ಮಿಚಾಂಗ್ ಚಂಡ ಮಾರುತ | ಆಂಧ್ರದಲ್ಲಿ 40 ಲಕ್ಷ ಜನರಿಗೆ ತೊಂದರೆ, ಕನಿಷ್ಠ 17 ಮಂದಿ ಸಾವು

Date:

ಮಿಚಾಂಗ್‌ ಚಂಡಮಾರುತವು ಮಂಗಳವಾರ ಆಂಧ್ರಪ್ರದೇಶದ ಕರಾವಳಿ ದಾಟುತ್ತಿದ್ದಂತೆ ದುರ್ಬಲತೆ ಕಂಡುಬಂದಿದೆ. 770 ಕಿ.ಮೀ. ವೇಗದಲ್ಲಿ ಬಂದ ಚಂಡಮಾರುತದಿಂದ ನೂರಾರು ಹಳ್ಳಿಗಳ ರಸ್ತೆಗಳು, ಗಿಡ ಮರಗಳು ಸೇರಿದಂತೆ ಹಲವು ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದೆ. ಘಟನೆಯಿಂದ ಕೆಲವು ಜಾನುವಾರುಗಳು ಮೃತಪಟ್ಟಿವೆ.

ಆಂಧ್ರಪ್ರದೇಶದ ಮುಖ್ಯಮಂತ್ರಿಗಳ ಕಚೇರಿ ಹಂಚಿಕೊಂಡ ಮಾಹಿತಿಯ ಪ್ರಕಾರ, 25 ಹಳ್ಳಿಗಳ ಮುಳುಗಡೆ ಸೇರಿದಂತೆ 194 ಹಳ್ಳಿಗಳು ಮತ್ತು ಎರಡು ಪಟ್ಟಣಗಳ ಸುಮಾರು 40 ಲಕ್ಷ ಜನರು ಮಿಚಾಂಗ್‌ನಿಂದ ತೊಂದರೆಗೀಡಾಗಿದ್ದಾರೆ.

ಮಿಚಾಂಗ್‌ ಚಂಡಮಾರುತದಿಂದ ಉಂಟಾದ ಮಳೆ ಸಂಬಂಧಿತ ಹಾನಿಯಿಂದ ಆಂಧ್ರ ಮತ್ತು ತಮಿಳುನಾಡಿನಲ್ಲಿ ಕನಿಷ್ಠ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ(ಡಿ.5) ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಸೋಮವಾರ ತಿರುಪತಿ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕನ ಮೇಲೆ ಗುಡಿಸಲು ಗೋಡೆ ಕುಸಿದು ಬಾಲಕ ಮೃತಪಟ್ಟಿದ್ದಾನೆ ಎಂದು ಆಂಧ್ರಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕ ಬಿ ಆರ್ ಅಂಬೇಡ್ಕರ್ ಹೇಳಿದ್ದಾರೆ.

ಬಾಪಟ್ಲಾ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದರೆ, ಸಾವಿಗೆ ಚಂಡಮಾರುತ ಕಾರಣವಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ವಕುಲ್ ಜಿಂದಾಲ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ: ಎಬಿವಿಪಿಯಿಂದ ಫೈರ್ ಬ್ರಾಂಡ್ ನಾಯಕನವರೆಗೆ; ರೇವಂತ್ ರೆಡ್ಡಿ ನಡೆದುಬಂದ ಹಾದಿ

ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಬುಲೆಟಿನ್‌ ಪ್ರಕಾರ, ಸದ್ಯ ಚಂಡಮಾರುತವು ದುರ್ಬಲಗೊಂಡಿದ್ದು, ಬಾಪಟ್ಲಾದಿಂದ ಸುಮಾರು 100 ಕಿಮೀ ಉತ್ತರ ವಾಯವ್ಯ ಮತ್ತು ಖಮ್ಮಮ್‌ನಿಂದ 50 ಕಿಮೀ ಆಗ್ನೇಯಕ್ಕೆ ಕೇಂದ್ರೀಕೃತವಾಗಿದೆ. ಮುಂದಿನ 6 ಗಂಟೆಗಳಲ್ಲಿ ಚಂಡಮಾರುತವು ಮತ್ತಷ್ಟು ದುರ್ಬಲಗೊಳ್ಳಲಿದೆ” ಎಂದು ತಿಳಿಸಿದೆ.

