ಮೊಂತಾ ಚಂಡಮಾರುತ | ಅಕಾಲಿಕ ಮಳೆಯಿಂದ ಬೆಳೆ ನಾಶ; ರೈತ ಆತ್ಮಹತ್ಯೆ

Date:

ಅಕಾಲಿಕ ಮಳೆಯಿಂದಾಗಿ ಬೆಳೆದು ನಿಂತಿದ್ದ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ರೈತರನ್ನು ಕೈಲಾಶ್ ಮೀನಾ ಎಂದು ಹೆಸರಿಸಲಾಗಿದೆ.

ಮೊಂತಾ ಚಂಡಮಾರುತರಿಂದಾಗಿ ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಧ್ಯಪ್ರದೇಶದ ಶಿಯೋಪುರ್ ಮತ್ತು ಮೊರೆನಾ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಸಾಕಷ್ಟು ಹಾನಿ ಉಂಟಾಗಿದೆ.

ರೈತ ಕೈಲಾಶ್‌ ಮೀನಾ ಅವರು ತಮ್ಮ ಮೂರು ಎಕರೆ ಭೂಮಿಯಲ್ಲಿ ಭತ್ತ ಬೆಳೆದಿದ್ದರು. ಆದರೆ, ಧಾರಾಕಾರ ಮಳೆಯಿಂದಾಗಿ ಭೂಮಿ ಸಂಪೂರ್ಣ ಜಲಾವೃತಗೊಂಡಿದ್ದು, ಬೆಳೆ ನಾಶವಾಗಿದೆ. ಪರಿಣಾಮ ಬೀಜಗಳು, ರಸಗೊಬ್ಬರ ಹಾಗೂ ಕಾರ್ಮಿಕರ ಕೂಲಿಗಾಗಿ ವ್ಯಯಿಸಿದ್ದ ಹಣ ಮರಳಿ ಕೈಸೇರಂತಾಗಿದೆ. ನಷ್ಟದಿಂದ ಕಂಗಾಲಾಗಿದ್ದ ರೈತ, ತಮ್ಮ ಜೀವವನ್ನೇ ಅಂತ್ಯಗೊಳಿಸುವ ತಪ್ಪು ನಿರ್ಧಾರ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?

ರೈತನ ಸಾವಿನಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸದ್ದಾರೆ. ಸರ್ಕಾರವು ತ್ವರಿತ ಸ್ಪಂದನೆ ಮತ್ತು ಪರಿಹಾರ ಒದಗಿಸಿದರೆ ಇಂತಹ ಸಾವುಗಳು ಸಂಭವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ಸಂತ್ರಸ್ತ ಕುಟುಂಬಕ್ಕೆ ತಕ್ಷಣದ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾ ಸ್ಥಾಳಕ್ಕೆ ಧಾವಿಸಿದ ಶಿಯೋಪುರ್ ಜಿಲ್ಲಾಧಿಕಾರಿ ಅರ್ಪಿತ್ ವರ್ಮಾ ಅವರು ಸಂತ್ರಸ್ತ ಕುಟುಂಬಕ್ಕೆ 2 ಲಕ್ಷ ರೂ. ಆರ್ಥಿಕ ಸಹಾಯದ ಚೆಕ್ ನೀಡಿದ್ದಾರೆ. ಪರಿಹಾರ ಕ್ರಮಗಳನ್ನು ತ್ವರಿತವಾಗಿ ತೆಗೆದುಕೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...