ಹೈಕೋರ್ಟ್‌ ಜಡ್ಜ್‌ ಮನೆಗೆ ಬೆಂಕಿ; ನಂದಿಸಲು ಹೋದಾಗ ಸಿಕ್ಕಿತು ಕೋಟಿ-ಕೋಟಿ ಹಣ

Date:

ನ್ಯಾಯಾಧೀಶರೊಬ್ಬರು ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಹೋದಾಗ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹಣ ಪತ್ತೆಯಾದ ಬೆನ್ನಲ್ಲೇ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ.

ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಮನೆಯಲ್ಲಿ ಹಣ ಪತ್ತೆಯಾಗಿದೆ. ಅವರನ್ನು ಅಲಹಾಬಾದ್‌ ಹೈಕೋರ್ಟ್‌ ವರ್ಗಾವಣೆ ಮಾಡಿ, ಸುಪ್ರೀಂ ಕೋರ್ಟ್‌ ಕೊಲಿಜಿಯಂ ಆದೇಶಿಸಿದೆ.

ಯಶವಂತ್ ವರ್ಮಾ ಅವರ ಮನೆಯಲ್ಲಿ ಮಾರ್ಚ್‌ 14ರಂದು ಬೆಂಕಿ ಅವಘಡ ಸಂಭವಿಸಿತ್ತು. ಅವಘಡ ಸಂಭವಿಸಿದಾಗ, ವರ್ಮಾ ಅವರು ದೆಹಲಿಯಲ್ಲಿ ಇರಲಿಲ್ಲ. ಹೀಗಾಗಿ, ಅವರ ಕುಟುಂಬಸ್ಥರು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಾಗಿ ಕರೆ ಮಾಡಿದ್ದಾರೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಈ ವೇಳೆ, ಒಂದು ಕೋಣೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಹಣ ಅನಾಮಧೇಯ ಹಣ ಇರಬಹುದು ಎಂದು ಅನುಮಾನಗೊಂಡ ಪೊಲೀಸರು ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿದ್ದಾರೆ. ಸಚಿವಾಲಯವು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ (ಸಿಜೆಐ) ವರದಿ ಸಲ್ಲಿಸಿದೆ. ವರದಿ ಗಮನಿಸಿದ ಸಿಜೆಐ ಸಂಜೀವ್‌ ಖನ್ನಾ ನೇತೃತ್ವದ ಕೊಲಿಜಿಯಂ ನ್ಯಾಯಾಧೀಶ ವರ್ಮಾ ಅವರನ್ನು ವರ್ಗಾವಣೆ ಮಾಡಲು ನಿರ್ಧರಿಸಿದ್ದು, ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...