ವಿವಾದ | ಕೇರಳವನ್ನು ‘ಮಿನಿ ಪಾಕಿಸ್ತಾನ’ ಎಂದ ಬಿಜೆಪಿ ಸಚಿವ

Date:

ಕೇರಳವನ್ನು ‘ಮಿನಿ ಪಾಕಿಸ್ತಾನ’ ಎಂದು ಮಹಾರಾಷ್ಟ್ರ ಬಿಜೆಪಿ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೆಟ್ಟಿಗರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ರಾಣೆ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪುರಂದರ್‌ನಲ್ಲಿ ನಡೆದ ‘ಶಿವ ಪ್ರತಾಪ್ ದಿನ್’ ಕಾರ್ಯಕ್ರಮದಲ್ಲಿ ಮಾತನಾಡಿದ ರಾಣೆ, “ಕೇರಳ ಮಿನಿ ಪಾಕಿಸ್ತಾನ. ಕೇರಳದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಂಸದರಾಗಿ ಸಂಸತ್ತಿಗೆ ಆಯ್ಕೆಯಾಗುವುದಕ್ಕೆ ಇದೇ ನಿಖರ ಕಾರಣ. ಎಲ್ಲ ಭಯೋತ್ಪಾದಕರು ಅವರಿಗೆ ಮತ ನೀಡಿದ್ದಾರೆ” ಎಂದು ಹೇಳಿ, ವಿವಾದ ಸೃಷ್ಟಿಸಿದ್ದಾರೆ.

”ಕೇರಳ ಮಿನಿ ಪಾಕಿಸ್ತಾನವಾಗಿರುವ ಕಾರಣದಿಂದಲೇ ರಾಹುಲ್‌ ಗಾಂಧಿ ಮತ್ತು ಅವರ ಸಹೋದರಿ ಅಲ್ಲಿ ಗೆದ್ದಿದ್ದಾರೆ. ಇದು ಸತ್ಯ; ತಮ್ಮೊಂದಿಗೆ ಭಯೋತ್ಪಾದಕರನ್ನು ಕರೆದುಕೊಂಡು ಹೋದ ಬಳಿಕ ಅವರು ಸಂಸದರಾಗಿದ್ದಾರೆ” ಎಂದು ರಾಣೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಣೆ ಅವರ ಹೇಳಿಕೆಯ ವಿರುದ್ಧ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಪಾಟೀಲ್ ಕಿಡಿಕಾರಿದ್ದಾರೆ. ರಾಣೆ ಹೇಳಿಕೆಯ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಣೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

“ನಿತೇಶ್ ರಾಣೆ ಅವರು ಮಹಾರಾಷ್ಟ್ರದಲ್ಲಿ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವುದಾಗಿ ಪ್ರಮಾಣ ಮಾಡಿ ಸಚಿವರಾಗಿದ್ದಾರೆ. ಆದರೆ, ಅವರು ಕೇರಳವನ್ನು ಪಾಕಿಸ್ತಾನವೆಂದೂ, ಮತದಾರರನ್ನು ಭಯೋತ್ಪಾದಕರು ಎಂದು ಕರೆಯುತ್ತಿದ್ದಾರೆ. ಈ ವ್ಯಕ್ತಿಗೆ ಸಚಿವ ಸಂಪುಟದಲ್ಲಿ ಉಳಿಯಲು ಹಕ್ಕಿದೆಯೇ” ಎಂದು ಅತುಲ್ ಲೋಂಧೆ ಪ್ರಶ್ನಿಸಿದ್ದಾರೆ.

ಹಿರಿಯ ಕಾಂಗ್ರೆಸ್ ಶಾಸಕ ಮತ್ತು ಮಾಜಿ ವಿರೋಧ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ ಅವರು, ”ಸಚಿವರೊಬ್ಬರು ಕೇರಳವನ್ನು ಪಾಕಿಸ್ತಾನ ಎಂದು ಕರೆಯುತ್ತಿರುವುದರಲ್ಲಿ ಕೇಂದ್ರ ಸರ್ಕಾರದ ಪಾತ್ರವೇನು? ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಮಹಾಯುತಿ ಸರ್ಕಾರದ ಮಂತ್ರಿಗಳ ಅರ್ಹತೆಯ ಮಾನದಂಡವು ಸಮುದಾಯಗಳಲ್ಲಿ ದ್ವೇಷವನ್ನು ಸೃಷ್ಟಿಸುವುದು ಮತ್ತು ಪ್ರಚೋದನಕಾರಿ ಭಾಷೆ ಬಳಸುವುದೇ?” ಎಂದು ಕಾಂಗ್ರೆಸ್ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...