ಭ್ರಷ್ಟಾಚಾರ ಆರೋಪ: 52 ಪೊಲೀಸ್ ಅಧಿಕಾರಿಗಳ ವಜಾ

Date:

ಪಂಜಾಬ್ ಪೊಲೀಸ್‌ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದ 52 ಮಂದಿ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರವು ಪೊಲೀಸ್‌ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಭ್ರಷ್ಟಾಚಾರ ವಿರೋಧಿ ಅಂದೋಲನದಿಂದಲೇ ಪ್ರವರ್ದಮಾನಕ್ಕೆ ಬಂದು, ರಾಜಕೀಯ ನೆಲೆಯನ್ನು ವಿಸ್ತರಿಸುತ್ತಿರುವ ಎಎಪಿ, ಪಂಜಾಬ್‌ನಲ್ಲಿ ತಮ್ಮ ಭ್ರಷ್ಟಾಚಾರ ವಿರೋಧಿ ಕ್ರಮಗಳನ್ನು ಮುಂದುವರೆಸಿದೆ. 52 ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸುವ ಮೂಲಕ ತನ್ನ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

“ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪ ಹೊತ್ತಿರುವ 52 ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಭ್ರಷ್ಟಾಚಾರದ ಕೃತ್ಯಗಳ ವಿರುದ್ಧದ ಕಠಿಣ ಕ್ರಮಗಳ ಭಾಗವಾಗಿ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇಂತಹ ಕೃತ್ಯಗಳಲ್ಲಿ ಅಧಿಕಾರಿಗಳು ಭಾಗಿಯಾದಲ್ಲಿ, ಕ್ರಮವು ತೀವ್ರವಾಗಿರುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳಿಗೆ ಪಂಜಾಬ್ ಡಿಜಿಪಿ ಗೌರವ್ ಯಾದವ್ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಸೊಕ್ಕು-ಸರ್ವಾಧಿಕಾರ-ಮೆದು ಹಿಂದುತ್ವದ ದಾರಿಯನ್ನು ತೊರೆಯುವರೇ ಕೇಜ್ರೀವಾಲ್?

ಭ್ರಷ್ಟಾಚಾರದ ವಿರುದ್ಧದ ಕ್ರಮಗಳಿಗಾಗಿ ಎಎಪಿ ಸರ್ಕಾರವು ಸಹಾಯವಾಣಿಯನ್ನು ಆರಂಭಿಸಿದೆ. ಸರ್ಕಾರಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಅಥವಾ ರಾಜಕೀಯ ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಕಂಡುಬಂದರೆ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗೆ ‘9501200200’ ಕರೆ ಮಾಡುವಂತೆ ಮನವಿ ಮಾಡಿದೆ.

ಸಾರ್ವಜನಿಕರು ಅಧಿಕಾರಗಳು ಲಂಚ ಪಡೆಯುತ್ತಿರುವ ಅಥವಾ ಬೇಡಿಕೆ ಇಡುತ್ತಿರುವ ಆಡಿಯೋ ಅಥವಾ ವಿಡಿಯೋಗಳನ್ನು ಚಿತ್ರೀಕರಿಸಿ ಸಹಾಯವಾಣಿ ಸಂಖ್ಯೆಗೆ ಕಳುಹಿಸಬಹುದು. ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಭರವಸೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...