ಇಂದು ರಾತ್ರಿ ಅಪ್ಪಳಿಸಲಿರುವ ಮೊಂತಾ ಚಂಡಮಾರುತ; ಆಂಧ್ರ, ಒಡಿಶಾದಲ್ಲಿ ಭಾರೀ ಮಳೆಯ ಎಚ್ಚರಿಕೆ

Date:

ಬಂಗಾಳ ಕೊಲ್ಲಿಯಲ್ಲಿ ತೀವ್ರ ಸ್ವರೂಪ ತಾಳಿರುವ ಮೊಂಥಾ ಚಂಡಮಾರುತವು ಇಂದು ರಾತ್ರಿ ಆಂಧ್ರ ಪ್ರದೇಶ ಹಾಗೂ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸಲಿದೆ.

ಗಂಟೆಗೆ 110 ಕಿಮೀ ವೇಗದ ಬಿರುಗಾಳಿಯೊಂದಿಗೆ ಈ ಚಂಡಮಾರುತವು ಆಂಧ್ರ ಮತ್ತು ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆ, ಗಾಳಿಯಿಂದ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಎರಡೂ ರಾಜ್ಯಗಳಲ್ಲಿ ಸ್ಥಳಾಂತರ, ಆಶ್ರಯ ಕೇಂದ್ರಗಳ ತೆರವು ಮತ್ತು ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ.

ಚಂಡಮಾರುತದಿಂದಾಗಿ ಚಿತ್ತೂರು, ತಿರುಪತಿ ಮತ್ತು ಕಾಕಿನಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚಿತ್ತೂರಿನ ನಗರಿಯಲ್ಲಿ ಕುಶಸ್ಥಲಿ ನದಿಯ ಪ್ರವಾಹದಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೃಷ್ಣಾಪುರಂ ಜಲಾಶಯದಿಂದ 1,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ. ಕಾಕಿನಾಡದ ಉಪ್ಪಾಡದಲ್ಲಿ ಕಡಲ ತೀರಕ್ಕೆ ಅಲೆಗಳು ಒಡ್ಡಿವೆ. ಮೀನುಗಾರ ಕುಟುಂಬಗಳನ್ನು ಉಪ್ಪಾಡ, ಸುಬ್ಬಂಪೇಟ ಮತ್ತು ಇತರ ಗ್ರಾಮಗಳಿಂದ ಸ್ಥಳಾಂತರಿಸಲಾಗಿದೆ. ತಿರುಪತಿಯ 75 ಕಿಮೀ ಕರಾವಳಿಯ ಐದು ಮಂಡಲಗಳಲ್ಲಿ ತೀವ್ರ ಮಳೆ, ಬಿರುಗಾಳಿಯ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರತಕ್ಕೆ ಅಪ್ಪಳಿಸಲಿರುವ ‘ಮೋಂತಾ’ ಚಂಡಮಾರುತ: ಕರ್ನಾಟಕದಲ್ಲಿ ಭಾರೀ ಮಳೆ

ಒಡಿಶಾದಲ್ಲಿ ಸನ್ನದ್ಧತೆ
ಒಡಿಶಾದ ಎಂಟು ಜಿಲ್ಲೆಗಳಾದ ಮಲ್ಕಾಂಗಿರಿ, ಕೋರಾಪುಟ್, ಗಜಪತಿ, ಗಂಜಾಮ್ ಮುಂತಾದವುಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 32,000 ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಾಗಿದ್ದು,1,445 ಆಶ್ರಯ ಕೇಂದ್ರಗಳು, 140 ರಕ್ಷಣಾ ತಂಡಗಳು ಸಿದ್ಧವಾಗಿವೆ. ಗಜಪತಿ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗುವ ಆತಂಕವಿದೆ.

ಪಶ್ಚಿಮ ಬಂಗಾಳ,ತಮಿಳುನಾಡಿನಲ್ಲಿ ಮಳೆ
ಪಶ್ಚಿಮ ಬಂಗಾಳದ ಕೋಲ್ಕತ್ತಾ, ಹೌರಾ, ದಕ್ಷಿಣ 24 ಪರಗಣದಲ್ಲಿ ಮಂಗಳವಾರದಿಂದ ಭಾರೀ ಮಳೆಯಾಗುತ್ತಿದ್ದು, ಗಂಟೆಗೆ 80-90 ಕಿಮೀ ವೇಗದ ಗಾಳಿಯ ಎಚ್ಚರಿಕೆ ನೀಡಲಾಗಿದೆ. ಮೀನುಗಾರರಿಗೆ ಕಡಲಿಗೆ ತೆರಳದಂತೆ ಸೂಚನೆ ನೀಡಲಾಗಿದೆ. ತಮಿಳುನಾಡಿನ ಚೆನ್ನೈ, ತಿರುವಳ್ಳೂರು ಸೇರಿ ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.

ವಿಮಾನ, ರೈಲು ಸೇವೆಗೆ ಅಡಚಣೆ
ವಿಶಾಖಪಟ್ಟಣಂ-ಚೆನ್ನೈ ನಡುವಿನ ಆರು ವಿಮಾನಗಳು ರದ್ದಾಗಿವೆ. ರೈಲ್ವೆ ಇಲಾಖೆಯು ಸಮಲೇಶ್ವರಿ ಎಕ್ಸ್‌ಪ್ರೆಸ್, ಹಿರಾಖಂಡ್ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳನ್ನು ರದ್ದುಗೊಳಿಸಿದೆ ಅಥವಾ ಭಾಗಶಃ ನಿಲ್ಲಿಸಿದೆ.

ಈ ಚಂಡಮಾರುತದಿಂದ ಆಂಧ್ರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ತೀವ್ರ ಪರಿಣಾಮ ಉಂಟಾಗಲಿದ್ದು, ಸರ್ಕಾರಗಳು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...