ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಸೋಮವಾರ ಕೇಂದ್ರ ಸರ್ಕಾರ 50 ರೂಪಾಯಿ ಏರಿಸಿದೆ. ಅಡುಗೆ ಅನಿಲ ಬೆಲೆಯನ್ನು ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ.
ಉಜ್ವಲ ಯೋಜನೆ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಈ ಬೆಲೆ ಏರಿಕೆ ಬಿಸಿ ತಟ್ಟಲಿದೆ. 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಸಾಮಾನ್ಯ ಬಳಕೆದಾರರಿಗೆ 803 ರೂಪಾಯಿಯಿಂದ 853 ರೂಪಾಯಿಗೆ ಏರಿಕೆಯಾಗಲಿದೆ. ಉಜ್ವಲ ಯೋಜನೆಯಡಿ ಸಿಲಿಂಡರ್ ಬೆಲೆ 503 ರೂಪಾಯಿಯಿಂದ 553 ರೂಪಾಯಿಗೆ ಹೆಚ್ಚಾಗಲಿದೆ.
ಇದನ್ನು ಓದಿದ್ದೀರಾ? ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕ ತಲಾ 2 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ
ಈಗಾಗಲೇ ಎಲ್‌ಪಿಜಿ ದರ ಭಾರೀ ಏರಿಕೆಯಾಗಿದೆ. 2014ರಲ್ಲಿ 410.50 ರೂಪಾಯಿಯಿದ್ದ ಗೃಹಬಳಕೆ ಎಲ್‌ಪಿಜಿ ಬೆಲೆ, ಕಳೆದ 11 ವರ್ಷಗಳ ಅವಧಿಯಲ್ಲಿ ದುಪ್ಪಟ್ಟಾಗಿ 853 ರೂಪಾಯಿಗೆ ತಲುಪಿದೆ.
ಇನ್ನು ಇಂದೇ ಪೆಟ್ರೋಲ್ ಮತ್ತು ಡೀಸೆಲ್‌ಗೆ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಆದರೆ ಅದರ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದಿಲ್ಲ ಎಂದು ತೈಲ ಕಂಪನಿಗಳು ತಿಳಿಸಿರುವುದಾಗಿ ಸಚಿವಾಲಯ ಹೇಳಿದೆ.





