ ನೀಡಬೇಕು ಎಂದೂ ಕೋರ್ಟ್ ತಿಳಿಸಿದೆ.

ಇನ್ನು ಕುನಾಲ್ ಕಾಮ್ರಾ ಅರ್ಜಿಯಲ್ಲಿ ತಾನು ತಮಿಳುನಾಡು ನಿವಾಸಿಯಾಗಿ ಎಂದು ಹೇಳಿದ್ದಾರೆ. ಕಾರ್ಯಕ್ರಮದ ನಂತರ ಬರುತ್ತಿರುವ ಕೊಲೆ ಬೆದರಿಕೆಗಳಿಂದಾಗಿ ಮಹಾರಾಷ್ಟ್ರಕ್ಕೆ ಬರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...