ನೆರೆಯ ಆಂಧ್ರಪ್ರದೇಶದ ಕರಾವಳಿಯನ್ನು ದಾಟಿದ ನಂತರ, ಒಡಿಶಾದ ದಕ್ಷಿಣ ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿ ಚಂಡಮಾರುತದ ಪ್ರಭಾವದಿಂದ ಮಳೆಯ ತೀವ್ರತೆಯನ್ನು ಹೆಚ್ಚಿಸಿವೆ.

ತೀವ್ರ ಚಂಡಮಾರುತದಿಂದ ಆಂಧ್ರದ 10 ಸ್ಥಳಗಳ ಪೈಕಿ ತಿರುಪತಿಯಲ್ಲಿ ಏಳು, ನೆಲ್ಲೂರಿನ ಮೂರು ಸ್ಥಳಗಳಲ್ಲಿ ಮಂಗಳವಾರ 200 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ. ನೆಲ್ಲೂರು ಜಿಲ್ಲೆಯ ಮನುಬೋಳುವಿನಲ್ಲಿ 366.5 ಮಿ.ಮೀ ಮಳೆ ದಾಖಲಾಗಿದೆ.

ಬುಧವಾರ, ವಿಶಾಖಪಟ್ಟಣಂ, ವಿಜಯನಗರಂ, ಅಲ್ಲೂರಿ ಸೀತಾರಾಮ ರಾಜು, ಅನಕಾಪಲ್ಲಿ, ಕಾಕಿನಾಡ, ಕೋನಸೀಮಾ ಮತ್ತು ಏಲೂರು ಜಿಲ್ಲೆಗಳಲ್ಲಿ 64.5 ಮಿಮೀ ನಿಂದ 115.5 ಮಿಮೀ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಂತ್ರಸ್ತ ಜಿಲ್ಲೆಗಳಿಗೆ ಆಂಧ್ರ ಸರ್ಕಾರ ಪರಿಹಾರ ಕಾರ್ಯಗಳಿಗಾಗಿ 23 ಕೋಟಿ ರೂ. ಘೋಷಿಸಿದೆ.

ರೇವಂತ್ ರೆಡ್ಡಿ ಸೂಚನೆ

ಡಿಸೆಂಬರ್ 7 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಕಾಂಗ್ರೆಸ್‌ನ ತೆಲಂಗಾಣ ಘಟಕದ ಮುಖ್ಯಸ್ಥ ಎ ರೇವಂತ್ ರೆಡ್ಡಿ, ರಾಜ್ಯದ ವಿವಿಧ ಜಿಲ್ಲೆಗಳ ಮೇಲೆ ಮಿಚಾಂಗ್ ಚಂಡಮಾರುತದ ಪ್ರಭಾವದ ಬಗ್ಗೆ ಐಎಂಡಿಯ ಎಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಜಾಗರೂಕರಾಗಿರಬೇಕು ಎಂದು ಮಂಗಳವಾರ ಹೇಳಿದ್ದಾರೆ.

ಭತ್ತದ ಬೆಳೆ ಹಾನಿಯಾಗದಂತೆ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರೇವಂತ್ ರೆಡ್ಡಿ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಈ ನಡುವೆ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಭಾರೀ ಹಾನಿಯಿಂದಾಗಿ 5,060 ಕೋಟಿ ರೂಪಾಯಿಗಳ ಮಧ್ಯಂತರ ಆರ್ಥಿಕ ನೆರವು ಕೋರಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಚಂಡಮಾರುತವು ಸಮೀಪಿಸುತ್ತಿದ್ದಂತೆ ಕಳೆದ ಎರಡು ದಿನಗಳಲ್ಲಿ ಎತ್ತರದ ಅಲೆಗಳು ದಕ್ಷಿಣ ಕರಾವಳಿ ಪಟ್ಟಣಗಳಿಗೆ ಅಪ್ಪಳಿಸಿದವು. ಇಡೀ ಹಳ್ಳಿಗಳನ್ನು ಮುಳುಗಿಸಿತು. ಇದರಿಂದ 3,90,000 ಕ್ಕೂ ಹೆಚ್ಚು ಜನರು ತೊಂದರೆಗೊಳಗಾಗಿದ್ದಾರೆ.

ಚೆನ್ನೈನಲ್ಲಿ ಮಳೆ ನಿಂತು ಒಂದು ದಿನ ಕಳೆದರೂ ಇನ್ನೂ ನೀರು ಇಳಿದಿಲ್ಲ. ಪ್ರವಾಹ ಪರಿಹಾರ ಕಾರ್ಯಾಚರಣೆಗಾಗಿ ಚೆನ್ನೈನಲ್ಲಿ ಐಎಎಫ್ ಚೇತಕ್ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...