ವಕ್ಫ್ ಮಸೂದೆ ಖಂಡಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಪಿಐ

Date:

ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ವಕ್ಫ್ ಮಸೂದೆಯು ಅಂಗೀಕಾರಗೊಂಡ ಬಳಿಕ ಹಲವು ರಾಜಕೀಯ ಪಕ್ಷಗಳು ಸಂಘಟನೆಗಳು ಈ ವಿವಾದಾತ್ಮಕ ಮಸೂದೆ ವಿರುದ್ಧವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸೋಮವಾರ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಕೂಡಾ ಉನ್ನತ ನ್ಯಾಯಾಲಯದಲ್ಲಿ ವಕ್ಫ್ ಮಸೂದೆ ವಿರುದ್ಧವಾಗಿ ಅರ್ಜಿಯನ್ನು ಸಲ್ಲಿಸಿದೆ.

ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಮುಖಾಂತರ ಎಡ ಪಕ್ಷವು ರಿಟ್ ಅರ್ಜಿಯನ್ನು ಸಲ್ಲಿಸಿದೆ. ಸಿಪಿಐ ಅರ್ಜಿ ಸಲ್ಲಿಸಿದ ವಕೀಲ ರಾಮ್ ಶಂಕರ್ ಅವರು, ವಕ್ಫ್ ತಿದ್ದುಪಡಿ ಮಸೂದೆಯು 1995ರ ವಕ್ಫ್ ಕಾಯ್ದೆಯ ಮೂಲವನ್ನೇ ತತ್ವವನ್ನೇ ಬದಲಾಯಿಸುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾದ ಆರ್‌ಜೆಡಿ ನಾಯಕರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ವಕ್ಫ್ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಸಲಾಗಿದೆ. ಇತ್ತೀಚೆಗೆ ನಟ, ಟಿವಿಕೆ ಅಧ್ಯಕ್ಷ ವಿಜಯ್ ಕೂಡಾ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೂಡಾ ವಕ್ಫ್ ವಿರುದ್ಧವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.

ಎಸ್‌ಪಿ ನಾಯಕರು, ಕಾಂಗ್ರೆಸ್ ನಾಯಕರೂ ಕೂಡಾ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸಂಜಿವ್ ಖನ್ನಾ ಅವರ ನೇತೃತ್ವದ ತ್ರಿಸದಸ್ಯ ಪೀಠ ಏಪ್ರಿಲ್ 16ರಂದು ನಡೆಸುವ ಸಾಧ್ಯತೆಯಿದೆ. ನ್ಯಾಯಮೂರ್ತಿ ಸಂಜಯ್ ಕುಮಾರ್, ಕೆವಿ ವಿಶ್ವನಾಥನ್ ಕೂಡಾ ಪೀಠದಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...