ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ 1x ಅನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪದಲ್ಲಿ ಸಮನ್ಸ್ ಜಾರಿ ಮಾಡಲಾಗಿದೆ.
1xBet ಹೆಸರಿನ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಈ ತನಿಖೆಯ ಭಾಗವಾಗಿ, ತನಿಖಾ ಸಂಸ್ಥೆ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಶಿಖರ್ ಧವನ್ ಅವರ ಹೇಳಿಕೆಯನ್ನು ಇಡಿ ದಾಖಲಿಸಲಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಐಪಿಎಲ್ ಬೆಟ್ಟಿಂಗ್ ದಂಧೆ: ಎಗ್ಗಿಲ್ಲದೆ ನಡೆಯುವ ಜೂಜಾಟಕ್ಕಿಲ್ಲ ಕಡಿವಾಣ
39 ವರ್ಷದ ಭಾರತದ ಮಾಜಿ ಕ್ರಿಕೆಟಿಗ ಅಪ್ಲಿಕೇಶನ್ ಜೊತೆ ನಂಟು ಹೊಂದಿದ್ದಾರೆ. ಆದ್ದರಿಂದಾಗಿ ಈ ಬಗ್ಗೆ ವಿಚಾರಣೆ ನಡೆಯಲಿದೆ ಎನ್ನಲಾಗಿದೆ. ಈ ಅಪ್ಲಿಕೇಶನ್ ಮೂಲಕ ಹಲವು ಜನರಿಗೆ ಕೋಟ್ಯಾಂತರ ರೂಪಾಯಿ ವಂಚನೆ ನಡೆದಿದೆ ಎನ್ನಲಾಗಿದೆ. ಹಾಗೆಯೇ ಅಪ್ಲಿಕೇಶನ್ ಭಾರೀ ಪ್ರಮಾಣದ ತೆರಿಗೆಯಿಂದ ತಪ್ಪಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.
ತೆರಿಗೆ ತಪ್ಪಿಸಿಕೊಂಡ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಒಳಗೊಂಡ ಇಂತಹ ಅನೇಕ ಪ್ರಕರಣಗಳನ್ನು ಇಡಿ ತನಿಖೆ ನಡೆಸುತ್ತಿದೆ.
ಕಳೆದ ತಿಂಗಳು, ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ಪ್ರಶ್ನಿಸಿದೆ. ಕೇಂದ್ರ ಸರ್ಕಾರವು ಇತ್ತೀಚೆಗೆ ಕಾನೂನು ತರುವ ಮೂಲಕ ರಿಯಲ್-ಮನಿ ಆನ್‌ಲೈನ್ ಗೇಮಿಂಗ್ ಅನ್ನು ನಿಷೇಧಿಸಿದೆ.





