ಷೇರುಪೇಟೆ ವಂಚನೆ | ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್, ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

Date:

ಷೇರು ಮಾರುಕಟ್ಟೆ ವಂಚನೆ ಮತ್ತು ನಿಯಂತ್ರಕ ಉಲ್ಲಂಘನೆ ಆರೋಪದ ಮೇಲೆ ಮಾಜಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಶನಿವಾರ ಮುಂಬೈನ ವಿಶೇಷ ನ್ಯಾಯಾಲಯವು ಆದೇಶಿಸಿದೆ ಎಂದು ವರದಿಯಾಗಿದೆ.

ಬುಚ್ ಮತ್ತು ಇತರರ ಮೇಲಿರುವ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸ್ಥಳೀಯ ಪತ್ರಕರ್ತರೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶ ಶಶಿಕಾಂತ್ ಏಕನಾಥರಾವ್ ಅವರ ಪೀಠ ನಡೆಸಿದ್ದು, ಎಫ್‌ಐಆರ್ ದಾಖಲಿಸಲು ಆದೇಶಿಸಿದ್ದಾರೆ. ಸೆಬಿ ಮಾಜಿ ಅಧ್ಯಕ್ಷೆ ಮೇಲೆ ವಿರುದ್ಧ ಆರ್ಥಿಕ ವಂಚನೆ, ನಿಯಂತ್ರಕ ಉಲ್ಲಂಘನೆ ಮತ್ತು ಭ್ರಷ್ಟಾಚಾರದಂತಹ ಗಂಭೀರ ಆರೋಪವಿದೆ.

ಇದನ್ನು ಓದಿದ್ದೀರಾ? ಪಿಎಸಿ ಸಭೆಗೆ ಎರಡನೇ ಬಾರಿಯೂ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಗೈರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಯಂತ್ರಣ ವೈಫಲ್ಯಗಳು ಮತ್ತು ಒಪ್ಪಂದದ ಪ್ರಾಥಮಿಕ ಪುರಾವೆಗಳಿವೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯವಿದೆ. ಈ ಪ್ರಕರಣದಲ್ಲಿ ನ್ಯಾಯಾಂಗ ಹಸ್ತಕ್ಷೇಪದ ಅಗತ್ಯವಿದೆ” ಎಂದು ನ್ಯಾಯಾಧೀಶ ಏಕನಾಥರಾವ್ ತೀರ್ಪು ನೀಡಿದ್ದಾರೆ.

ಶುಕ್ರವಾರ ಸೆಬಿ ಮುಖ್ಯಸ್ಥೆಯಾಗಿ ಬುಚ್ ತಮ್ಮ ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದಾರೆ. ಇದಾದ ಒಂದು ದಿನದ ಬಳಿಕವೇ ಕೋರ್ಟ್ ಬುಚ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ. ತುಹಿನ್ ಕಾಂತ ಪಾಂಡೆ ಸದ್ಯ ಸೆಬಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಮಾಧವಿ ಮೇಲಿರುವ ಆರೋಪವೇನು?

ಸೆಬಿ ಅಧ್ಯಕ್ಷೆಯಾಗಿದ್ದಾಗ ಮಾಧವಿ ಅವರು ಮಾನದಂಡಗಳನ್ನು ಪಾಲಿಸದ ಸಂಸ್ಥೆಗಳನ್ನು ಪಟ್ಟಿ ಮಾಡಲು ಅನುಮತಿ ನೀಡಿದ್ದು ಇದರಿಂದಾಗಿ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ನಷ್ಟವಾಗಿದೆ. ಸೆಬಿ ಮತ್ತು ಕಾರ್ಪೊರೇಟ್ ಸಂಸ್ಥೆಗಳ ನಡುವಿನ ಒಪ್ಪಂದ, ಆಂತರಿಕ ವ್ಯಾಪಾರದಿಂದಾಗಿ ಜನರಿಗೆ ವಂಚನೆಯಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಅದಾನಿಗಾಗಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ರಕ್ಷಣೆಗೆ ನಿಂತರೆ ಮೋದಿ?

ಹಲವು ಬಾರಿ ಸಂಬಂಧಪಟ್ಟ ಪೊಲೀಸ್ ಠಾಣೆ ಮತ್ತು ನಿಯಂತ್ರಕ ಸಂಸ್ಥೆಗಳನ್ನು ಸಂಪರ್ಕಿಸಿದರೂ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ. ಈ ಬೆನ್ನಲ್ಲೇ ತನಿಖೆಯನ್ನು ಮೇಲ್ವಿಚಾರಣೆ ಮಾಡುವುದಾಗಿ ನ್ಯಾಯಾಲಯ ಹೇಳಿದೆ. ಹಾಗೆಯೇ 30 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಹಿಂಡನ್‌ಬರ್ಗ್ ಮಾಧವಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ವಿರುದ್ಧ ಗಂಭೀರ ಆರೋಪವನ್ನು ಮಾಡಿತ್ತು. ದಂಪತಿ ಅದಾನಿ ಗ್ರೂಪ್‌ಗೆ ಸಂಬಂಧಿಸಿದ ವಿದೇಶಿ ಸಂಸ್ಥೆಗಳಲ್ಲಿ ಹೂಡಿಕೆ ಹೊಂದಿದ್ದಾರೆ, ಆದರೆ ಅದು ಬಹಿರಂಗಪಡಿಸಿಲ್ಲ ಎಂದು ದೂರಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...