ಸಂವಿಧಾನದಲ್ಲಿ ‘ಜಾತ್ಯತೀತ ಮತ್ತು ಸಮಾಜವಾದ’ ಪದಗಳು ತೆಗೆಯಬೇಕು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

Date:

ಸಂವಿಧಾನದ ಪ್ರಸ್ತಾವನೆಯಲ್ಲಿರುವ ಸಮಾಜವಾದ ಮತ್ತು ಜಾತ್ಯತೀತ ಪದಗಳಿಗೆ ಭಾರತದ ನಾಗರೀಕತೆಯಲ್ಲಿ ಯಾವುದೇ ಜಾಗವಿಲ್ಲ ಹೀಗಾಗಿ ಸಂವಿಧಾನ ಪೀಠಿಕೆಯಲ್ಲಿ ಅವೆರಡು ಪದಗಳು ಅಪ್ರಸ್ತುತ ಎಂದು ಅಸ್ಸಾಂ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಅಷ್ಟೇ ಅಲ್ಲದೆ ಅವೆರಡು ಪದಗಳು ಪಾಶ್ಚಾತ್ಯ ಪರಿಕಲ್ಪನೆಗಳಾಗಿದ್ದು ಈ ಪದಗಳನ್ನು ಸಂವಿಧಾನದಿಂದ ತೆಗೆದುಹಾಕಬೇಕು’ ಎಂದು ಅವರು ಹೇಳಿದ್ದಾರೆ.

ಸಂವಿಧಾನ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತುಹಾಕಬೇಕೆಂಬ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೊಸ ಬೆಂಕಿ ಹಚ್ಚಿರುವುದು ಗಂಭೀರವಾಗಿ ಚರ್ಚೆ ನಡೆಯಬೇಕಾಗಿರುವ ಸಂದರ್ಭದಲ್ಲೇ ಈಗ ಬಿಜೆಪಿಯ ನಾಯಕರು ಸಂವಿಧಾನದ ಪ್ರಸ್ತಾವನೆ ಬಗ್ಗೆ ಕಿಡಿ ಹಚ್ಚುತ್ತಿರುವುದು ಮತ್ತೆ ಸದ್ದಾಗಿದೆ. ಈಗ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿಕೆ ಕೂಡ ದೊಡ್ಡ ಸುದ್ದಿಗೆ ಎಡೆಮಾಡಿಕೊಟ್ಟಿದೆ.

‘ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಸಂವಿಧಾನದ ಪ್ರಸ್ತಾವನೆಯಲ್ಲಿ ಸೇರಿಸಿದ್ದಾರೆ. ಆದರೆ ಅವು ಭಾರತೀಯ ಸಂಸ್ಕೃತಿಗೆ ಹೊಂದಿಕೆ ಆಗದ ಪದಗಳು. ಈಗ ನಾನೊಬ್ಬ ಕಟ್ಟರ್ ಹಿಂದುತ್ವವಾದಿ, ಹೀಗಿರುವಾಗ ಸಂವಿಧಾನದ ಅಡಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೇರಿರುವ ನಾನು ಅದು ಹೇಗೆ ಜಾತ್ಯತೀತನಾಗಲಿ’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

ಭಾರತದ ಜಾತ್ಯತೀತ ಎಂಬ ಪದದ ಅರ್ಥ ತಟಸ್ಥವಾಗಿರುವುದಲ್ಲ, ಬದಲಿಗೆ ಸಕಾರಾತ್ಮವಾಗಿ ಆಲೋಚಿಸುವುದಾಗಿದೆ. ಆದರೆ ಜಾತ್ಯತೀತ ಪದವನ್ನು ಸಂವಿಧಾನದ ಪ್ರಸ್ತಾವನೆಯಲ್ಲಿ ಸೇರಿಸಿದ. ಇಂದಿರಾ ಗಾಂಧಿ ಪಾಶ್ಚಾತ್ಯ ದೃಷ್ಟಿಕೋನದಿಂದ ಭಾರತವನ್ನು ನೋಡಿದವರು. ಹೀಗಾಗಿ ಇದನ್ನು ಪ್ರಸ್ತಾವನೆಯಿಂದ ತೆಗೆದುಹಾಕಬೇಕು’ ಎಂದು ಒತ್ತಿ ಹೇಳಿದ್ದಾರೆ.

ಗುವಾಹಟಿಯಲ್ಲಿ ‘ದಿ ಎಮರ್ಜೆನ್ಸಿ ಡೈರೀಸ್: ಇಯರ್ಸ್ ದಟ್ ಫೋರ್ಜ್ ಎ ಲೀಡರ್ ಎಂಬ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ಕೃತಿಯಲ್ಲಿ ತಾವು ಆರ್‌ಎಸ್‌ಎಸ್ ಪ್ರಚಾರಕರಾಗಿದ್ದ ಸಂದರ್ಭದಲ್ಲಿನ ಕೆಲವೊಂದು ದಾಖಲೆಗಳು, ನರೇಂದ್ರ ಮೋದಿ ಅವರೊಂದಿಗೆ ಮಾಡಿದ ಕೆಲಸಗಳನ್ನು ಈ ಕೃತಿಯಲ್ಲಿ ಉಲ್ಲೇಖಿಸಲಾಗಿದೆ. 1975ರಿಂದ 77ರವರೆಗಿನ ತುರ್ತುಪರಿಸ್ಥಿತಿ ಸಂದರ್ಭ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಇದರ ವಿರುದ್ಧ ನಡೆಸಿದ ಹೋರಾಟವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.

ತುರ್ತು ಪರಿಸ್ಥಿತಿ ಭವಿಷ್ಯದಲ್ಲಿ ಎದುರಾಗಬಾರದು ಎಂದರೆ ತುರ್ತು ಪರಿಸ್ಥಿತಿಯನ್ನು ನಾವು ಮರೆಯಲೂ ಬಾರದು. 1975ರ ಜೂನ್ 25ರಿಂದ 1977ರ ಮಾರ್ಚ್ 21ರವರೆಗೆ ಭಾರತದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು. ಪತ್ರಿಕೆಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ವಿಚಾರಣೆ ಇಲ್ಲದೆ ಬಂಧಿಸಲಾಗುತ್ತಿತ್ತು. ಶಿಕ್ಷಣ, ನಾಗರಿಕ ಹಾಗೂ ಸಮಾಜದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗಿತ್ತು ಎಂದು ಬಿಸ್ವಾ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...