ಒಡಿಶಾ, ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ

Date:

ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಭಾರಿ ಮಳೆಯಾಗುತ್ತಿದೆ.

ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.

ನೆರೆಯ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಮತ್ತು ಕೋಲ್ಕತ್ತಾದಲ್ಲಿ ಚಂಡಮಾರುತದ ಪ್ರಭಾವದಿಂದ ಹೆಚ್ಚು ಮಳೆ ಸುರಿಯುತ್ತಿದೆ. ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋರ್ ಮತ್ತು ಸಮೀಪದ ಜಗತ್‌ಸಿಂಗ್‌ಪುರದಲ್ಲಿ ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುರುವಾರ ಸಂಜೆಯಿಂದ ಸ್ಥಗಿತಗೊಂಡಿದ್ದ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಳು ಇಂದು ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಳ್ಳಲಿದೆ. ವಿಮಾನ ನಿಲ್ದಾಣವನ್ನು ಬಂದ್‌ ಮಾಡಿದ ಪರಿಣಾಮ ಸುಮಾರು 40 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 400ಕ್ಕೂ ಹೆಚ್ಚು ರೈಲುಗಳ ಸೇವೆಯನ್ನು ರದ್ದುಗೊಳಿಸಲಾಗಿದೆ. ಒಡಿಶಾದಲ್ಲಿ 14 ಜಿಲ್ಲೆಗಳ ಸುಮಾರು 6 ಲಕ್ಷ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

‘ಒಡಿಶಾದ ಕೆಲವು ಜಿಲ್ಲೆಗಳಲ್ಲಿ ಸುಮಾರು 21 ಸೆಂ .ಮೀ ನಷ್ಟು ಮಳೆ ಸುರಿಯಬಹುದು’ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ
ಸುಮಾರು ಅರ್ಧದಷ್ಟು ಜನರು ‘ಡಾನಾ’ದ ಪರಿಣಾಮವನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಡಿಶಾ ಸರ್ಕಾರವು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು,
ಜನರ ಸ್ಥಳಾಂತರ ಕಾರ್ಯವನ್ನು ಆರಂಭಿಸಿದೆ.

ಒಡಿಶಾದ 14 ಜಿಲ್ಲೆಗಳಲ್ಲಿ ಸುಮಾರು 288 ರಕ್ಷಣಾ ತಂಡಗಳ ನಿಯೋಜನೆ ಮಾಡಲಾಗಿದೆ. ನಿರಾಶ್ರಿತ ಶಿಬಿರಗಳಲ್ಲಿ ಆಹಾರ, ಕುಡಿಯುವ ನೀರು, ಶಿಶು ಆಹಾರದ ವ್ಯವಸ್ಥೆ. ಜೊತೆಗೆ, ಮಹಿಳಾ ಪೊಲೀಸ್ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...