ಮಣಿಪುರ | ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ

Date:

ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆಯ ಪ್ರಕರಣದ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದಿದೆ. ಬಂಧನದ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಖಚಿತಪಡಿಸಿದ್ದಾರೆ.

“ಫಿಜಾಮ್ ಹೇಮಂಜಿತ್ (20) ಮತ್ತು ಹಿಜಾಮ್ ಲಿಂಟೋಯಿಂಗಂಬಿ(17) ಅವರ ಅಪಹರಣ ಮತ್ತು ಕೊಲೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಇಂದು ಚುರಚಂದಪುರದಿಂದ ಬಂಧಿಸಲಾಗಿದೆ. ಅಪರಾಧ ಮಾಡಿದ ನಂತರ ಪರಾರಿಯಾಗಬಹುದು, ಆದರೆ ಅವರು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅವರು ಮಾಡಿದ ಘೋರ ಅಪರಾಧಕ್ಕೆ ಮರಣದಂಡನೆ ಸೇರಿದಂತೆ ಗರಿಷ್ಠ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ಗುಜರಾತ್‌: ಕಳ್ಳತನದ ಶಂಕೆಯಲ್ಲಿ ದಲಿತ ಎಂಜಿನಿಯರ್‌ಗೆ ಸಹೋದ್ಯೋಗಿಗಳಿಂದ ಥಳಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 3 ರಂದು ಜನಾಂಗೀಯ ಹಿಂಸಾಚಾರ ಪ್ರಾರಂಭವಾದ ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಕಣಿವೆ ಜಿಲ್ಲೆ ಚುರಚಂದ್‌ಪುರದಿಂದ ಪೊಲೀಸರು ಮತ್ತು ಸೇನೆಯು ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ.

ಹಿರಿಯ ಪೊಲೀಸ್ ಅಧೀಕ್ಷಕ ನೆಕ್ಟರ್ ಸಂಜೆನ್ಬಮ್ ಅವರು ಚುರಾಚಂದ್‌ಪುರದಲ್ಲಿ ಶಂಕಿತರನ್ನು ಹಿಡಿಯಲು ಕಠಿಣ ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಶವಗಳನ್ನು ತೋರಿಸುವ ಫೋಟೋಗಳು ಸೆಪ್ಟೆಂಬರ್ 26 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದವು. ನಂತರದಲ್ಲಿ ಮಣಿಪುರದಲ್ಲಿ ಹಿಂಸಾಚಾರ ಮತ್ತಷ್ಟು ಭುಗಿಲೆದ್ದಿತು. ಮಣಿಪುರ ಸರ್ಕಾರ ಇಂಟರ್‌ನೆಟ್‌ ಸ್ಥಗಿತ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...