ಭ್ರಷ್ಟಾಚಾರ | ಸರ್ಕಾರಿ ಶಾಲೆಯ ಒಂದು ಗೋಡೆಗೆ 4 ಲೀಟರ್ ಬಣ್ಣ ಬಳಿಯಲು 233 ಕಾರ್ಮಿಕರ ನೇಮಕ

Date:

ಸರ್ಕಾರಿ ಶಾಲೆಯೊಂದರ ಗೋಡೆಗೆ ನಾಲ್ಕು ಲೀಟರ್ ಬಣ್ಣ ಬಳಿಯಲು 168 ಕಾರ್ಮಿಕರನ್ನು ಮತ್ತು 65 ಮೇಸ್ತ್ರಿಗಳನ್ನು ಬಳಸಲಾಗಿದೆ ಎಂದು ಬಿಲ್‌ ಮಾಡಿ, ಹಸೀ-ಹಸೀಯಾಗಿ ಭ್ರಷ್ಟಾಚಾರ ಮಾಡಿರುವ ಘಟನೆ ಮಧ್ಯಪ್ರದೇಶದ ಶಾಡೋಲ್ ಜಿಲ್ಲೆಯ ಸಕಂಡಿಯಲ್ಲಿ ನಡೆದಿದೆ.

ನಕಲಿ ಬಿಲ್ ತಯಾರಿಸಿರುವ ಎರಡು ಬಿಲ್‌ಗಳ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಒಂದರಲ್ಲಿ, ಸಕಂಡಿ ಗ್ರಾಮದ ಸರ್ಕಾರಿ ಶಾಲೆಯ ಒಂದು ಗೋಡೆಗೆ ಬಣ್ಣ ಬಳಿಯಲು 1.07 ಲಕ್ಷ ರೂ. ಖರ್ಚು ಮಾಡಲಾಗಿದೆ ಎಂದು ಸೂಚಿಸಿದ್ದರೆ, ಮತ್ತೊಂದರಲ್ಲಿ, ನಿಪನಿಯ ಗ್ರಾಮದ ಇನ್ನೊಂದು ಶಾಲೆಯಲ್ಲಿ 20 ಲೀಟರ್ ಬಣ್ಣ ಬಳಿಯಲು 2.3 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ ಎಂದು ತೋರಿಸಲಾಗಿದೆ.

ಸಕಂಡಿ ಶಾಲೆಯ ಒಂದು ಗೋಟೆಗೆ ನಾಲ್ಕು ಲೀಟರ್ ಬಣ್ಣ ಬಳಿಯಲು 168 ಕಾರ್ಮಿಕರು ಮತ್ತು 65 ಮೇಸ್ತ್ರಿಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ಬಿಲ್‌ನಲ್ಲಿ ವಿವರಿಸಲಾಗಿದೆ. ಅಂತೆಯೇ, ನಿಪಾನಿಯ ಶಾಲೆಯ 10 ಕಿಟಕಿ ಮತ್ತು ನಾಲ್ಕು ಬಾಗಿಲುಗಳಿಗೆ 20 ಲೀಟರ್ ಬಣ್ಣ ಬಳಿಯಲು 275 ಕಾರ್ಮಿಕರು ಮತ್ತು 150 ಮೇಸ್ತ್ರಿಗಳನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಮತ್ತೊಂದು ಬಿಲ್‌ನಲ್ಲಿ ತೋರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎರಡೂ ಶಾಲೆಗಳಿಗೆ ಬಣ್ಣ ಬಳಿಯುವ ಕಾಮಗಾರಿಯನ್ನು ‘ಸುಧಾರಕ್ ಕನ್ಸ್‌ಸ್ಟ್ರಕ್ಷನ್‌’ ಎಂಬ ಸಂಸ್ಥೆ ಗುತ್ತಿಗೆ ಪಡೆದಿತ್ತು. ಇದೇ ಸಂಸ್ಥೆ ಈ ರೀತಿಯ ಬಿಲ್‌ ಸಿದ್ದಪಡಿಸಿ, ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಲಾಗಿದೆ.

ನಕಲಿ ಬಿಲ್ ಸೃಷ್ಟಿಸಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಫೂಲ್ಸಿಂಗ್ ಮಾರ್ಪಾಚಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...