ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ಮತ ಎಣಿಕೆ ಆರಂಭ

Date:

ದೇಶದಲ್ಲಿ ಚುನಾವಣೆಯ ಕಾವು ಜೋರಾಗಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್‌​​ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ.

ಹಾಗೆಯೇ ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗಲಿದೆ.

ಜಾರ್ಖಂಡ್ : ಎರಡು ಹಂತದಲ್ಲಿ ಮತದಾನ ನಡೆದಿತ್ತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾರ್ಖಂಡ್ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಎದುರಿಸಿದ ಆಘಾತದಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಚೇತರಿಸಿಕೊಳ್ಳಲಿದೆಯೇ ಅಥವಾ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ತನ್ನ ಸಾಧನೆಯನ್ನು ಉತ್ತಮಪಡಿಸಿಕೊಳ್ಳಲಿದೆಯೇ ಎಂಬುದು ಈ ಫಲಿತಾಂಶದಿಂದ ಗೊತ್ತಾಗಲಿದೆ.

ಯಾವ ಪಾಳಯ ಸರಳ ಬಹುಮತದತ್ತ ಸಾಗುತ್ತಿದೆ ಎಂಬುದು ಮಧ್ಯಾಹ್ನದ ವೇಳೆಗೆ ಬಹುತೇಕ ನಿಚ್ಚಳವಾಗಲಿದೆ. ಜಾರ್ಖಂಡ್‌ನ ಮೊದಲ ಹಂತದ ಮತದಾನ ನ. 13ರಂದು ನಡೆದಿತ್ತು. ಜಾರ್ಖಂಡ್‌ನ ಎರಡನೇ ಹಂತದ 38 ಕ್ಷೇತ್ರಗಳಿಗೆ ನ.20ರಂದು ಮತದಾನ ನಡೆದಿತ್ತು.

ಮಹಾರಾಷ್ಟ್ರದಲ್ಲಿ ತೀವ್ರ ಪೈಪೋಟಿ

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಮತ್ತು ವಿರೋಧ ಪಕ್ಷವಾದ ಮಹಾ ವಿಕಾಸ ಅಘಾಡಿ (MVA) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ನವೆಂಬರ್ 20 ರಂದು ಮತದಾನ ನಡೆದಿದ್ದು, ಫಲಿತಾಂಶ ಇಂದು (ನವೆಂಬರ್ 23) ಪ್ರಕಟವಾಗಲಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಬೆಳಿಗ್ಗೆ 9.30 ರ ಸುಮಾರಿಗೆ EVM ಮತಗಳ ಎಣಿಕೆ ಆರಂಭವಾಗುವ ನಿರೀಕ್ಷೆಯಿದೆ.

ಬಿಜೆಪಿ ನೇತೃತ್ವದ ಮಹಾಯುತಿ ಮತ್ತೆ ಅಧಿಕಾರಕ್ಕೆ ಬರುವ ಗುರಿಯೊಂದಿಗೆ ಸ್ಪರ್ಧಿಸುತ್ತಿದೆ. ಮಹಾ ವಿಕಾಸ ಅಘಾಡಿ ಮಹಾಯುತಿಯನ್ನು ಸೋಲಿಸಲು ಪ್ರಯತ್ನಿಸುತ್ತಿದೆ. ಮಹಾಯುತಿಯಲ್ಲಿ ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಸೇರಿವೆ. ಮಹಾ ವಿಕಾಸ ಅಘಾಡಿಯಲ್ಲಿ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (NCP-SP) ಸೇರಿವೆ.

ವಯನಾಡು: ಪ್ರಿಯಾಂಕಾ ಗಾಂಧಿ ಮುನ್ನಡೆ

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಕಾಂಗ್ರೆಸ್​ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು 2,750 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...