ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲೇ ಪತ್ರ ವ್ಯವಹಾರ: ಅಮಿತ್ ಶಾ

Date:

ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂಬ ಚರ್ಚೆ ಹಲವು ವರ್ಷಗಳಿಂದ ಮುನ್ನೆಲೆಯಲ್ಲಿದೆ. ಇದೀಗ, ಎನ್‌ಇಪಿ ಜಾರಿಯೊಂದಿಗೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಎನ್‌ಇಪಿ ವಿರುದ್ಧ ದಕ್ಷಿಣದ ರಾಜ್ಯಗಳು ಹೋರಾಟ ನಡೆಸುತ್ತಿವೆ. ಇದೇ ಹೊತ್ತಿನಲ್ಲಿ, ‘ಇದೇ ವರ್ಷದ ಡಿಸೆಂಬರ್‌ನಲ್ಲಿ ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳೊಂದಿಗೆ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಯಲ್ಲಿಯೇ ಪತ್ರ ವ್ಯವಹಾರ ನಡೆಸುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಹಿಂದಿ ಹೇರಿಕೆ ವಿಚಾರದ ಬಗ್ಗೆ ಮಾತನಾಡಿದ ಅಮಿತ್ ಶಾ, “ಕರ್ನಾಟಕ ಸರ್ಕಾರದ ಜೊತೆ ಕನ್ನಡದಲ್ಲಿಯೇ, ತಮಿಳುನಾಡು ಸರ್ಕಾರದ ಜೊತೆ ತಮಿಳಿನಲ್ಲೇ, ಕೇರಳದ ಜೊತೆ ಮಲಯಾಳಂನಲ್ಲೇ ಹಾಗೂ ಇತರ ರಾಜ್ಯಗಳ ಜೊತೆ ಅವುಗಳ ಪ್ರಾದೇಶಿಕ ಭಾಷೆಯಲ್ಲೇ ಕೇಂದ್ರ ಸರ್ಕಾರವು ಪತ್ರ ವ್ಯವಹಾರ ನಡೆಸಲಿದೆ” ಎಂದು ಹೇಳಿದ್ದಾರೆ.

“ಈ ಕ್ರಮವು ತಮ್ಮ ಭ್ರಷ್ಟಾಚಾರವನ್ನು ಮರೆಮಾಚಲು ಭಾಷೆ ಹೆಸರಿನಲ್ಲಿ ರಾಜಕೀಯ ನಡೆಸುವವರಿಗೆ ಪ್ರತ್ಯುತ್ತರವಾಗಿದೆ. ನಾವು ದಕ್ಷಿಣದ ಭಾಷೆಗಳನ್ನು ವಿರೋಧಿಸುತ್ತಿಲ್ಲ. ನಾನು ಗುಜರಾತ್‌ ಮೂಲದವನು. ನಿರ್ಮಲಾ ಸೀತಾರಾಮನ್ ತಮಿಳುನಾಡಿನಿಂದ ಬಂದವರು. ಹೀಗಿರುವಾಗ ನಾವು ಪ್ರಾದೇಶಿಕ ಭಾಷೆಗಳನ್ನು ಹೇಗೆ ವಿರೋಧಿಸುತ್ತೇವೆ. ಅದು ಹೇಗೆ ಸಾಧ್ಯ” ಎಂದು ಅಮಿತ್ ಶಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮಿತ್ ಶಾ ಅವರ ಹೇಳಿಕೆ, ಮೂಗಿಗೆ ತುಪ್ಪ ಸವರಿ ಜನರನ್ನು ಯಾಮಾರಿಸುವ ಹುನ್ನಾರವೆಂದು ಭಾಷಾ ಹೋರಾಟಗಾರರು ಹೇಳಿದ್ದಾರೆ. ಸರ್ಕಾರಗಳ ಜೊತೆ ಪ್ರಾದೇಶಿಕ ಭಾಷೆಯಲ್ಲಿ ಪತ್ರ ವ್ಯವಹಾರ ನಡೆಸಿದರೆ, ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಆಗುತ್ತಿಲ್ಲ ಅಥವಾ ಆಗುವುದಿಲ್ಲ ಎಂದರ್ಥವಲ್ಲ. ಆ ಪತ್ರಗಳಿಗೆ ಮಾತ್ರವೇ ಸೀಮಿತವಾಗುತ್ತದೆ. ಎನ್‌ಇಪಿಯಲ್ಲಿ ತ್ರಿಭಾಷ ಸೂತ್ರ ಅಳವಡಿಸಿ, ಹಿಂದಿ ಕಲಿಸುವುದನ್ನು ಕಡ್ಡಾಯಗೊಳಿಸುವುದೇ ಹಿಂದಿ ಹೇರಿಕೆ ಪ್ರಬಲ ಅಸ್ತ್ರ. ಎನ್‌ಇಪಿಯಲ್ಲಿ ತ್ರಿಭಾಷ ಸೂತ್ರ ತೆಗೆದು, ದ್ವಿಭಾಷ ಸೂತ್ರವನ್ನು ಅಳವಡಿಸಲಿ. ಆ ನಂತರ, ಹಿಂದಿ ಹೇರಿಕೆ ಮಾಡುತ್ತಿಲ್ಲ ಎಂದು ಹೇಳಲಿ. ಆಗ ಒಪ್ಪಿಕೊಳ್ಳಬಹುದು ಎಂದು ಭಾಷಾ ಹೋರಾಟಗಾರರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...