ಮದುವೆಯಾದ ಮಾರನೆ ದಿನವೇ ಹೃದಯಾಘಾತದಿಂದ ದಂಪತಿ ನಿಧನ

Date:

ಮದುವೆಯಾದ ಒಂದು ದಿನದ ನಂತರ ನವ ದಂಪತಿ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ ಜಿಲ್ಲೆಯಲ್ಲಿ ನಡೆದಿದೆ.

24 ವರ್ಷದ ಪ್ರತಾಪ್ ಯಾದವ್‌ ಹಾಗೂ 20 ವರ್ಷದ ಪುಷ್ಪಾ ಎಂಬ ವಧುವಿನ ಜೊತೆ ಮೇ 30 ರಂದು ಬಹ್ರೈಚ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ವಿವಾಹವಾಗಿದ್ದರು. ಮದುವೆಯಾದ ನಂತರ ಕೆಲವು ವಿಧಿವಿಧಾನಗಳನ್ನು ನೆರವೇರಿಸಿದ ನಂತರ ರಾತ್ರಿ ದಂಪತಿ ಕೋಣೆಯಲ್ಲಿ ಮಲಗಿದ್ದಾರೆ.

ಮೇ 31 ರಂದು ಮಾರನೇ ದಿನ ಬೆಳಗ್ಗೆ ಸುಮಾರು ಹೊತ್ತು ಇಬ್ಬರು ಎದ್ದೇಳದ ಕಾರಣ ಸಂಬಂಧಿಕರು ಬಾಗಿಲು ತಟ್ಟಿದ್ದಾರೆ. ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಬಾಗಿಲು ಮುರಿದು ನೋಡಿದಾಗ ಇಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ತವ್ಯಕ್ಕೆ ಮರಳಿದ ಕುಸ್ತಿಪಟುಗಳು: ಪ್ರತಿಭಟನೆ ಮುಂದುವರಿಯಲಿದೆ ಎಂದ ಸಾಕ್ಷಿ, ಪುನಿಯಾ

ನವದಂಪತಿಯ ಸಾವಿನ ಹಿಂದಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ಕೋಣೆಗೆ ವಿಧಿವಿಜ್ಞಾನ ತಜ್ಞರ ತಂಡವನ್ನು ಕರೆಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿಯು ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ ಎಂದು ಬಲರಾಂಪುರದ ಪೊಲೀಸ್ ಅಧೀಕ್ಷಕ ಪ್ರಶಾಂತ್ ವರ್ಮಾ ಹೇಳಿದ್ದಾರೆ.

ದಂಪತಿಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆ ಇದ್ದ ಬಗ್ಗೆ ಇತಿಹಾಸವಿಲ್ಲ. ಅಲ್ಲದೆ ಬಲವಂತವಾಗಿ ಕೋಣೆಗೆ ಪ್ರವೇಶಿಸಿದ ಯಾವುದೇ ಲಕ್ಷಣಗಳು ಅಥವಾ ಅವರ ದೇಹದ ಮೇಲೆ ಗಾಯದ ಗುರುತುಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ದಂಪತಿ ಒಂದೇ ಸಮಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಶವಪರೀಕ್ಷೆಯ ಫಲಿತಾಂಶ ಆತಂಕವನ್ನು ಹೆಚ್ಚಿಸಿವೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...