ಡಾನಾ ಚಂಡಮಾರುತ | ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಡಾನಾ ಚಂಡಮಾರುತವು ತೀವ್ರಗೊಂಡಿದ್ದು ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯತ್ತ ಸಾಗುತ್ತಿದೆ. ಈ ನಡುವೆ ಒಡಿಶಾ, ಪಶ್ಚಿಮ ಬಂಗಾಳದಾದ್ಯಂತ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.

ಡಾನಾ ಚಂಡಮಾರುತ ಶುಕ್ರವಾರ (ಅಕ್ಟೋಬರ್ 25) ಭಿತರ್ಕಾನಿಕಾ ರಾಷ್ಟ್ರೀಯ ಉದ್ಯಾನವನ ಮತ್ತು ಧಮ್ರಾ ಬಂದರಿನ ನಡುವೆ ಭೂಕುಸಿತ ಉಂಟು ಮಾಡುವ ನಿರೀಕ್ಷೆಯಿದೆ. ಗಾಳಿಯ ವೇಗ ಗಂಟೆಗೆ 120 ಕಿಮೀ ತಲುಪುವ ನಿರೀಕ್ಷೆಯಿದೆ. ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಮಳೆ ಅಬ್ಬರ – ಬೆಂಗಳೂರು ತತ್ತರ: ಆರೆಂಜ್ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರದೇಶದ ಮೀನುಗಾರರು ನೀರಿಗೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಇನ್ನು ಈಗಾಗಲೇ ಹಲವು ರೈಲುಗಳು ಮತ್ತು ವಿಮಾನಗಳನ್ನು ರದ್ದು ಮಾಡಿದೆ. ಅಕ್ಟೋಬರ್ 23 ಮತ್ತು 25ರ ನಡುವೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿ.ಮೀ ತಲುಪುವ ನಿರೀಕ್ಷೆಯಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಒಡಿಶಾ ಮತ್ತು ಪಶ್ಚಿಮ ಬಂಗಾಳ ಎರಡರಲ್ಲೂ 56 ತಂಡಗಳನ್ನು ನಿಯೋಜಿಸಿದೆ. ಸೇನೆ, ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್‌ಗಳು ತಮ್ಮ ರಕ್ಷಣಾ ಮತ್ತು ಪರಿಹಾರ ಘಟಕಗಳನ್ನು ಸಿದ್ಧಪಡಿಸಿವೆ.

ಸಹಾಯವಾಣಿ ಬಿಡುಗಡೆ

ಪಶ್ಚಿಮ ಬಂಗಾಳ ಮತ್ತು ಒಡಿಶಾ ಎರಡೂ ತುರ್ತು ಸಂಪರ್ಕ ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ಚಂಡಮಾರುತಕ್ಕೆ ಪ್ರತಿಕ್ರಿಯೆಯಾಗಿ, ಪಶ್ಚಿಮ ಬಂಗಾಳದ ರಾಜಭವನವು 033-22001641 ಫೋನ್‌ ಸಂಖ್ಯೆ ಬಿಡುಗಡೆ ಮಾಡಿದೆ. danarajbhavan@gmail.comಗೆ ಇಮೇಲ್ ಮಾಡಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...